ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ವಂಚರು ದೇಣಿಗೆ ಸಂಗ್ರಹಿಸುತ್ತಿದ್ದಾರೆ. ರಾಮ ಮಂದಿರ ಟ್ರಸ್ಟ್, ವಿಶ್ವ ಹಿಂದೂ ಪರಿಷತ್ ಯಾವುದೇ ದೇಣಿಗೆ ಸಂಗ್ರಹಿಸುತ್ತಿಲ್ಲ. ಹೀಗಾಗಿ ಭಕ್ತರು ಎಚ್ಚರಿಕೆಯಿಂದರಲು ಸೂಚನೆ ನೀಡಲಾಗಿದೆ.
ಆಯೋಧ್ಯೆ(ಡಿ.22) ರಾಮ ಮಂದಿರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ. ಇದೀಗ ಪೂಜಾ ಕೈಂಕರ್ಯದ ತಯಾರಿ ನಡೆಯುತ್ತಿದೆ. ಜನವರಿ 22 ರಂದು ರಾಮ ಮಂದಿರ ಪ್ರಾಣಪ್ರತಿಷ್ಠೆ ನಡೆಯಲಿದೆ. ಈ ಮೂಲಕ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಳ್ಳಲಿದೆ. ರಾಮ ಮಂದಿರ ನಿರ್ಮಾಣಕ್ಕೆ ಜನ್ಮಭೂಮಿ ಟ್ರಸ್ಟ್ ಹಾಗೂ ವಿಶ್ವ ಹಿಂದೂ ಪರಿಷತ್ ಈಗಾಗಲೇ ದೇಣಿಗೆ ಸಂಗ್ರಹಿಸಿದೆ. ಇದೀಗ ರಾಮ ಮಂದಿರ ನಿರ್ಮಾಣ ಹೆಸರಿನಲ್ಲಿ ವಂಚಕರು ಹಲವು ಭಕ್ತರಿಂದ ದೇಣಿಗೆ ಸಂಗ್ರಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಕುರಿತು ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ ನೀಡಿದೆ.
ಶ್ರೀರಾಮ ಪ್ರಾಣ ಪ್ರತಿಷ್ಠಾ ಸೇವಾ ಸಮಿತಿ, ರಾಮ ಮಂದಿರ ನಿರ್ಮಾಣ ಸಮಿತಿ, ರಾಮ ಮಂದಿರ ಜನ್ಮಭೂಮಿ ಸಮಿತಿ ಸೇರಿದಂತೆ ಹಲವು ಹೆಸರಿನಲ್ಲಿ ವಂಚನೆ ನಡೆಯುತ್ತಿದೆ. ರಿಸೆಪ್ಟ್ ಪ್ರಿಂಟ್ ಮಾಡಿಸಿ ಜನರಿಂದ ಲಕ್ಷ ಲಕ್ಷ ರೂಪಾಯಿ ವಂಚಿಸುವ ಕಾರ್ಯ ನಡೆಯುತ್ತಿದೆ ಅನ್ನೋ ಮಾಹಿತಿಯನ್ನು ಖುದ್ದು ವಿಶ್ವ ಹಿಂದೂ ಪರಿಷತ್ ಹೇಳಿದೆ. ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ದೇಣಿಗೆ ಸಂಗ್ರಹಿಸಿ ಆಗಿದೆ. ಇದೀಗ ಅಧಿಕೃತ ಯಾವುದೇ ಸಮಿತಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿಲ್ಲ. ಹೀಗಾಗಿ ಯಾರೂ ಮೋಸ ಹೋಗಬಾರದು ಎಂದು ವಿಶ್ವಹಿಂದೂ ಪರಿಷತ್ ಹೇಳಿದೆ.
ಅಯೋಧ್ಯೆ ರಾಮ ಮಂದಿರಕ್ಕಾಗಿ 8 ಅಡಿಯ ಬಾಲರಾಮನ ವಿಗ್ರಹ ಕೆತ್ತನೆ ಮುಗಿಸಿದ ಮೈಸೂರಿನ ಅರುಣ್
ಯಾರಾದರೂ ರಾಮ ಮಂದಿರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿರುವುದು ಗಮನಕ್ಕೆ ಬಂದರೆ ತಕ್ಷಣವೇ ಪೊಲೀಸರಿಗೆ ದೂರು ನೀಡಲು ವಿಶ್ವ ಹಿಂದೂ ಪರಿಷತ್ ಹೇಳಿದೆ. ಈ ರೀತಿ ಮೋಸ ನಡೆಯುತ್ತಿರುವ ಕುರಿತು ಭಜರಂಗದಳ ಮಾಹಿತಿ ನೀಡಿದೆ. ಭಕ್ತರು ಎಚ್ಚರಿಕೆಯಿಂದ ಇರಬೇಕು. ಈ ರೀತಿ ದೇಣಿಗೆ ಸಂಗ್ರಹ ಕಂಡುಬಂದರೆ ಮಾಹಿತಿ ನೀಡಲು ಸೂಚನೆ ನೀಡಿದೆ.
ಜನವರಿ 22ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಮಂತ್ರಗಳನ್ನು ನೀಡಿದೆ. ಜೊತೆಗೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೂ ಆಮಂತ್ರಣ ಕಳುಹಿಸಲಾಗಿದೆ. ಆದರೆ ಈ ನಾಯಕರು ಅಂದು ರಾಮ ಮಂದಿರಕ್ಕೆ ತೆರಳುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಎಚ್ ಡಿ ದೇವೇಗೌಡ ಅವರಿಗೂ ಆಹ್ವಾನ ನೀಡಲಾಗಿದೆ.
ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!