
ನವದೆಹಲಿ(ಜು.36): ಪೆಗಾಸಸ್ ಸ್ಪೈವೇರ್ ಪ್ರಕರಣ ಸಂಸತ್ತಿನಲ್ಲಿ ಭಾರಿ ಪ್ರತಿಧ್ವನಿಸಿದೆ. ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದೆ. ಪೆಗಾಸಸ್ ಬಳಸಿ ಕೇಂದ್ರ ಸರ್ಕಾರ ಫೋನ್ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿದೆ. ತನ್ನ ಫೋನ್ ಪೆಗಾಸಸ್ ಮೂಲಕ ಟ್ಯಾಪ್ ಮಾಡಲಾಗಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ.
ನಿಮ್ಮ ಫೋನ್ ಪೆಗಾಸಸ್ ಬಳಸಿ ಟ್ಯಾಪ್ ಮಾಡಲಿದೆ ಅನ್ನೋ ಅನುಮಾನವಿದ್ದರೆ, ತನಿಖೆಗೆ ಫೋನ್ ಸಲ್ಲಿಕೆ ಮಾಡಿ. ಸತ್ಯಾಂಶ ಹೊರಬರಲಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ತಮ್ಮ ಫೋನ್ ತನಿಖಾ ಸಂಸ್ಥೆಗೆ ಸಲ್ಲಿಸಲಿ. ಭಾರತೀಯ ದಂಡ ಸಂಹಿತಿ(IPC)ಪ್ರಕಾರ ತನಿಖೆ ನಡೆಯಲಿದೆ ಎಂದು ಬಿಜೆಪಿ ವಕ್ತಾರಾ ರಾಜ್ಯವರ್ಧನ್ ರಾಥೋಡ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಪೆಗಾಸಸ್ ಬಳಸಿ ಭಾರತ ಹಾಗೂ ಭಾರತದ ಪ್ರಮುಖ ಸಂಸ್ಥೆಗಳ ಮೇಲೆ ಫೋನ್ ಕದ್ದಾಲಿಕೆ ಮಾಡಿದೆ. ನನ್ನ ಫೋನ್ ಕೂಡ ಕದ್ದಾಲಿಕೆ ಮಾಡಲಾಗಿದೆ. ಹೀಗಾಗಿ ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಇಸ್ರೇಲ್‌ನ ಪೆಗಾಸಸ್ ಸ್ಪೇವೇರ್ ಪ್ರಮುಖವಾಗಿ ಭಯೋತ್ಪಾದಕರ ವಿರುದ್ಧ ಬಳಸಲು ಉಪಯೋಗಿಸಲಾಗುತ್ತದೆ. ಆದರೆ ಮೋದಿ ಹಾಗೂ ಅಮಿತ್ ಶಾ ಈ ಆಯುಧವನ್ನು ಭಾರತದ ಮೇಲೆ ಪ್ರಯೋಗಿಸಲಾಗಿದೆ. ಇದನ್ನು ರಾಜಕೀಯವಾಗಿ ಬಳಸಿದ್ದಾರೆ ಎಂದು ರಾಹುಲ್ ಆರೋಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ