
ಮುಂಬೈ (ಮಾ.26): ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪ್ರಮುಖ ಮಸೀದಿಯೊಂದರ ಗೋಡೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಧಾರ್ಮಿಕ ಘೋಷಣೆಗಳನ್ನು ಬರೆದಿದ್ದು ಕೋಮು ಗಲಭೆಗೆ ಕಾರಣವಾದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಭೋಜಶಾಲಾ ಮಸೀದಿ ಮೂಲತಃ ಸರಸ್ವತಿ ದೇಗುಲ: ಖ್ಯಾತ ಇತಿಹಾಸ ತಜ್ಞ ಮೊಹಮ್ಮದ್
ಮಜಲ್‌ಗಾಂವ್‌ನ ಮರ್ಕಝಿ ಮಸೀದಿಯ ಗೋಡೆಯ ಮೇಲೆ ಸಂಜೆಯ ಸಮಯದಲ್ಲಿ ವ್ಯಕ್ತಿಯೊಬ್ಬ ಶ್ರೀರಾಮ ಎಂದು ಬರೆದಿದ್ದಾನೆ. ಇದನ್ನು ವಿರೋಧಿಸಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಂಮರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಇನ್ನೂ ಉದ್ವಿಗ್ನ ವಾತಾವರಣವಿದ್ದು, ಪೊಲೀಸರು ನಾಕಾಬಂಧಿ ಹಾಕಿದ್ದಾರೆ.
ಭಾರೀ ಬಿಗಿ ಭದ್ರತೆಯಲ್ಲಿ ವಿವಾದಿತ ಕಮಲ್ ಮೌಲಾ ಮಸೀದಿ-ಭೋಜ್‌ಶಾಲಾ ದೇಗುಲ ಸಮೀಕ್ಷೆ ಆರಂಭ
ಸಂಜೆ 5 ಗಂಟೆ ಸುಮಾರಿಗೆ ಕೆಲ ವಿರೋಧಿಗಳು ಧಾರ್ಮಿಕತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಮಸೀದಿಯ ಗೋಡೆಯ ಮೇಲೆ ಶ್ರೀರಾಮ ಎಂದು ಬರೆದಿದ್ದಾರೆ. ನಾವು ಸೆಕ್ಷನ್ 295 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ನಾವು ದುಷ್ಕರ್ಮಿಯನ್ನು ಪತ್ತೆ ಹಚ್ಚುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ ಎಂದು ಮಜಲಗಾಂವ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಧೀರಜ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ