
ನವದೆಹಲಿ: ಕೇಂದ್ರದ ಮಾಜಿ ಸಚಿವ, ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಕುರಿತು ಪ್ರತಿಕ್ರಿಯೆ ನೀಡುವಂತೆ ತರೂರ್‌ಗೆ ಕೋರ್ಟ್ ಸೂಚಿಸಿದೆ.
ತರೂರ್ ಹಾಗೂ ರಾಜೀವ್ ತಿರುವನಂತಪುರ ಕ್ಷೇತ್ರದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಎದುರಾಳಿಗಳಾಗಿದ್ದರು. ‘ಚುನಾವಣೆ ವೇಳೆ ತಿರುವನಂತಪುರಂ ಕ್ಷೇತ್ರದಲ್ಲಿ ಮತದಾರರನ್ನು ಖರೀದಿಸಲಾಗಿದೆ’ ಎಂದು ತರೂರ್ ಅವರು ನನ್ನ ವಿರುದ್ಧ ರಾಷ್ಟ್ರೀಯ ಸುದ್ದಿವಾಹಿನಿಗಳಲ್ಲಿ ಸುಳ್ಳು ಮತ್ತು ಮಾನಹಾನಿಕರ ಆರೋಪ ಮಾಡಿದ್ದರು. ಚುನಾವಣೆ ಫಲಿತಾಂಶದ ಮೇಲೆ ಪ್ರಭಾವ ಬೀರಲು ಮತ್ತು ನನ್ನ ವೈಯಕ್ತಿಕ ತೇಜೋವಧೆ ಉದ್ದೇಶದಿಂದಲೇ ಈ ರೀತಿ ಸುಳ್ಳು ಆರೋಪ ಮಾಡಿದ್ದರು’ ಎಂದು ರಾಜೀವ್ ಆರೋಪಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯವು ಪ್ರಕರಣದಲ್ಲಿ ಮಾನನಷ್ಟ ಆರೋಪಕ್ಕೆ ಸಂಬಂಧಿಸಿ ಯಾವುದೇ ಅಂಶಗಳು ಕಾಣುತ್ತಿಲ್ಲ ಎಂದು ತಿಳಿಸಿ ಫೆ.4ರಂದು ರಾಜೀವ್ ಅರ್ಜಿ ವಜಾ ಮಾಡಿತ್ತು. ಹೀಗಾಗಿ ರಾಜೀವ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ