ನಬಾರ್ಡ್‌ ಸಾಲ ಮಿತಿ ಹೆಚ್ಚಳ ಮಾಡಿ: ವಿತ್ತ ಸಚಿವೆ ನಿರ್ಮಲಾಗೆ ಸಿಎಂ ಸಿದ್ದರಾಮಯ್ಯ ಮನವಿ

Published : Nov 22, 2024, 07:32 AM IST
ನಬಾರ್ಡ್‌ ಸಾಲ ಮಿತಿ ಹೆಚ್ಚಳ ಮಾಡಿ: ವಿತ್ತ ಸಚಿವೆ ನಿರ್ಮಲಾಗೆ ಸಿಎಂ ಸಿದ್ದರಾಮಯ್ಯ ಮನವಿ

ಸಾರಾಂಶ

ನಬಾರ್ಡ್‌ ಅಲ್ಪಾವಧಿ ಕೃಷಿ ಸಾಲದ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು, 2024-25ನೇ ಹಣಕಾಸು ವರ್ಷದ ಸಾಲದ ಮಿತಿಯನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ನವದೆಹಲಿ (ನ.22) : ನಬಾರ್ಡ್‌ ಅಲ್ಪಾವಧಿ ಕೃಷಿ ಸಾಲದ ವಿಚಾರದಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು, 2024-25ನೇ ಹಣಕಾಸು ವರ್ಷದ ಸಾಲದ ಮಿತಿಯನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಕಳೆದ ಹಣಕಾಸು ವರ್ಷದಲ್ಲಿ ನಬಾರ್ಡ್‌ 5,600 ಕೋಟಿ ರು. ಸಾಲ ನೀಡಿತ್ತು. ಈ ವರ್ಷಕ್ಕೆ ನಾವು 9,162 ಕೋಟಿ ರು. ನೀಡುವಂತೆ ಬೇಡಿಕೆ ಇಟ್ಟಿದ್ದೆವು. ಆದರೆ ಕೇವಲ 2,340 ಕೋಟಿ ರು. ಮಾತ್ರ ಸಾಲ ಘೋಷಿಸಲಾಗಿದೆ. ಇದು ಕಳೆದ ಬಾರಿಗಿಂತ ಶೇ.58ರಷ್ಟು ಕಡಿಮೆ ಎಂದು ದೆಹಲಿಯಲ್ಲಿ ಗುರುವಾರ ನಿರ್ಮಲಾ ಸೀತಾರಾಮನ್‌ ರನ್ನು ಭೇಟಿಯಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯದ ನಿಯೋಗ ಮನವರಿಕೆ ಮಾಡಲು ಪ್ರಯತ್ನಿಸಿತು.

ಗ್ಯಾರಂಟಿಯಿಂದಾಗಿ ಹಿಮಾಚಲ ಸರ್ಕಾರದ ಬಳಿ ಕರೆಂಟ್‌ ಬಿಲ್‌ಗೂ ಕಾಸಿಲ್ಲ: 18 ಹೋಟೆಲ್‌ಗಳೇ ಬಂದ್‌!

ಕೇಂದ್ರ ಸಚಿವೆಗೆ ಈ ಕುರಿತು ವಿವರವಾದ ವರದಿ ನೀಡಿದ ಸಿದ್ದರಾಮಯ್ಯ ಅವರು, 2023-24ನೇ ಸಾಲಿನಲ್ಲಿ ಕರ್ನಾಟಕ ರೈತರಿಗೆ 22,902 ಕೋಟಿ ರು. ಅಲ್ಪಾವಧಿ ಸಾಲ ನೀಡಿತ್ತು. 2024-25ರಲ್ಲಿ 35 ಲಕ್ಷ ರೈತರಿಗೆ 25,000 ಕೋಟಿ ರು. ಅಲ್ಪಾವಧಿ ಸಾಲ ನೀಡುವ ಗುರಿ ಇರಿಸಿಕೊಂಡಿದೆ ಎಂದು ವಿವರಿಸಿದರು.

ನಬಾರ್ಡ್‌ ಸಾಲ ಮೊತ್ತ ದಿಢೀರ್‌ ಕಡಿತ ಮಾಡುವ ನಿರ್ಧಾರದಿಂದ ಕರ್ನಾಟಕದ ಕೃಷಿ ಸಹಕಾರ ಕ್ಷೇತ್ರಕ್ಕೆ ಹೊಡೆತ ಬೀಳಲಿದೆ. ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು ಬೆಳೆ ಚೆನ್ನಾಗಿ ಬರುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕೃಷಿ ಕಾರ್ಯಗಳಿಗಾಗಿ ಸಾಲವನ್ನು ಅವರು ಎದುರು ನೋಡುತ್ತಿದ್ದಾರೆ. ಹೀಗಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಮತ್ತು ನಬಾರ್ಡ್‌ ಕೂಡಲೇ ಕರ್ನಾಟಕಕ್ಕೆ ನೀಡುವ ಅಲ್ಪಾವಧಿ ಕೃಷಿ ಸಾಲದ ಮೊತ್ತವನ್ನು ಪರಿಷ್ಕರಣೆ ಮಾಡಬೇಕು ಎಂದು ನಿರ್ಮಲಾ ಅವರಿಗೆ ಸಚಿವರಾದ ಬೈರತಿ ಸುರೇಶ್‌ ಮತ್ತು ಚಲುವರಾಯಸ್ವಾಮಿ ಅವರೊಂದಿಗೆ ಸಿದ್ದರಾಮಯ್ಯ ಮನವಿ ಮಾಡಿದರು.

ರೈತರಿಗೆ ಮಾಡುವ ಅನ್ಯಾಯ:

ನಂತರ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಸಿದ್ದರಾಮಯ್ಯ, ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳ ಬಳಿ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ? ಎಂದು ಕಿಡಿಕಾರಿದರು.

ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಇದನ್ನು ಆರ್‌ಬಿಐ ಒಪ್ಪಿಲ್ಲ ಎಂದು ಸಚಿವರು ಉತ್ತರ ಬರೆದಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದ ಕೆಳಗೆ ಕಾರ್ಯನಿರ್ವಹಿಸುತ್ತಿದೆ. ಹಾಗಿದ್ದರೂ ಕೇಂದ್ರ ಸಚಿವರೇ ಈ ರೀತಿ ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಎಂದರು.

ಕೇಂದ್ರದಿಂದ 5.80 ಕೋಟಿ ಬಿಪಿಎಲ್‌ ಕಾರ್ಡ್‌ ರದ್ದತಿ ಬಗ್ಗೆ ಬಿಜೆಪಿ ನಾಯಕರ ಮಾತೇಕಿಲ್ಲ?: ಸಚಿವ ದಿನೇಶ್‌ ಗುಂಡೂರಾವ್‌

ನಬಾರ್ಡ್‌ನಲ್ಲಿ ಕಳೆದ ವರ್ಷ 5600 ಕೋಟಿ ರು.ಗಳನ್ನು ಅಲ್ಪಾವಧಿ ಸಾಲಕ್ಕಾಗಿ ನೀಡಲಾಗಿತ್ತು. ಈ ವರ್ಷ 2340 ಕೊಟಿ ರು. ನೀಡಿದ್ದಾರೆ. ಇದು ರೈತರಿಗೆ ಮಾಡಿರುವ ದ್ರೋಹ. ನಬಾರ್ಡ್ ನವರು 4.50% ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. ಮಾಮೂಲಿಯಾಗಿ ಸಾಲ ಕೊಡುವುದು ಯಾವಾಗಲೂ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ. ಈ ಬಾರಿ ಎಲ್ಲಾ ರಾಜ್ಯಗಳಿಗೂ ಸಾಲ ಕಡಿತ ಮಾಡಲಾಗಿದೆ. ಈ ಕುರಿತು ನಿರ್ಮಲಾ ಸೀತಾರಾಮನ್ ರನ್ನು ಭೇಟಿಯಾಗಿ ವಿವರಿಸಲಾಗಿದೆ. ಆರು ವರ್ಷಗಳಿಂದ ಜಾಸ್ತಿ ಕೊಟ್ಟಿದ್ದು, ಈಗ ಕಡಿಮೆ ಮಾಡಿದರೆ ಹೇಗೆ? ಎಂದು ತಿಳಿಸಿದರು.

ನಮ್ಮ ಸರ್ಕಾರದಿಂದ 5 ಲಕ್ಷವರೆಗೆ ಬಡ್ಡಿರಹಿತವಾಗಿ ಸಾಲ ನೀಡಲಾಗುತ್ತಿದೆ. 4.50% ಬಡ್ಡಿ ಕೊಡುವುದು ನಮ್ಮ ಸರ್ಕಾರ. ದೀರ್ಘಾವಧಿ ಮತ್ತು ಮಧ್ಯಮಾವಧಿ ಸಾಲವನ್ನು 5-15 ಲಕ್ಷದವರೆಗೆ 3% ಬಡ್ಡಿದರದಲ್ಲಿ ನೀಡಲಾಗುತ್ತಿದೆ. 1,200 ಕೋಟಿಗಳಿಗಿಂತಲೂ ಹೆಚ್ಚು ಬಡ್ಡಿಯನ್ನು ನಾವು ನೀಡುತ್ತೇವೆ. ಈ ಬಗ್ಗೆ ಆರ್.ಅಶೋಕ್, ಬಿ.ಎಸ್.ಯಡಿಯೂರಪ್ಪ, ಯತ್ನಾಳ್, ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ
ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!