ಕೇಂದ್ರ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ!

Published : Jun 09, 2021, 05:50 PM IST
ಕೇಂದ್ರ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ!

ಸಾರಾಂಶ

* ಕೇಂದ್ರ ಚುನಾವಣಾ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ ನೇಮಕ * ನೇಮಕ ಮಾಡಿ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ * ಅನೂಪ್ ಚಂದ್ರ ಪಾಂಡೆ ನಿವೃತ್ತ ಐಎಎಸ್ ಅಧಿಕಾರಿ * ಉತ್ತರ ಪ್ರದೇಶ್ ಕೇಡರ್ ನಿವೃತ್ತ ಅಧಿಕಾರಿ

ನವದೆಹಲಿ(ಜೂ.09): ಉತ್ತರ ಪ್ರದೇಶ ಕೇಡರ್​ನ ನಿವೃತ್ತ ಐಎಎಸ್ ಅಧಿಕಾರಿ ಅನೂಪ್ ಚಂದ್ರ ಪಾಂಡೆಯವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಮಂಗಳವಾರ ನೇಮಿಸಲಾಗಿದೆ. 

ಸುಶೀಲ್ ಚಂದ್ರ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅನೂಪ್ ಚಂದ್ರ ಪಾಂಡೆ ಅವರನ್ನು ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ 1984ರ ಬ್ಯಾಚ್​ನ ಈ ಐಎಎಸ್ ಅಧಿಕಾರಿಯ ನೇಮಕ ಮಾಡಲಾಗಿದೆ.

ಸಂವಿಧಾನದ 324ನೇ ಪರಿಚ್ಛೇದದ ಷರತ್ತು 92)ರ ಅನುಸಾರ, ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಚುನಾವಣಾ ಆಯುಕ್ತರಾಗಿ ಶ್ರೀ ಅನೂಪ್ ಚಂದ್ರ ಪಾಂಡೆ, ಐಎಎಸ್(ನಿವೃತ್ತ) ಅವರನ್ನು ನೇಮಕ ಮಾಡಲು ರಾಷ್ಟ್ರಪತಿ ಸಂತೋಷಪಟ್ಟಿದ್ದಾರೆ ಎಂದು ಅಧಿಚೂಚನೆಯಲ್ಲಿ ತಿಳಿಸಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: 2026ರ ಐಪಿಎಲ್ ಟೂರ್ನಿಗೂ ಮುನ್ನ ಆರ್‌ಸಿಬಿ ಫ್ಯಾನ್ಸ್‌ಗೆ ಸಿಹಿ ಸುದ್ದಿ! ಮಹತ್ವದ ಅಪ್‌ಡೇಟ್ಸ್ ಹಂಚಿಕೊಂಡ ಬೆಂಗಳೂರು ಫ್ರಾಂಚೈಸಿ
ಹಾರ್ಮುಜ್ ಜಲಸಂಧಿ ದಾಟದ ತೈಲ ಹಡಗು: ಭಾರತ ಸೇರಿದಂತೆ ಜಗತ್ತಿಗೆ ಕಾದಿದೆಯೇ ಪೆಟ್ರೋಲ್, ಗ್ಯಾಸ್ ಸಂಕಷ್ಟ?