ರತನ್ ಟಾಟಾ ಅವರ ಅಂತಿಮ ದರ್ಶನದ ವೇಳೆ ಇಶಾ ಅಂಬಾನಿ ನಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ರೋಲ್‌ಗೆ ಗುರಿಯಾಗಿದ್ದಾರೆ. ಗಣ್ಯರು ಟಾಟಾ ಕುಟುಂಬಕ್ಕೆ ಸಾಂತ್ವನ ಹೇಳುತ್ತಿರುವಾಗ ಇಶಾ ನಗುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
ಮುಂಬೈ: ಇಡೀ ದೇಶವೇ ಉದ್ಯಮಿ ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿಯುತ್ತಿದೆ. ಅಕ್ಟೋಬರ್ 9ರಂದು ರಾತ್ರಿ ನಿಧನವಾಗಿದ್ದ ರತನ್ ಅಂಬಾನಿ ಅವರ ಪಾರ್ಥಿವ ಶರೀರವನ್ನು ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಕೇಂದ್ರದಲ್ಲಿ ಇರಿಸಲಾಗಿದೆ. ಸಾರ್ವಜನಿಕರು ಸೇರಿದಂತೆ ದೇಶದ ಉದ್ದಿಮೆದಾರರು, ರಾಜಕೀಯ ಮುಖಂಡರು ಆಗಮಿಸಿ ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಭಾರತದ ಶ್ರೀಮಂತ ವ್ಯಕ್ತಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಕೇಶ್ ಅಂಬಾನಿ ಪತ್ನಿ ನೀತಾ ಜೊತೆ ಆಗಮಿಸ ರತನ್ ಟಾಟಾ ಅವರಿಗೆ ತಮ್ಮ ಅಂತಿಮ ಪುಷ್ಪ ನಮನಗಳನ್ನು ಸಲ್ಲಿಸಿದರು. ಇದೀಗ ಮುಕೇಶ್ ಅಂಬಾನಿ ಪುತ್ರಿ ಇಶಾ ಅಂತಿಮ ದರ್ಶನ ಪಡೆಯುವ ಸಂದರ್ಭದಲ್ಲಿ ನಕ್ಕು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದ್ದಾರೆ.
ಪತಿ ಆನಂದ್ ಪಿರಮಲ್ ಜೊತೆ ಇಶಾ ಅಂಬಾನಿ ಸಹ ರತನ್ ಟಾಟಾ ಅವರ ಅಂತಿಮ ದರ್ಶನ ಪಡೆಯಲು ಆಗಮಿಸಿದ್ದರು. ಅಲ್ಲಿಗೆ ಆಗಮಿಸಿದ್ದ ಗಣ್ಯರು ಟಾಟಾ ಕುಟುಂಬಸ್ಥರಿಗೆ ನಮಸ್ಕರಿಸಿ ಸಾಂತ್ವಾನ ಹೇಳುವ ಕೆಲಸವನ್ನು ಮಾಡುತ್ತಿದ್ದರು. ಈ ಸಮಯದಲ್ಲಿಯೇ ಇಶಾ ಅಂಬಾನಿ ನಗುತ್ತಿರುವ ವಿಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ಮಿಂಚನಂತೆ ಶೇರ್ ಆಗುತ್ತಿದೆ.
undefined
ಇಶಾ ಜೊತೆಯಲ್ಲಿಯೂ ಮುಕೇಶ್ ಅಂಬಾನಿ ಅವರನ್ನು ಸಹ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಈ ವಿಡಿಯೋಗೆ ನೆಟ್ಟಿಗರು ತರೇಹವಾರಿ ಕಮೆಂಟ್ ಮಾಡಲಾರಂಭಿಸಿದ್ದಾರೆ. ನೀವು ಎಲ್ಲಿದ್ದೀರಿ ಎಂಬುದನ್ನು ತಿಳಿದುಕೊಳ್ಳಿ. ಇಂತಹ ಸಮಯದಲ್ಲಿ ಅಷ್ಟಕ್ಕೂ ಈ ನಗು ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಸುತ್ತಲೂ ಕ್ಯಾಮೆರಾಗಳಿದ್ದಾಗ ತುಂಬಾನೇ ಎಚ್ಚರಿಕೆಯಿಂದಿರಬೇಕು ಎಂದು ಕೆಲವೊಂದು ಸಲಹೆಗಳನ್ನು ನೀಡಲಾಗಿದೆ.
ರತನ್ ಟಾಟಾ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. 86 ವರ್ಷದ ರತನ್ ಟಾಟಾ ಅವರನ್ನು ಸೋಮವಾರ ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು. ಆದರೆ ನಾನು ಆರೋಗ್ಯವಾಗಿದ್ದೇನೆ ಎಂದು ರತನ್ ಟಾಟಾ ಟ್ವೀಟ್ ಮಾಡಿ ಮಂಗಳವಾರ ಮಾಹಿತಿ ನೀಡಿದ್ದರು. ಆರೋಗ್ಯವಾಗಿದ್ದೇನೆ ಮತ್ತು ಉತ್ತಮ ಮನಸ್ಥಿತಿಯಲ್ಲಿದ್ದೇನೆ, ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು. ಬುಧವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಸುದ್ದಿ ಹೊರಬಂದ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
'ನೀವು ಹೋದ್ರಿ ಅಂತ ಎಲ್ಲರೂ ಹೇಳ್ತಿದ್ದಾರೆ' ರತನ್ ಟಾಟಾ ನಿಧನಕ್ಕೆ ಕಣ್ಣೀರಿಟ್ಟ ಮಾಜಿ ಗೆಳತಿ
ರತನ್ ಟಾಟಾ 1999ರಲ್ಲಿ ತಮ್ಮ ಮುತ್ತಜ್ಜ ಪ್ರಾರಂಭಿಸಿದ ಟಾಟಾ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. 2012 ರವರೆಗೆ ಟಾಟಾ ಸಂಸ್ಥೆಯನ್ನು ಮುನ್ನಡೆಸಿದರು. 1996ರಲ್ಲಿ ಟಾಟಾ ಟೆಲಿಸರ್ವಿಸಸ್ (TTML.NS) ಎಂಬ ದೂರಸಂಪರ್ಕ ಕಂಪನಿಯನ್ನು ಪ್ರಾರಂಭಿಸಿದರು. 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS.NS) ಎಂಬ ಮಾಹಿತಿ ತಂತ್ರಜ್ಞಾನ ಕಂಪನಿಯನ್ನು ಆರಂಭಿಸಿದ್ದರು. ಅಧ್ಯಕ್ಷ ಸ್ಥಾನದಿಂದ ನಿವೃತ್ತರಾದ ನಂತರ, ರತನ್ ಟಾಟಾ ಅವರನ್ನು ಟಾಟಾ ಸನ್ಸ್, ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಸ್ಟೀಲ್ ಮತ್ತು ಟಾಟಾ ಕೆಮಿಕಲ್ಸ್‌ನ ಗೌರವಾನ್ವಿತ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಪಾರ್ಸಿ ಸಮುದಾಯಕ್ಕೆ ಸೇರಿದ ಟಾಟಾ ಅವರಿಗೆ 2000 ರಲ್ಲಿ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ನಂತರ, 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ರತನ್ ಟಾಟಾ ವಾಸಿಸುತ್ತಿದ್ದ ಮುಂಬೈನ ನಿವಾಸದಲ್ಲಿ ಏನೆಲ್ಲಾ ಇತ್ತು?