ಅಯೋಧ್ಯೆಯಲ್ಲಿ ಕನ್ನಡಿಗರು ಕೆತ್ತಿದ ರಾಮಲಲ್ಲ ವಿಗ್ರಹ ಆಯ್ಕೆ ಆಗುತ್ತಾ? ಡಿಸೆಂಬರ್ 15ರಂದು ಅಂತಿಮ ನಿರ್ಧಾರ

By Kannadaprabha News  |  First Published Dec 7, 2023, 8:25 AM IST

ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿ, ನಟ ಅಮಿತಾಬ್ ಬಚ್ಚನ್‌ ಸೇರಿ ದೇಶದ 7000 ವಿವಿಐಪಿಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್‌ ತಿಳಿಸಿದೆ. 


ಅಯೋಧ್ಯೆ (ಡಿಸೆಂಬರ್ 7, 2023): ಇಲ್ಲಿನ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುವ ರಾಮಲಲ್ಲ ವಿಗ್ರಹದ ಆಯ್ಕೆ ಪ್ರಕ್ರಿಯೆ ಡಿಸೆಂಬರ್ 15ಕ್ಕೆ ನಡೆಯಲಿದೆ ಎಂದು ರಾಮಮಂದಿರ ಟ್ರಸ್ಟ್‌ ತಿಳಿಸಿದೆ.

ರಾಮಲಲ್ಲನ ವಿಗ್ರಹವನ್ನು ಕರ್ನಾಟಕ ಹಾಗೂ ರಾಜಸ್ಥಾನದಿಂದ ತಂದಂತಹ ಶಿಲೆಗಳಲ್ಲಿ ಕೆತ್ತಲಾಗುತ್ತಿದ್ದು, ಕರ್ನಾಟಕದ ಅರುಣ್‌ ಯೋಗಿರಾಜ್‌ ಹಾಗೂ ಗಣೇಶ್‌ ಭಟ್‌ ಸಹ ಒಂದೊಂದು ಶಿಲೆಗೆ ಮೂರ್ತಿ ರೂಪ ಕೊಡುತ್ತಿದ್ದಾರೆ. ಇದರಲ್ಲಿ ಯಾವುದು ಪ್ರತಿಷ್ಠಾಪನೆಗೆ ಆಯ್ಕೆಯಾಗುತ್ತದೆ ಎಂಬುದನ್ನು ಟ್ರಸ್ಟ್‌ನ ಧಾರ್ಮಿಕ ಮಂಡಳಿ ಆಯ್ಕೆ ಮಾಡುತ್ತದೆ ಎಂದು ಚಂಪತ್‌ ರಾಯ್‌ ಹೇಳಿದ್ದಾರೆ.

Tap to resize

Latest Videos

ಇದನ್ನು ಓದಿ: ಅಯೋಧ್ಯೆ ರಾಮಲಲ್ಲಾ ಕೆತ್ತನೆಗೆ ಕರಾವಳಿ ಶಿಲ್ಪಿ ಗಣೇಶ್!

ರಾಮ ಮಂದಿರ ಉದ್ಘಾಟನೆಗೆ ಸಚಿನ್‌, ವಿರಾಟ್‌ ಸೇರಿ 7000 ವಿವಿಐಪಿಗಳಿಗೆ ಆಹ್ವಾನ
ಇಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ವಿರಾಟ್‌ ಕೊಹ್ಲಿ, ನಟ ಅಮಿತಾಬ್ ಬಚ್ಚನ್‌ ಸೇರಿ ದೇಶದ 7000 ವಿವಿಐಪಿಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ ಎಂದು ರಾಮ ಮಂದಿರ ಟ್ರಸ್ಟ್‌ ತಿಳಿಸಿದೆ. 7000 ವಿವಿಐಪಿಗಳಲ್ಲಿ ದೇಶದ 4000 ಸಾಧು ಸಂತರಿಗೆ ಆಹ್ವಾನ ನೀಡಲಾಗಿದೆ. 

ಇವರೊಂದಿಗೆ ಉದ್ಯಮಿ ರತನ್ ಟಾಟಾ, ಮುಕೇಶ್‌ ಅಂಬಾನಿ, ಗೌತಮ್‌ ಅದಾನಿ ಸೇರಿದಂತೆ ಅನೇಕ ಉದ್ಯಮಿಗಳು, ಕರಸೇವೆಯಲ್ಲಿ ಬಲಿದಾನ ಮಾಡಿದವರ ಕುಟುಂಬ ಹಾಗೂ ರಾಮಾಯಣ ಧಾರಾವಾಹಿಯಲ್ಲಿ ಪಾತ್ರವಹಿಸಿದ ಅರುಣ್‌ ಗೋವಿಲ್‌ ಹಾಗೂ ದೀಪಿಕಾ ಚಿಕ್ಲಿಯಾ ಅವರಿಗೂ ಆಹ್ವಾನ ನೀಡಲಾಗಿದೆ ಎಂದು ಚಂಪತ್‌ ರಾಯ್‌ ತಿಳಿಸಿದರು.

ಇದನ್ನೂ ಓದಿ: ರಾಮ ಮಂದಿರ ಪ್ರಾಣಪ್ರತಿಷ್ಠೆ ಆಮಂತ್ರಣ ಸ್ವೀಕರಿಸಿದ ಕೊಹ್ಲಿ-ಸಚಿನ್; ಆಯೋಧ್ಯೆಗೆ ಕ್ರಿಕೆಟ್ ದಿಗ್ಗಜರು!

.

click me!