
ನವದೆಹಲಿ (ಆ.1):ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಮಂಗಳವಾರ ಇಳಿಸಿವೆ. 19ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 19 ಕೆಜಿ ವಾಣೀಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ಜುಲೈನಲ್ಲಿ ಕೊನೆಯದಾಗ ಪರಿಷ್ಕರಣೆ ಮಾಡಲಾಗಿತ್ತು. ತೆರಿಗೆಗಳನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಇದು ಬದಲಾಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಇಂದಿನಿಂದ ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ರಿಟೇಲ್ ದರ 1680 ರೂಪಾಯಿ ಆಗಿರಲಿದೆ ಎನ್ನಲಾಗಿದೆ. ಇನ್ನು ಕೋಲ್ಕತ್ತಾ, ಮುಂಬೈ ಹಾಗೂ ಚೆನ್ನೈನಲ್ಲಿ ಕ್ರಮವಾಗು 1802, 1640 ಹಾಗೂ 1852.50 ರೂಪಾಯಿ ಆಗಿರಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳು ದೇಶೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ.
ಹಾಲಿ ವರ್ಷದ ಮಾರ್ಚ್ 1 ರಿಂದ 14.2 ಕೆಜಿ ಎಲ್‌ಪಿಜಿ ಗೃಹಬಳಕೆಯೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗಿತ್ತು. ಸಬ್ಸಿಡಿ ರಹಿತ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಕ್ರಮವಾಗಿ ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ₹1,103, ₹1,129, ₹1,102.50 ಮತ್ತು ₹1,118.50 ಆಗಿದೆ.
ತೆರಿಗೆ ಹೆಸರಲ್ಲಿ ಕಲೆಕ್ಷನ್‌ಗೆ ಕುಂತ ಸರ್ಕಾರ, ಬಡವರ ಬದುಕು ನಾಳೆಯಿಂದ ದುರ್ಬರ!
ಪ್ರತಿ ತಿಂಗಳೂ ಎಲ್‌ಪಿಜಿ ಬೆಲೆ ಪರಿಷ್ಕರಣೆ: ರಾಜ್ಯ ನಡೆಸುವ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ. ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ದೇಶೀಯ ಅಡುಗೆ ಅನಿಲದ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ದೇಶೀಯ ಎಲ್‌ಪಿಜಿ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ. ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ.
9 ವರ್ಷದಲ್ಲಿ 190 ಮಿಲಿಯನ್ LPG, ಎಲ್ಲಾ ಗ್ರಾಮಕ್ಕೆ ವಿದ್ಯುತ್ ಸಂಪರ್ಕ; ಜಿ20 ಸಭೆಯಲ್ಲಿ ಮೋದಿ ಭಾಷಣ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ