Naveen Body ಉಕ್ರೇನ್‌ನಿಂದ ನವೀನ್‌ ದೇಹ ತವರಿಗೆ ತರಲು ಶ್ರಮಿಸಿದ ಪ್ರಧಾನಿಗೆ ರಾಜೀವ್‌ ಚಂದ್ರಶೇಖರ್‌ ಕೃತಜ್ಞತೆ!

By Kannadaprabha News  |  First Published Mar 22, 2022, 2:05 AM IST
  • ನವೀನ್ ಮೃತದೇಹ ತರಲು ಶ್ರಮಿಸಿದ ಮೋದಿಗೆ ಕೃತಜ್ಞತೆ
  • ಸವಾಲು ಮೆಟ್ಟಿ ನಿಂತ ಮೋದಿಗೆ  ರಾಜೀವ್‌ ಚಂದ್ರಶೇಖರ್‌ ಕೃತಜ್ಞತೆ
  • 21 ದಿನಗಳ ಬಳಿಕ ಭಾರತಕ್ಕೆ ಬಂದ ನವೀನ್ ಶೇಕರಪ್ಪ ಮೃತದೇಹ
     

ಬೆಂಗಳೂರು(ಮಾ.22): ಉಕ್ರೇನ್‌ನಲ್ಲಿ ಶೆಲ್‌ ದಾಳಿಗೆ ಬಲಿಯಾದ ಕರ್ನಾಟಕದ ನವೀನ್‌ ಗ್ಯಾನ್‌ಗೌಡರ್‌ ಅವರ ಮೃತದೇಹವನ್ನು ತವರಿಗೆ ತರುವಲ್ಲಿ ಶ್ರಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಕೃತಜ್ಞತೆ ಸಲ್ಲಿಸಿದ್ದಾರೆ. ‘ಭಾರಿ ಅಪಾಯಗಳು ಮತ್ತು ಸವಾಲುಗಳ ನಡುವೆ ನವೀನ್‌ ಅವರ ಪಾರ್ಥಿವ ಶರೀರವನ್ನು ತವರಿಗೆ ತರಲು ಶ್ರಮಿಸಿದ್ದಕ್ಕಾಗಿ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಕರ್ನಾಟಕ ಸರ್ಕಾರ, ನವೀನ್‌ ಅವರ ಪೋಷಕರು ಹಾಗೂ ಜನತೆಯ ಪರವಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಗಳು’ ಎಂದು ರಾಜೀವ್‌ ಚಂದ್ರಶೇಖರ್‌ ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನವೀನ್‌ ದೇಹ ತರಿಸಿದ ಮೋದಿಗೆ ಸಿಎಂ ಕೃತಜ್ಞತೆ
ಉಕ್ರೇನ್‌ನಲ್ಲಿ ಮೃತಪಟ್ಟಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೆರಿ ಗ್ರಾಮದ ನವೀನ್‌ ಗ್ಯಾನಗೌಡರ್‌ ಅವರ ಅಂತಿಮ ದರ್ಶನ ಪಡೆದು ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಸುಮಾರು ಮೂರು ನಿಮಿಷ ಪ್ರಧಾನಿ ಅವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿ, ನವೀನ್‌ ಪಾರ್ಥಿವ ಶರೀರವನ್ನು ದೇಶಕ್ಕೆ ತರುವಲ್ಲಿ ತಮ್ಮ ಪಾತ್ರ ಮುಖ್ಯವಾಗಿದೆ. ನವೀನ್‌ ಮುಖ ನೋಡಬೇಕೆಂಬ ಆತನ ತಂದೆ ತಾಯಿಯ ಆಸೆಯನ್ನು ಈಡೇರಿಸಿದ್ದೀರಿ. ಅದಕ್ಕಾಗಿ ರಾಜ್ಯದ ಪರವಾಗಿ ತಮಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಯುದ್ಧಭೂಮಿಯಿಂದ ಮೃತದೇಹ ತರುವುದು ಸುಲಭದ ಮಾತಲ್ಲ. ತಮ್ಮ ಉತ್ತಮ ರಾಜತಾಂತ್ರಿಕ ಬಾಂಧವ್ಯಗಳ ಕಾರಣ ಇದು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Tap to resize

Latest Videos

21 ದಿನಗಳ ನಂತರ ತಾಯ್ನಾಡಿಗೆ ಬಂದ ನವೀನ್ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಗಣ್ಯರಿಂದ ನವೀನ್‌ ಅಂತಿಮ ದರ್ಶನ
ಉಕ್ರೇನ್‌ ಯುದ್ಧದಲ್ಲಿ ಮೃತಪಟ್ಟತಾಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್‌ ಮೃತದೇಹವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರುಗಳಾದ ಅರುಣಕುಮಾರ ಪೂಜಾರ, ವಿರೂಪಾಕ್ಷಪ್ಪ ಬಳ್ಳಾರಿ, ಆರ್‌. ಶಂಕರ್‌, ಸಂಸದರಾದ ಜಿ.ಎಂ. ಸಿದ್ದೇಶ, ಶಿವಕುಮಾರ ಉದಾಸಿ, ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ಡಾ. ಬಿ.ಎಸ್‌. ಕೇಲಗಾರ, ನಿರ್ದೇಶಕ ಸಂತೋಷಕುಮಾರ ಪಾಟೀಲ, ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮದ ನಿರ್ದೇಶಕಿ ಭಾರತಿ ಜಂಬಗಿ, ಮಾಜಿ ಸಚಿವ ರುದ್ರಪ್ಪ ಲಮಾಣಿ, ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ, ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಉಪಾಧ್ಯಕ್ಷೆ ಕಸ್ತೂರಿ ಚಿಕ್ಕಬಿದರಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚೋಳಪ್ಪ ಕಸವಾಳ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಜಿಪಂ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಪಂ ಸಿಇಒ ಮಹಮ್ಮದ ರೋಷನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ, ತಹಸೀಲ್ದಾರ್‌ ಜಿ. ಶಂಕರ್‌ ಮೊದಲಾದವರು ಅಂತಿಮ ದರ್ಶನ ಪಡೆದರು.

Russia-Ukraine War: ನವೀನ್‌ ಮನೆಗೆ ಸಿದ್ದರಾಮಯ್ಯ ಭೇಟಿ: ಪೋಷಕರಿಗೆ ಸಾಂತ್ವನ

ದೇಹದಾನ:
ಅಂತಿಮ ದರ್ಶನದ ಬಳಿಕ ಚಳಗೇರಿ ಗ್ರಾಮದಲ್ಲಿ ನವೀನ್‌ ದೇಹದ ಮೆರವಣಿಗೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇಡಿ ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಯಿತು. ನವೀನ್‌ ದೇಹದಾನಕ್ಕೆ ಪೋಷಕರು ನಿರ್ಧರಿಸಿರುವಂತೆ ಮೆರವಣಿಗೆ ಬಳಿಕ ದಾವಣಗೆರೆಯ ಎಸ್‌.ಎಸ್‌. ಮೆಡಿಕಲ್‌ ಕಾಲೇಜಿಗೆ ನವೀನ್‌ ದೇಹವನ್ನು ಹಸ್ತಾಂತರ ಮಾಡಲಾಯಿತು.
 

click me!