Breaking: ಪ್ರಧಾನಿ ಮೋದಿ ನಿವಾಸದ ಮೇಲೆ ಡ್ರೋನ್‌ ಹಾರಾಟ: ದೆಹಲಿ ಪೊಲೀಸರಿಂದ ತೀವ್ರ ತನಿಖೆ

Published : Jul 03, 2023, 09:33 AM ISTUpdated : Jul 03, 2023, 11:24 AM IST
Breaking: ಪ್ರಧಾನಿ ಮೋದಿ ನಿವಾಸದ ಮೇಲೆ ಡ್ರೋನ್‌ ಹಾರಾಟ: ದೆಹಲಿ ಪೊಲೀಸರಿಂದ ತೀವ್ರ ತನಿಖೆ

ಸಾರಾಂಶ

ಬೆಳಗಿನ ಜಾವ 5 ಗಂಟೆ ಸುಮಾರಿಗೆ, ಪ್ರಧಾನಿಯನ್ನು ರಕ್ಷಿಸುವ ಗಣ್ಯ ಪಡೆಯಾದ ವಿಶೇಷ ರಕ್ಷಣಾ ಗುಂಪಿನ ಅಧಿಕಾರಿಗಳು ಡ್ರೋನ್ ವೀಕ್ಷಣೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನವದೆಹಲಿ (ಜುಲೈ 3, 2023): ರಾಷ್ಟ್ರ ರಾಜಧಾನಿಯ ಪ್ರಧಾನಿ ಅಧಿಕೃತ ನಿವಾಸದ ಬಳಿ ಡ್ರೋನ್‌ ಹಾರಾಡಿದೆ. ಪ್ರಧಾನಿ ನಿವಾಸದ ಬಳಿ ನೋ ಫ್ಲೈಯಿಂಗ್‌ ಝೋನ್ ಇದ್ದರೂ ಡ್ರೋನ್‌ ಹಾರಾಡಿರೋದು ಆತಂಕ ಮೂಡಿಸಿದ್ದು, ಈ ಹಿನ್ನೆಲೆ ಎಸ್‌ಪಿಜಿ ಕೂಡಲೇ ಅಲರ್ಟ್‌ ಆಗಿದೆ.  

ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಮೋದಿ ನಿವಾಸದ ಬಳಿ ಡ್ರೋನ್‌ ಹಾರಾಟ ನಡೆಸಿದ್ದು, ಈ ಹಿನ್ನೆಲೆ ಇದನ್ನು ಕಂಡ ಪ್ರಧಾನಿಗಳ ವಿಶೇಷ ಭದ್ರತಾ ಪಡೆಯಾದ ಎಸ್‌ಪಿಜಿ ಕೂಡಲೇ ಅಲರ್ಟ್‌ ಆಗಿದೆ. 

ಪ್ರಧಾನಿ ಮೋದಿ ಅವರ ನಿವಾಸವು ರೆಡ್ ನೋ ಫ್ಲೈ ಝೋನ್ ಅಥವಾ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ ಎಂಬುದು ಗಮನಿಸಬೇಕಾದ ಸಂಗತಿ.  ನೋ ಫ್ಲೈಯಿಂಗ್ ಝೋನ್‌ನಲ್ಲಿ ಬೆಳಗ್ಗೆ 5 - 5:30ರ ಸಮಯದಲ್ಲಿ ಡ್ರೋನ್ ಹಾರಾಟ ನಡೆಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ದೆಹಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದೂ ವರದಿಯಾಗಿದೆ. 

ಬೆಳಗಿನ ಜಾವ 5 ಗಂಟೆ ಸುಮಾರಿಗೆ, ಪ್ರಧಾನಿಯನ್ನು ರಕ್ಷಿಸುವ ಗಣ್ಯ ಪಡೆಯಾದ ವಿಶೇಷ ರಕ್ಷಣಾ ಗುಂಪಿನ ಅಧಿಕಾರಿಗಳು ಡ್ರೋನ್ ವೀಕ್ಷಣೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಈ ಎಚ್ಚರಿಕೆಯ ನಂತರ, ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆದರೆ, ಇದುವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಈ ಸಂಬಂಧ ಮಾಹಿತಿ ನೀಡಿದ ಅಧಿಕಾರಿಗಳು "ಇದುವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ. ಶೋಧ ನಡೆಯುತ್ತಿದೆ" ಎಂದು ಮಾಹಿತಿ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: T20 World Cup 2026 - ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದಕ್ಷಿಣ ಆಫ್ರಿಕಾ ಹೈವೋಲ್ಟೇಜ್ ಮ್ಯಾಚ್
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ