
ಲಕ್ನೋ(ನ.12): ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದ್ದು, ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದೆ.
ಮಂದಿರ ನಿರ್ಮಾಣಕ್ಕೆ ಮೂರು ತಿಂಗಳ ಅವಧಿಯಲ್ಲಿ ಹೊಸ ಟ್ರಸ್ಟ್ ರಚಿಸಿ, ಆ ಟ್ರಸ್ಟ್ ಸುಪರ್ದಿಗೆ ವಿವಾದಿತ ಭೂಮಿಯನ್ನು ಹಸ್ತಾಂತರಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಆದೇಶ ನೀಡಿದೆ.
ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!
ಈ ಮಧ್ಯೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಉದ್ದೇಶಕ್ಕಾಗಿ ರಚನೆಯಾಗಲಿರುವ ಟ್ರಸ್ಟ್ ನೇತೃತ್ವವನ್ನು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಹಿಸಿಕೊಳ್ಳಬೇಕೆಂದು ರಾಮಜನ್ಮ ಭೂಮಿ ನ್ಯಾಸ್ ಆಗ್ರಹಿಸಿದೆ.
ಈ ಕುರಿತು ಮಾತನಾಡಿರುವ ಆರ್‌ಜೆಎನ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್ ದಾಸ್, ಟ್ರಸ್ಟ್ ನೇತೃತ್ವವನ್ನು ಯೋಗಿ ಆದಿತ್ಯನಾಥ್ ವಹಿಸಬೇಕು ಎಂಬುದು ನಮ್ಮ ಆಗ್ರಹ ಎಂದು ಸ್ಪಷ್ಟಪಡಿಸಿದ್ದಾರೆ.
ಸುಪ್ರೀಂ ತೀರ್ಪಿನ ಬಳಿಕ ಹೇಗಿದೆ ಅಯೋಧ್ಯೆ ಜನಜೀವನ
ಯೋಗಿ ಆದಿತ್ಯನಾಥ್ ಗೋರಖ್'ಪುರ ದೇವಸ್ಥಾನದ ಮುಖ್ಯ ಅರ್ಚಕರಾಗಿ ಮತ್ತು ರಾಮ ಮಂದಿರ ಹೋರಾಟದಲ್ಲಿ ಮಹತ್ತರ ಪಾತ್ರ ವಹಿಸಿದ್ದು, ಅವರಿಗೆ ಟ್ರಸ್ಟ್ ಜವಾಬ್ದಾರಿ ನೀಡಬೇಕು ಎಂಬುದು ಭಕ್ತರ ಆಸೆಯಾಗಿದೆ ಎಂದು ಗೋಪಾಲ್ ದಾಸ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ