52 ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ: ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ

Published : Jun 19, 2022, 01:08 PM IST
52 ನೇ ವಸಂತಕ್ಕೆ ಕಾಲಿಟ್ಟ ರಾಹುಲ್ ಗಾಂಧಿ: ಸಂಭ್ರಮಾಚರಣೆ ಮಾಡದಂತೆ ಕಾರ್ಯಕರ್ತರಿಗೆ ಮನವಿ

ಸಾರಾಂಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು 52 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೊಸ ಸೇನಾ ನೇಮಕಾತಿ ಅಗ್ನಿವೀರ್ ವಿರುದ್ಧ ದೇಶಾದ್ಯಂತ ಯುವಕರು ಪ್ರತಿಭಟನೆ ನಡೆಸುತ್ತಿದ್ದು, ಪರಿಸ್ಥಿತಿ ಉದ್ವಿಘ್ನಗೊಂಡಿರುವ ಹಿನ್ನೆಲೆಯಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡದಂತೆ ಅವರು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. 

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು 52 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೊಸ ಸೇನಾ ನೇಮಕಾತಿ ಅಗ್ನಿವೀರ್ ವಿರುದ್ಧ ದೇಶಾದ್ಯಂತ ಯುವಕರು ಪ್ರತಿಭಟನೆ ನಡೆಸುತ್ತಿದ್ದು, ಪರಿಸ್ಥಿತಿ ಉದ್ವಿಘ್ನಗೊಂಡಿರುವ ಹಿನ್ನೆಲೆಯಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡದಂತೆ ಅವರು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. 

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ (Jairam Ramesh) ಅವರು ರಾಹುಲ್ ಗಾಂಧಿಯವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ಇದರಲ್ಲಿ ವಯನಾಡ್ ಸಂಸದರೂ (Wayanad MP) ಆಗಿರುವ ರಾಹುಲ್‌ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾವುದೇ ಆಚರಣೆಯನ್ನು ಮಾಡದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

 

ನನ್ನ ಜನ್ಮದಿನದಂದು ಯಾವುದೇ ರೀತಿಯ ಆಚರಣೆಗಳನ್ನು ಮಾಡಬೇಡಿ ಎಂದು ದೇಶಾದ್ಯಂತದ ಇರುವ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನನ್ನ ಹಿತೈಷಿಗಳಿಗೆ ನಾನು ಮನವಿ ಮಾಡುತ್ತೇನೆ. ದೇಶದಲ್ಲಿ ಪ್ರಸ್ತುತ ಪರಿಸ್ಥಿತಿಗಳು ಚಿಂತಾಜನಕವಾಗಿದೆ, ಕೋಟ್ಯಂತರ ಯುವಕರು ದುಃಖಿತರಾಗಿದ್ದಾರೆ, ನಾವು ಅವರ ನೋವನ್ನು ಹಂಚಿಕೊಳ್ಳಬೇಕು. ಯುವಕರು ಮತ್ತು ಅವರ ಕುಟುಂಬಗಳು ಮತ್ತು ಅವರೊಂದಿಗೆ ನಾವು ನಿಲ್ಲಬೇಕು ಎಂದು ಅವರು ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ಎದುರಿಸುತ್ತಿರುವ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಇಡಿಯಿಂದ ಕೆಲವು ದಿನಗಳ ಸಮಯ ಕೇಳಿದ್ದು, ಸೋಮವಾರ ಮತ್ತೆ ಇಡಿ ವಿಚಾರಣೆಗೆ ರಾಹುಲ್ ಹಾಜರಾಗಲಿದ್ದಾರೆ.
ಕೇಂದ್ರ ಸರ್ಕಾರವು ನಾಲ್ಕು ವರ್ಷಗಳ ಅವಧಿಗೆ ಯುವಕರನ್ನು ಮಿಲಿಟರಿಗೆ ನೇಮಿಸಿಕೊಳ್ಳುವ ಅಗ್ನಿಪಥ್ ಯೋಜನೆ ವಿರುದ್ಧ ರಾಹುಲ್ ಧ್ವನಿ ಎತ್ತಿದ್ದಾರೆ. 

ED ಡ್ರಿಲ್, ರಾಹುಲ್ ಗಾಂಧಿ ಪರ ರಮ್ಯಾ ಬ್ಯಾಟಿಂಗ್, ಟ್ವಿಟ್ಟಿಗರು ಫುಲ್ ಕ್ಲಾಸ್

ಶನಿವಾರ (ಜೂನ್ 18) ರಾಹುಲ್ ಗಾಂಧಿ (Rahul Gandhi), ಪ್ರಧಾನಿ ಮೋದಿ ಅವರು ಯುವಕರ ಬೇಡಿಕೆಯನ್ನು ಒಪ್ಪಿಕೊಳ್ಳಬೇಕು ಮತ್ತು ರೈತರ ಒಂದು ವರ್ಷದ ಪ್ರತಿಭಟನೆಯ ನಂತರ ರೈತ ಕಾನೂನುಗಳನ್ನು ಹಿಂತೆಗೆದುಕೊಂಡ ರೀತಿಯಲ್ಲಿ ಅಗ್ನಿಪಥ್ ಯೋಜನೆಯನ್ನು (Agnipath scheme) ಹಿಂಪಡೆಯಬೇಕು ಎಂದು ಹೇಳಿದರು. ಪ್ರಧಾನಿ ಕರಾಳ ಕಾನೂನನ್ನು ಹಿಂಪಡೆಯಬೇಕು ಎಂದು ನಾನು ಮೊದಲೇ ಹೇಳಿದ್ದೆ, ಅದೇ ರೀತಿಯಲ್ಲಿ ಅವರು 'ಮಾಫಿವೀರ್' ಆಗುವ ಮೂಲಕ ದೇಶದ ಯುವಕರ ಬೇಡಿಕೆಯನ್ನು ಒಪ್ಪಿಕೊಂಡು 'ಅಗ್ನಿಪಥ' ಯೋಜನೆಯನ್ನು ಹಿಂಪಡೆಯಬೇಕು ಎಂದು ರಾಹುಲ್ ಗಾಂಧಿ ಹೇಳಿದರು. 

ಹೆರಾಲ್ಡ್ ವಿಚಾರಣೆಗೆ ಟ್ವಿಸ್ಟ್ ಕೊಟ್ಟರಾ ರಾಹುಲ್ ಗಾಂಧಿ? ಸುದೀರ್ಘ ವಿಚಾರಣೆ, ಏನಿದರ ಗುಟ್ಟು?
ಪ್ರಸ್ತುತ ಆಸ್ಪತ್ರೆಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷೆ (Congress president) ಸೋನಿಯಾ ಗಾಂಧಿ (Sonia Gandhi) ಅವರು ಶನಿವಾರ ಹೇಳಿಕೆ  ಬಿಡುಗಡೆ ಮಾಡಿದ್ದು, ಯುವಕರು ಅಗ್ನಿಪಥ ಯೋಜನೆ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಒತ್ತಾಯಿಸಿದ್ದಾರೆ. ಸರ್ಕಾರವು ಹೊಸ ಸಶಸ್ತ್ರ ಪಡೆಗಳ ನೇಮಕಾತಿ ನೀತಿಯನ್ನು ಘೋಷಿಸಿರುವುದು ದುರದೃಷ್ಟಕರವಾಗಿದೆ, ಇದು ಸಂಪೂರ್ಣವಾಗಿ ದಿಕ್ಕಿಲ್ಲದ ಮತ್ತು ಜನರ ಧ್ವನಿಯನ್ನು ನಿರ್ಲಕ್ಷಿಸಿ ಮಾಡಿದ ಯೋಜನೆಯಾಗಿದೆ ಎಂದು ಅವರು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ