
ನವದೆಹಲಿ (ಫೆ.24): ಮೂರು ದಿನಗಳ ಕಾಂಗ್ರೆಸ್ ಮಹಾಧಿವೇಶನ ಇಂದಿನಿಂದ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಆರಂಭವಾಗಲಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯತಂತ್ರ ರೂಪಿಸುವ ಪ್ರಮುಖ ಸಭೆಯಾಗಿರುವ ಮಹಾಧಿವೇಶನದಲ್ಲಿ ಪಕ್ಷದ ಪ್ರಮುಖ ಕಾರ್ಯಕಾರಿ ಸಮಿತಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಆದರೆ, ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ಗಾಂಧಿ ಭಾಗವಹಿಸುತ್ತಿಲ್ಲ. ಮೂಲಗಳ ಪ್ರಕಾರ, ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡುವ ನಿಟ್ಟಿನಲ್ಲಿ ಗಾಂಧಿ ಕುಟುಂಬ ಈ ತೀರ್ಮಾನ ಮಾಡಿದೆ ಎನ್ನಲಾಗಿದ್ದು, ಮೊದಲ ದಿನದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ, 2024ರ ಲೋಕಸಭೆ ಚುನಾವಣೆಯ ಸಿದ್ಧತೆಗಳು ಹೇಗೆ, ಪ್ರಕಾಚರ ಕಾರ್ಯಗಳು ಹೇಗಿರಬೇಕು ಎಎನ್ನುವ ಸಭೆಯಲ್ಲಿ ಕಾಂಧಿ ಕುಟುಂಬ ಭಾಗವಹಿಸಲಿದೆ ಎಂದು ಹೇಳಲಾಗಿದೆ. ಸತತ ಚುನಾವಣೆಗಳ ಸೋಲು, ಪಕ್ಷದಲ್ಲಿ ಮೂಲದಿಂದಲೇ ಬದಲಾವಣೆಯಾಗಬೇಕು ಎನ್ನುವ ಆಂತರಿಕ ಗುದ್ದಾಟ, ಹಿರಿಯ ಕಾಂಗ್ರೆಸ್ ನಾಯಕರು ಪಕ್ಷವನ್ನು ತೊರೆದ ಬಳಿಕ 137 ವರ್ಷಗಳ ಇತಿಹಾಸ ಹೊಂದಿರುವ ಪಕ್ಷದ ಅಧ್ಯಕ್ಷತೆಯನ್ನು ಕಳೆದ ಅಕ್ಟೋಬರ್‌ನಲ್ಲಿ ಪಕ್ಷ ನಿಷ್ಠ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಹಸ್ತಾಂತರ ಮಾಡಿದ್ದರು. ಹಾಗಿದ್ದರೂ ವಿರೋಧ ಪಕ್ಷಗಳು ಮಾತ್ರ ಈಗಲೂ ಕಾಂಗ್ರೆಸ್ ಪಕ್ಷದ ಮೇಲೆ ಗಾಂಧಿ ಕುಟುಂಬದ ಹಿಡಿತ ಗಟ್ಟಿಯಾಗಿಯೇ ಇದೆ ಎಂದು ಆರೋಪಿಸಿವೆ.
ರಾಯ್‌ಪುರದಲ್ಲಿ ಕಾಂಗ್ರೆಸ್‌ನ 85ನೇ ಮಹಾಧಿವೇಶನದಲ್ಲಿ ವಿರೋಧ ಪಕ್ಷಗಳಿಗೆ ಈ ಆರೋಪಗಳಿಗೆ ತಕ್ಕ ತಿರುಗೇಟು ನೀಡುವ ಉದ್ದೇಶಕ್ಕೆ ಗಾಂಧಿ ಕುಟುಂಬ ಕಾರ್ಯಕಾರಿ ಸಮಿತಿಯ ಸಭೆಯಿಂದ ದೂರ ಉಳಿದಿಕೊಂಡಿದೆ. ಮೂರು ದಿನಗಳ ಅಧಿವೇಶನದಲ್ಲಿ ಪಕ್ಷವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ, ಅದು 2024 ರ ಲೋಕಸಭೆ ಚುನಾವಣೆಗೆ ಮಾರ್ಗಸೂಚಿಯನ್ನು ರೂಪಿಸುತ್ತದೆ ಮತ್ತು ಬಿಜೆಪಿಯನ್ನು ಎದುರಿಸಲು ಇತರ ವಿರೋಧ ಪಕ್ಷಗಳೊಂದಿಗೆ ಚುನಾವಣಾ ಸಂಬಂಧಕ್ಕಾಗಿ ಕಾರ್ಯತಂತ್ರವನ್ನು ಅಂತಿಮಗೊಳಿಸುತ್ತದೆ ಎನ್ನಲಾಗಿದೆ.
ಗಾಂಧಿ ಕುಟುಂಬ ಹಾಜರಾಗದೇ ಇರುವ ಸ್ಟೀರಿಂಗ್ ಕಮಿಟಿ ಸಭೆಯಲ್ಲಿ, ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವನ್ನು ಅನುಮೋದಿಸುತ್ತಾರೆ ಮತ್ತು ಅವರ ನೇತೃತ್ವದ ಹೊಸ ಕಾರ್ಯಕಾರಿ ಸಮಿತಿಗೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ. ಅಂದಾಜು 15 ಸಾವಿರಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಈ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಭಾರತ್ ಜೋಡೋ ಯಾತ್ರೆಯ ದೊಡ್ಡ ಮಟ್ಟದ ಯಶಸ್ಸಿನ ಮೂಲಕ ಕಾರ್ಯಕರ್ತರನ್ನು ಒಗ್ಗೂಡಿಸಲು ರಾಹುಲ್ ಗಾಂಧಿ ಯಶಸ್ವಿಯಾಗಿದ್ದು, ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ.
ಇಂದಿನಿಂದ 3 ದಿನ ಕಾಂಗ್ರೆಸ್ ಮಹಾಧಿವೇಶನ: ಲೋಕಸಭೆ, ವಿಧಾನಸಭೆ ಚುನಾವಣೆಗೆ ರಣನೀತಿ ಸೃಷ್ಟಿ
ಮೂರು ದಿನಗಳ ಮಹಾಧಿವೇಶನದಲ್ಲಿ ವರ್ಕಿಂಗ್ ಸಮಿತಿಯ ಬದಲು ಅದೇ ಸ್ಥಾನದಲ್ಲಿರುವ ಸ್ಟೀರಿಂಗ್ ಸಮಿತಿ, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ಪ್ರಮುಖ ನಿರ್ಧಾರ ಮಾಡುವ ಸಮಿತಿಗೆ ಚುನಾವಣೆಗಳು ಇರಬೇಕೋ ಬೇಡವೋ ಎನ್ನುವ ಬಗ್ಗೆಯೂ ತೀರ್ಮಾನ ಮಾಡಲಿದೆ.
100 ಮೋದಿ, ಶಾ ಬಂದ್ರೂ 2024ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದನ್ನ ತಪ್ಪಿಸೋಕೆ ಆಗಲ್ಲ: ಖರ್ಗೆ!
ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ ಸ್ಥಾನಕ್ಕೆ ಚುನಾವಣೆಗಳು ನಡೆಯಲಿದೆಯೇ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಕೂಡ ಉತ್ತರಿಸಿದ್ದು, 'ಇದನ್ನು ಸ್ಟೀರಿಂಗ್ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ. ಸ್ಟೀರಿಂಗ್ ಸಮಿತಿ ಸಭೆಯಲ್ಲಿ ಇದು ಖಂಡಿತವಾಗಿ ಚರ್ಚೆಗೆ ಬರಲಿದೆ. ಸದ್ಯಕ್ಕೆ ಈ ಬಗ್ಗೆ ಏನನ್ನೂ ಹೇಳಲಾಗದು' ಎಂದಿದ್ದಾರೆ. ಆದರೆ, ಕಾರ್ಯಕಾರಿ ಸಮಿತಿ ಸ್ಥಾನಕ್ಕೆ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ. ಅದಕ್ಕಾಗಿ ಎಲ್ಲಾ ಸಿದ್ಧತೆಯನ್ನೂ ಮಾಡಿದ್ದೇವೆ. ಚುನಾವಣೆ ಮಾಡಬೇಕು ಎನ್ನುವ ತೀರ್ಮಾನ ಬಂದಲ್ಲಿ, ಚುನಾವಣೆ ನಡೆಯಲಿದೆ ಎಂದಿದ್ದಾರೆ.
ಸಂಚಾಲನಾ ಸಮಿತಿಯ ಸಭೆಯ ನಂತರ, ಅದೇ ದಿನ ಸಂಜೆ 4 ಗಂಟೆಗೆ ವಿಷಯಗಳ ಸಮಿತಿಯ ಸಭೆ ನಡೆಯಲಿದ್ದು, ಇದರಲ್ಲಿ ಆರು ನಿರ್ಣಯಗಳನ್ನು ಪರಿಗಣಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. "ಫೆಬ್ರವರಿ 25 ರಂದು (ಶನಿವಾರ), ರಾಜಕೀಯ, ಆರ್ಥಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಿಸಿದ ನಿರ್ಣಯಗಳನ್ನು ಚರ್ಚಿಸಲಾಗುವುದು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ