ಕೊರೋನಾ ನಿರ್ವಹಣೆ: ರಾಜ್ಯ ಸರ್ಕಾರಗಳಿಗೆ ನೆರವು ನೀಡಿ: ಸೇನೆಗೆ ರಾಜನಾಥ್ ಸಿಂಗ್ ಸೂಚನೆ!

By Suvarna NewsFirst Published Apr 20, 2021, 5:28 PM IST
Highlights

ದೇಶಾದ್ಯಂತ ಕೊರೋನಾ ಎರಡನೇ ಅಲೆ ಭಾರೀ ಆತಂಕ| ಕಠಿಣ ಕ್ರಮ ಕೈಗೊಂಡರೂ ನಿಲ್ಲದ ಅಬ್ಬರ| ಕೊರೋನಾ ನಿರ್ವಹಣೆ: ರಾಜ್ಯ ಸರ್ಕಾರಗಳಿಗೆ ನೆರವು ನೀಡಿ: ಸೇನೆಗೆ ರಾಜನಾಥ್ ಸಿಂಗ್ ಸೂಚನೆ!

ನವದೆಹಲಿ(ಏ.20): ದೇಶಾದ್ಯಂತ ಕೊರೋನಾ ಎರಡನೇ ಅಲೆ ಭಾರೀ ಆತಂಕ ಸೃಷ್ಟಿಸಿದೆ. ಅದೆಷ್ಟೇ ಕಠಿಣ ಕ್ರಮ ಕೈಗೊಂಡರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಸೋಂಕಿತರ ಸಂಖ್ಯೆ ದಿನೆ ದಿನೇ ಹೆಚ್ಚುತ್ತಿದೆ. ಹೀಗಿರುವಾಗ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯ ನೆರವು ನೀಡುವಂತೆ ಮೂರೂ ಸೇನಾಪಡೆಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಳವಾರ ಸೂಚನೆ ನೀಡಿದ್ದಾರೆ.

ಯೋಧರಿಗೆ ಕಡಿಮೆ ತೂಕದ ಗುಂಡು ನಿರೋಧಕ ಜಾಕೆಟ್‌

ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ರಾಜನಾಥ್ ಸಿಂಗ್ ಸೇನಾಪಡೆಗಳಿಗೆ ಸೂಚನೆ ನೀಡಿದ್ದು, ಈ ಸಂಬಂಧ ವಿವಿಧ ರಾಜ್ಯಗಳಲ್ಲಿರುವ ಸೇನಾ ಘಟಕಗಳು ಆಯಾ ರಾಜ್ಯ ಸರ್ಕಾರವನ್ನು ಸಂಪರ್ಕಿಸಿ ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ನೆರವು ನೀಡುವಂತೆ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅವರಿಗೆ ನಿರ್ದೇಶಿಸಿದ್ದಾರೆಂದು ರಕ್ಷಣಾ ಇಲಾಖೆಯ ಮೂಲಗಳು ಮಾಹಿತಿ ನೀಡಿದೆ.

ಗಡಿ ಭದ್ರತಾ ಸೇವೆಗೆ ಕೊಪ್ಪಳದ ರೇಷ್ಮಾ ಮಹೇಶ, ವೀಣಾದೇವಿ

ಇದರ ಬೆನ್ನಲ್ಲೇ ರಾಜ್ಯ ಸರ್ಕಾರಗಳಿಗೆ ನೆರವು ನೀಡುವುದರ ಜೊತೆ ಸಾಧ್ಯವಾದಲ್ಲೆಲ್ಲಾ  ಸೇನಾ ಆಸ್ಪತ್ರೆಗಳಲ್ಲಿ ನಾಗರಿಕರಿಗೆ ಚಿಕಿತ್ಸೆ ನೀಡಲು ಸೇನೆ ನಿರ್ಧರಿಸಿದೆ. ಅಲ್ಲದೇ ರಾಜ್ಯಗಳಿಗೆ ಯಾವ ನೆರವು ಬೇಕೆಂಬುದನ್ನು ತಿಳಿಯಲು ಓರ್ವ ಹಿರಿಯ ಸೇನಾಧಿಕಾರಿಗೆ ಆಯಾ ರಾಜ್ಯದ ಮುಖ್ಯಮಂತ್ರಿಯೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

click me!