ಹೃದಯಾಘಾತ: ಶ್ರೀಲಂಕಾದಿಂದ ಬೆಂಗಳೂರಿಗೆ ISRO ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಏರ್‌ಲಿಫ್ಟ್‌

By Anusha Kb  |  First Published Jul 10, 2023, 2:26 PM IST

ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.


ಬೆಂಗಳೂರು: ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದ್ದು, ಶ್ರೀಲಂಕಾದಲ್ಲಿದ್ದ ಅವರನ್ನು ಏರ್‌ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆತರಲಾಗುತ್ತಿದೆ.  ಕಸ್ತೂರಿ ರಂಗನ್ ಅವರು ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಶ್ರೀಲಂಕಾಕ್ಕೆ ತೆರಳಿದ್ದ ಅವರು ಅಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. 
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಡಾ ಕೃಷ್ಣಸ್ವಾಮಿ ಕಸ್ತೂರಿ ರಂಗನ್ ಅವರನ್ನು ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಅಲ್ಲಿ ಖ್ಯಾತ ಹೃದಯತಜ್ಞ ಡಾ. ದೇವಿಶೆಟ್ಟಿ ಅವರು ಕಸ್ತೂರಿ ರಂಗನ್ ಅವರ ಆರೋಗ್ಯದ ಬಗ್ಗೆ ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.  83 ವರ್ಷದ ಕಸ್ತೂರಿ ರಂಗನ್ ಅವರಿಗೆ  ಭಾರತ ಸರ್ಕಾರದಿಂದ ನೀಡಲಾಗುವ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ( DK Shivakumar) ಅವರು ಈ ವಿಚಾರವನ್ನು ಖಚಿತಪಡಿಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಕಸ್ತೂರಿ ರಂಗನ್ ಅವರ ಆರೋಗ್ಯ ಹಾಗೂ ಚಿಕಿತ್ಸೆ ಬಗ್ಗೆ ಕೂಲಂಕುಶವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. 
 

Tap to resize

Latest Videos

ಕಸ್ತೂರಿ ರಂಗನ್ ವರದಿ ಪುನರ್ ಪರಿಶೀಲನೆ ಮಾತ್ರವಲ್ಲ ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂಬ ಒತ್ತಾಯ

click me!