
ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆ ಸುರಿದಿದ್ದು ಸಾಮಾನ್ಯ ಜನಜೀವನದಲ್ಲಿ ಭಾರೀ ವ್ಯತ್ಯಯವಾಗಿದೆ. ಮಳೆ ಸಂಬಂಧಿ ಅನಾಹುತಗಳಿಗೆ ಒಂದೇ ದಿನ ರಾಜ್ಯದಲ್ಲಿ 7 ಜನರು ಸಾವನ್ನಪ್ಪಿದ್ದಾರೆ.ಭಾರಿ ಮಳೆಯಿಂದಾಗಿ ನಾಂದೇಡ್‌ನಲ್ಲಿ ಐವರು ನಾಪತ್ತೆಯಾಗಿದ್ದಾರೆ. ಗ್ರಾಮದ 200 ಜನರು ನಡುಗಡ್ಡೆಯಲ್ಲಿ ಸಿಲುಕಿದ್ದು ಅವರ ರಕ್ಷಣೆಗೆ ಸೇನೆಯನ್ನು ನಿಯೋಜಿಸಲಾಗಿದೆ.
ಇನ್ನು ಮುಂಬೈನಲ್ಲಿ ಮಳೆಯ ಅವಾಂತರ ಹೆಚ್ಚಿದ್ದು, ಉಪನಗರ ರೈಲು ಸೇವೆ, ವಿಮಾನ ಸೇವೆಗಳು ವ್ಯತ್ಯಯವಾಗಿವೆ. ಮುಂಬೈನಲ್ಲಿ 8 ತಾಸಿನಲ್ಲಿ 17.7 ಸೆಂ.ಮೀ ಮಳೆಯಾಗಿದೆ. ವರ್ಷಧಾರೆಗೆ ಮುಂಬೈನ ಬಹುತೇಕ ರಸ್ತೆಗಳು ಜಲಾವೃತಗೊಂಡಿದ್ದವು. ಮಳೆ ಪರಿಣಾಮ ಮುಂಬೈ ಪಾಲಿಕೆಯು ಮಧ್ಯಾಹ್ನ 12 ಗಂಟೆ ಬಳಿಕ ಆರಂಭವಾಗುವ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿತು.
ಮಕ್ಕಳ ರಕ್ಷಣೆ:ಮಳೆಯಿಂದಾಗಿ ಮುಂಬೈನ ಮಾತುಂಗಾದಲ್ಲಿನ ಡಾನ್ ಬಾಸ್ಕೋ ಶಾಲೆಯ ಬಸ್ಸು ಕೆಟ್ಟುನಿಂತಿತ್ತು. ಈ ವೇಳೆ ಪೊಲೀಸರು ಆಗಮಿಸಿ ಮಕ್ಕಳನ್ನು ರಕ್ಷಿಸಿದ್ದಾರೆ.
ಆಲಮಟ್ಟಿ ನೀರು ಬಿಡಲು ಕರ್ನಾಟಕಕ್ಕೆ ಒತ್ತಾಯ: ಸಿಎಂ
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಆಲಮಟ್ಟಿ ಅಣೆಕಟ್ಟಿನಲ್ಲಿ ನೀರು ಹೆಚ್ಚಳವಾಗುತ್ತಿರುವುದರಿಂದ ಡ್ಯಾಂನಿಂದ ನೀರು ಬಿಡುವಂತೆ ಕರ್ನಾಟಕದ ಜತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ