ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಮಿತ್ರ ಪಕ್ಷದ ಭಾಗವಾಗಿರುವ ಉದ್ಧವ್ ಠಾಕ್ರೆ ಅವರು ಭಾನುವಾರ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ.
ಹೊಸದಿಲ್ಲಿ/ಮುಂಬೈ (ಮಾರ್ಚ್ 27, 2023): ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದ ವೇಳೆ "ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ" ಎಂಬ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ನಾಯಕನ ಈ ಹೇಳಿಕೆಗೆ ಮಿತ್ರ ಪಕ್ಷ ಉದ್ಧವ್ ಠಾಕ್ರೆ ಕಿಡಿ ಕಾರಿದ್ದಾರೆ. ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲೂ ರಾಹುಲ್ ಗಾಂಧಿ ಹೇಳಿಕೆಗೆ ಟೀಕೆ ವ್ಯಕ್ತವಾಗಿದೆ.
"ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆಯಾಚಿಸುವುದಿಲ್ಲ" ಎಂಬ ರಾಹುಲ್ ಗಾಂಧಿ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಮಿತ್ರ ಪಕ್ಷದ ಭಾಗವಾಗಿರುವ ಉದ್ಧವ್ ಠಾಕ್ರೆ ಅವರು ಭಾನುವಾರ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ. ನಮ್ಮ ದೇವರನ್ನು ಅವಮಾನಿಸುವುದನ್ನು ನಿಲ್ಲಿಸದಿದ್ದರೆ ಮಹಾರಾಷ್ಟ್ರ ವಿರೋಧ ಪಕ್ಷದ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.
ಇದನ್ನು ಓದಿ: ರಾಹುಲ್ ಗಾಂಧಿ, ಅದಾನಿ ವಿಚಾರಕ್ಕೆ ಬಲಿಯಾದ ಸಂಸತ್ ಕಲಾಪ: ಕಪ್ಪು ಬಟ್ಟೆ ಧರಿಸಿ ಬಂದ ಕಾಂಗ್ರೆಸ್ ಸಂಸದರು
ಈ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ನಾವು ಒಟ್ಟಾಗಿದ್ದೇವೆ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ. ಆದರೆ ಮೈತ್ರಿಯಲ್ಲಿ ಬಿರುಕುಗಳನ್ನು ಸೃಷ್ಟಿಸುವ ಯಾವುದೇ ಹೇಳಿಕೆಗಳನ್ನು ನೀಡಬೇಡಿ. ಅವರು (ಬಿಜೆಪಿ) ನಿಮ್ಮನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಈ ಸಮಯದಲ್ಲಿ ಎಚ್ಚರ ತಪ್ಪಿದ್ರೆ, ನಮ್ಮ ದೇಶವು ಖಂಡಿತವಾಗಿಯೂ ನಿರಂಕುಶಾಧಿಕಾರದತ್ತ ಸಾಗುತ್ತದೆ" ಎಂದು ಉದ್ಧವ್ ಠಾಕ್ರೆ ಹೇಳಿದರು.
ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎನ್‌ಸಿಪಿ ಜೊತೆಗೆ 2019 ರಲ್ಲಿ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸಿದಾಗಿನಿಂದ ಮೈತ್ರಿಕೂಟದಲ್ಲಿದೆ. ಶಿವಸೇನೆಯಲ್ಲಿನ ದಂಗೆಯ ನಂತರ ಉದ್ಧವ್ ಠಾಕ್ರೆ ನೇತೃತ್ವದ ಬಣ ಮತ್ತು ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ಸರ್ಕಾರವನ್ನು ಉರುಳಿಸಿದ ನಂತರವೂ ಅವರು ಮೈತ್ರಿಯಲ್ಲಿಯೇ ಇದ್ದರು.ಆದರೆ, ಏಕನಾಥ್ ಶಿಂಧೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದರು.
ಇದನ್ನೂ ಓದಿ: ರಾಹುಲ್ ಗಾಂಧಿ ಹಾರ್ವರ್ಡ್, ಕೇಂಬ್ರಿಡ್ಜ್‌ನಿಂದ ಪದವಿ ಪಡೆದಿದ್ದಾರೆ, ಆದರೂ ಪಪ್ಪು ಅಂತೀರಿ: ಪ್ರಿಯಾಂಕಾ ಗಾಂಧಿ
ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ವೇಳೆಯೂ ವಿನಾಯಕ್ "ವೀರ್" ಸಾವರ್ಕರ್ ಅವರನ್ನು ರಾಹುಲ್ ಗಾಂಧಿ ಟೀಕಿಸಿದ್ದು ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಪಕ್ಷದ ನಡುವೆ ಬಿರುಕು ಮೂಡಿಸಿತ್ತು. ಮತ್ತೆ, ಶನಿವಾರ, ರಾಹುಲ್ ಗಾಂಧಿಯವರು ಮೋದಿ ಸರ್‌ನೇಮ್ ಹೇಳಿಕೆಗಾಗಿ ಕ್ಷಮೆಯಾಚಿಸಲು ನಿರಾಕರಿಸಿದ ಬಗ್ಗೆ ಕೇಳಿದಾಗ "ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಹೆಸರು ಗಾಂಧಿ ಮತ್ತು ಗಾಂಧಿ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.
ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಉದ್ಧವ್ ಠಾಕ್ರೆ ಅವರು ಸಾವರ್ಕರ್ ಅವರನ್ನು ತಮ್ಮ ಆರಾದ್ಯ ದೈವ ಎಂದು ಪರಿಗಣಿಸಿದ್ದೇವೆ ಮತ್ತು ಕಾಂಗ್ರೆಸ್ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದರು. ಸಾವರ್ಕರ್ ಅವರು 14 ವರ್ಷಗಳ ಕಾಲ ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಊಹಿಸಲಾಗದ ಚಿತ್ರಹಿಂಸೆ ಅನುಭವಿಸಿದರು. ಸಾವರ್ಕರ್ ಅವರ ಅವಮಾನವನ್ನು ನಾವು ಸಹಿಸುವುದಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದರು.
ಇದನ್ನೂ ಓದಿ: ಭಾರತದ ಪ್ರಧಾನಿ ಹೇಡಿ; ನನ್ನ ವಿರುದ್ಧವೂ ಕೇಸು ದಾಖಲಿಸಿ, ನನ್ನನ್ನೂ ಜೈಲಿಗೆ ಹಾಕಿ: ಪ್ರಿಯಾಂಕಾ ಗಾಂಧಿ ಆಕ್ರೋಶ
"ನೀವು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಿದ್ದೀರಿ, ಸಂಜಯ್ ರಾವತ್ ನಿಮ್ಮೊಂದಿಗೆ ನಡೆದಿದ್ದರು. ಆದರೆ ನಾನು ರಾಹುಲ್ ಗಾಂಧಿಗೆ ಬಹಿರಂಗವಾಗಿ ಹೇಳಲು ಬಯಸುತ್ತೇನೆ. ಈ ಹೋರಾಟ ಪ್ರಜಾಪ್ರಭುತ್ವವನ್ನು ಉಳಿಸಲು. ಸಾವರ್ಕರ್ ನಮ್ಮ ದೇವರು, ಅವರ ಅವಮಾನವನ್ನು ನಾವು ಸಹಿಸುವುದಿಲ್ಲ’’ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಶಿವಸೇನೆಯ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲೂ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಲಾಗಿದೆ. "ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಅನ್ಯಾಯವಾಗಿದೆ, ಆದರೆ ಸಾವರ್ಕರ್ ಅವರನ್ನು ಅವಮಾನಿಸುವ ಮೂಲಕ ಅವರು ಸತ್ಯದ ಯುದ್ಧವನ್ನು ಗೆಲ್ಲಲು ಸಾಧ್ಯವಿಲ್ಲ. ಗಾಂಧಿಯವರು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಕುಟುಂಬದಲ್ಲಿ ಜನಿಸಿದರು ಮತ್ತು ಅದು ಸತ್ಯ, ಹಾಗೆ ಸಾವರ್ಕರ್ ಕೂಡ ಮತ್ತು ಅವರ ಕುಟುಂಬ ದೇಶಕ್ಕಾಗಿ ದುಡಿದಿದೆ, ಸಾವರ್ಕರ್ ಅವರನ್ನು ಅವಮಾನಿಸುವುದರಿಂದ ರಾಹುಲ್ ಗಾಂಧಿ ಅವರ ಮೇಲಿನ ಸಹಾನುಭೂತಿ ಕಡಿಮೆಯಾಗುತ್ತದೆ ಎಂದು ಸಂಪಾದಕೀಯ ಹೇಳಿದೆ.
ಇದನ್ನೂ ಓದಿ: ಅನರ್ಹ ಸಂಸದ ಎಂದು ಟ್ವಿಟ್ಟರ್ ಪ್ರೊಫೈಲ್‌ನಲ್ಲಿ ಬರೆದುಕೊಂಡ 'ಕೈ' ನಾಯಕ ರಾಹುಲ್ ಗಾಂಧಿ