ಉದ್ಯಮಿಗಳ ನೆರವಿಗೆ ನಿಂತ ಅಂಬಾನಿ/ ರಿಲಯನ್ಸ್ ಸಂಸ್ಥೆಯ ಕುಟುಂಬದವರಿಗೂ ಲಸಿಕೆ/ ಕೊರೋನಾ ವಿರುದ್ಧ ಅಂಬಾನಿ ಹೋರಾಟ/ ಮಹಾರಾಷ್ಟ್ರ ಸರ್ಕಾರಕ್ಕೆ ಆಮ್ಲಜನ ನೀಡುವ ಕೆಲಸ ಮಾಡಿದ್ದರು
ನವದೆಹಲಿ(ಏ.23): ಉದ್ಯಮಿ ಮುಕೇಶ್ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ಲಿ. ತನ್ನ ಜಾಮ್ನಗರ ತೈಲ ಸಂಸ್ಕರಣೆ ಘಟಕವನ್ನು ವೈದ್ಯಕೀಯ ಶ್ರೇಣಿಯ ಆಮ್ಲಜನಕ ಉತ್ಪಾದನಾ ಘಟಕವನ್ನಾಗಿ ಪರಿವರ್ತಿಸಿತ್ತು. ಪ್ರತಿ ದಿನ ಇಲ್ಲಿ 700 ಟನ್‌ಗೂ ಅಧಿಕ ಆಮ್ಲಜನಕ ಉತ್ಪಾದನೆ ಮಾಡುತ್ತಿದ್ದು, ಕೋವಿಡ್-19ರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯಗಳಿಗೆ ಉಚಿತವಾಗಿ ಪೂರೈಸಲಾಗುತ್ತಿದೆ.
ಇನ್ನೊಂದು ಕಡೆ ಕೊರೋನಾ ಎರಡನೇ ಅಲೆ ದೇಶದಲ್ಲಿ ತೀವ್ರವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ಲಸಿಕೆ ಅಭಿಯಾನವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮೇ1ರಿಂದ 18 ವರ್ಷ ಮೇಲ್ಪಟ್ಟವರಿಗೆಲ್ಲಾ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
undefined
ಅಂಬಾನಿ ದಂಪತಿಯಿಂದ ಮಹಾರಾಷ್ಟ್ರಕ್ಕೆ ಆಕ್ಸಿಜನ್
ಈ ಮಧ್ಯೆ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ದೇಶದ ಎಲ್ಲಾ ಭಾಗಗಳಲ್ಲಿರುವ ತನ್ನ ಉದ್ಯೋಗಿಗಳಿಗೆ ಮತ್ತು ಉದ್ಯೋಗಿಗಳ 18 ವರ್ಷ ಮೇಲ್ಪಟ್ಟ ಕುಟುಂಬ ಸದಸ್ಯರಿಗೆ ಮೇ 1ರಿಂದ ಲಸಿಕೆ ಹಾಕಿಸುವ ಆರ್-ಸುರಕ್ಷಾ ಅಭಿಯಾನ ಆರಂಭಿಸಲಿದೆ.
ಸಂಸ್ಥೆಯ ಪ್ರತಿಯೊಬ್ಬ ಉದ್ಯೋಗಿಯೂ ಮತ್ತು ಅವರ ಕುಟುಂಬದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಬೇಕು ಎಂಬ ಉದ್ದೇಶವನ್ನು ರಿಲಯನ್ಸ್ ಸಂಸ್ಥೆಯದ್ದು. ಮಹಾರಾಷ್ಟ್ರ ಸರ್ಕಾರಕ್ಕೆ ಆಕ್ಸಿಜನ್ ನೀಡಿದ್ದ ಅಂಬಾನಿ ಇದೀಗ ಅಂಥದ್ದೇ ಒಂದು ಹೆಜ್ಜೆ ಇಟ್ಟಿದ್ದಾರೆ.
ಭಾರತದಲ್ಲಿ ಒಂದೇ ದಿನ 3,32,730 ಹೊಸ ಕೊರೋನಾ ಸೋಂಕಿನ ಪ್ರಕರಣ ದಾಖಲಾಗಿದೆ. ಪ್ರಪಂಚದ ಲೆಕ್ಕದಲ್ಲಿ ಕೊರೋನಾ ಪೀಡಿತ ರಾಷ್ಟ್ರಗಳ ಪೈಕಿ ಭಾರತಕ್ಕೆ ಎರಡನೇ ಸ್ಥಾನ.