
ನವದೆಹಲಿ (ಜೂ.5) : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ನೂಕುನುಗ್ಗಲಿನಿಂದ 11 ಜನ ಸಾವನ್ನಪ್ಪಿರುವ ಸಂದರ್ಭದಲ್ಲಿ ಕ್ರೀಡಾಂಗಣದ ಒಳಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಐಪಿಎಲ್ ಕಪ್‌ಗೆ ಮುತ್ತಿಡುತ್ತಿದ್ದರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಘಟನೆ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣವಾಗಿದೆ. ದುರಂತದ ಹೊಣೆಯನ್ನು ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದರು.
ಕಾಲ್ತುಳಿತದ ಸಾವಿನ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಸಚಿವರು ಮೃತರಿಗೆ ಕಂಬನಿ ಮಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ