ರಮೇಶ ಜಾರಕಿಹೊಳಿ ಅಳಿಯಗೆ ಸೋಲು

Published : Oct 25, 2019, 07:35 AM IST
ರಮೇಶ ಜಾರಕಿಹೊಳಿ ಅಳಿಯಗೆ ಸೋಲು

ಸಾರಾಂಶ

ಮಾಜಿ ಸಚಿವ ಹಾಗೂ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರ ಅಳಿಯ ವಿನಾಯಕ ಅಲಿಯಾಸ್‌ ಅಪ್ಪಿ ವೀರಗೌಡ ಪಾಟೀಲ್‌ ಅವರು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದಾರೆ. 

ಚಂದಗಡ  [ಅ.25]: ಕರ್ನಾಟಕದ ಮಾಜಿ ಸಚಿವ ಹಾಗೂ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರ ಅಳಿಯ ವಿನಾಯಕ ಅಲಿಯಾಸ್‌ ಅಪ್ಪಿ ವೀರಗೌಡ ಪಾಟೀಲ್‌ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 11,012 ಮತದಿಂದ ಸೋತಿದ್ದಾರೆ. 

ಚಂದಗಡ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಅಪ್ಪಿ ಅವರಿಗೆ 43,839 ಮತಗಳು ಬಂದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ರಾಜೇಶ ಪಾಟೀಲ್‌ ಅವರಿಗೆ 54,851 ಮತಗಳು ಬಂದವು. 

ಸಾಲ ತೀರಿಸೋಕೆ ರಮೇಶ ಬಿಜೆಪಿಗೆ: ಸತೀಶ್‌ ಆರೋಪ...

ಕಳೆದ ಚುನಾವಣೆಯಲ್ಲೂ ಅಪ್ಪಿ ವೀರಗೌಡ ಪಾಟೀಲ್‌ ಸೋಲನ್ನಪ್ಪಿದ್ದರು. ಆಗ ಅವರಿಗೆ 28847 ಮತಗಳು ಸಿಕ್ಕಿದ್ದವು. ಆದರೆ ಈ ಬಾರಿ ಮತ ಗಳಿಕೆ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!