
ಅಯೋಧ್ಯೆ(ಜು.01): ಉತ್ತರ ಪ್ರದೇಶದ ಶ್ರೀ ರಾಮ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಕಾಮಗಾರಿಯು ಉಪಗ್ರಹ ಚಿತ್ರಗಳಲ್ಲಿ ಸೆರೆಯಾಗಿದೆ.
ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಭೂಮಿಯ ಅಗೆಯುವುದು, ಇಂಜಿನಿಯರ್ಗಳು ಮತ್ತು ಕಾರ್ಮಿಕರ ನೆರವಿನಿಂದ ಕಾಂಕ್ರೀಟ್ ಪದರಗಳ ರಚನೆ ಕಾರ್ಯವು ಭರದಿಂದ ಸಾಗಿದ್ದು, ಭೂಮಿಯನ್ನು ಅಗೆಯುವುದು ಮತ್ತು ಅವಶೇಷಗಳನ್ನು ಹೊರತೆಗೆಯುತ್ತಿರುವ ಚಿತ್ರಗಳು ಉಪಗ್ರಹಗಳಲ್ಲಿ ದಾಖಲಾಗಿವೆ.
ಒಟ್ಟಾರೆ 1.2 ಲಕ್ಷ ಚದರಡಿಯ ವ್ಯಾಪ್ತಿಯಲ್ಲಿ 40-45 ಕಾಂಕ್ರೀಟ್ ಲೇಯರ್ಗಳನ್ನು ನಿರ್ಮಿಸಲಾಗುತ್ತದೆ. ಈಗಾಗಲೇ 4 ಲೇಯರ್ಗಳು ಪೂರ್ಣವಾಗಿವೆ ಎಂದು ದೇಗುಲ ನಿರ್ಮಾಣ ಹೊಣೆ ಹೊತ್ತಿರುವ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ