ಮಾತುಕತೆ ಏನಿದ್ದರೂ ಪಿಒಕೆ ವಾಪಸ್‌ ಕುರಿತು ಮಾತ್ರ: ಅಮೆರಿಕ ಉಪಾಧ್ಯಕ್ಷಗೆ ಮೋದಿ ಖಡಕ್‌ ಸಂದೇಶ

Published : May 12, 2025, 06:23 AM IST
ಮಾತುಕತೆ ಏನಿದ್ದರೂ ಪಿಒಕೆ ವಾಪಸ್‌ ಕುರಿತು ಮಾತ್ರ: ಅಮೆರಿಕ ಉಪಾಧ್ಯಕ್ಷಗೆ ಮೋದಿ ಖಡಕ್‌ ಸಂದೇಶ

ಸಾರಾಂಶ

ಪಾಕಿಸ್ತಾನದ ಜೊತೆಗೆ ಇನ್ನೇನಾದರೂ ಮಾತುಕತೆ ಇದೆ ಎಂದಾದಲ್ಲಿ, ಅದು ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಮರಳಿಸುವ ಕುರಿತು ಮತ್ತು ಪಾಕಿಸ್ತಾನದ ನೆಲದಲ್ಲಿರುವ ಭಯೋತ್ಪಾದಕರನ್ನು ಹಸ್ತಾಂತರಿಸುವ ಕುರಿತು ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರೆ.

ನವದೆಹಲಿ (ಮೇ.12): ಪಾಕಿಸ್ತಾನದ ಜೊತೆಗೆ ಇನ್ನೇನಾದರೂ ಮಾತುಕತೆ ಇದೆ ಎಂದಾದಲ್ಲಿ, ಅದು ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತಕ್ಕೆ ಮರಳಿಸುವ ಕುರಿತು ಮತ್ತು ಪಾಕಿಸ್ತಾನದ ನೆಲದಲ್ಲಿರುವ ಭಯೋತ್ಪಾದಕರನ್ನು ಹಸ್ತಾಂತರಿಸುವ ಕುರಿತು ಮಾತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಅತ್ಯಂತ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಪಾಕ್‌ನೊಂದಿಗೆ ದೇಶದ ಸಂಬಂಧದ ಕುರಿತು ಸುಳಿವು ನೀಡಿದ್ದಾರೆ. ‘ಆಪರೇಷನ್ ಸಿಂದೂರ’ ಮೂಲಕ ಪಾಕಿಸ್ತಾನಕ್ಕೆ ಭಾರತ ಛಡಿಯೇಟು ಕೊಡಲು ಆರಂಭಿಸಿದ ಬಳಿಕ, ‘ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಳ್ಳಬೇಕು. 

ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕು’ ಎಂದು ಒತ್ತಾಯಿಸಲು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್‌ ಅವರು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿದ್ದರು. ಈ ವೇಳೆ ಪ್ರತಿಕ್ರಿಯಿಸಿದ ಪ್ರಧಾನಿ, ‘ಕಾಶ್ಮೀರದ ಬಗ್ಗೆ ನಮಗೆ ಸ್ಪಷ್ಟವಾದ ನಿಲುವಿದೆ.  ಪಿಒಕೆಯನ್ನು ಭಾರತಕ್ಕೆ ಹಿಂದಿರುಗಿಸಬೇಕು. ಅವರು ಉಗ್ರವಾದದ ಬಗ್ಗೆ ಮಾತನಾಡಿದರೆ, ನಾವು ಮಾತನಾಡಬಹುದು. ಅದಕ್ಕೆ ಹೊರತಾಗಿ ಮಾತನಾಡಲು ಬೇರೆ ಯಾವುದೇ ವಿಷಯವಿಲ್ಲ. ಎರಡು ದೇಶಗಳ ನಡುವೆ ಕಾಶ್ಮೀರ ವಿಷಯದಲ್ಲಿ ಮೂರನೇ ದೇಶವೊಂದು ಮಧ್ಯಸ್ಥಿಕೆ ವಹಿಸುವುದು ನಮಗೆ ಇಷ್ಟವಿಲ್ಲ. ಅದರ ಅಗತ್ಯವೂ ಇಲ್ಲ’ ಎಂದರು ಎಂದು ತಿಳಿದುಬಂದಿದೆ.

ಮಿಟ್ಟಿ ಮೇ ಮಿಲಾದೋ..: ‘ಉಗ್ರರಿಗೆ ಇನ್ನು ಸುರಕ್ಷಿತ ತಾಣಗಳಿಲ್ಲ. ಯಾರೂ ಇನ್ನು ಅಸ್ಪ್ರಶ್ಯರಲ್ಲ. ಯಾರನ್ನೇ ಆದರೂ ಹುಡುಕಿ ಹೊಡೆಯಬೇಕು. ಇನ್ನು ಮುಂದೆ ಈ ಹಿಂದೆ ಇದ್ದಂಥ ಪರಿಸ್ಥಿತಿ ಇರುವುದಿಲ್ಲ. ಯಾವುದನ್ನೂ ಇನ್ನು ಎಂದು ಮೋದಿ ಹೇಳಿದರು’ ಎಂದಿರುವ ಮೂಲಗಳು, ‘ಇತ್ತೀಚಿನ ಪಾಕ್‌ ಉಗ್ರ ನೆಲೆಗಳ ಮೇಲಿನ ದಾಳಿಗೂ ಮುನ್ನ ‘ಇನ್ಕೋ ಮಿಟ್ಟಿ ಮೇ ಮಿಲಾ ದೋ’ (ಅವರನ್ನು ಮಣ್ಣಲ್ಲಿ ಮಣ್ಣು ಮಾಡಿ’ ಎಂದು ಅವರು ಸೂಚಿಸಿದರು. ಆ ಪ್ರಕಾರ ಉಗ್ರ ತಾಣ ಧ್ವಂಸ ಮಾಡಲಾಯಿತು. ಇನ್ನು ಉಳಿದಿದ್ದು ಬಾಕಿ ಇದೆ’ ಎಂದು ಹೇಳಿವೆ.

ಆಪರೇಷನ್‌ ಸಿಂದೂರ ನಿಲ್ಲಲ್ಲ, ಗುಂಡು ಹಾರಿಸಿದರೆ ಬಾಂಬ್ ಮೂಲಕ ಉತ್ತರ ಎಂದ ಮೋದಿ

ಎಚ್ಚರದಿಂದಿರಿ: ಆಪರೇಷನ್‌ ಸಿಂದೂರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯ ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ‘ಸದಾ ಎಚ್ಚರದಿಂದಿದ್ದು, ಸ್ಪಷ್ಟ ಸಂವಹನವನ್ನು ಮುಂದುವರೆಸಿ’ ಎಂದು ಸೂಚಿಸಿದ್ದಾರೆ. ಈ ಮೂಲಕ, ‘ಪಾಕ್‌ ವಿರುದ್ಧದ ಪ್ರತೀಕಾರ ಇನ್ನೂ ಮುಗಿದಿಲ್ಲ’ ಎಂದು ಪರೋಕ್ಷವಾಗಿ ಹೇಳಿದ್ದಾರೆ. ದೇಶವು ಸೂಕ್ಷ್ಮ ಪರಿಸ್ಥಿತಿಯಲ್ಲಿರುವ ಈ ಸಮಯದಲ್ಲಿ ಜಾಗರೂಕತೆ, ಸಂಸ್ಥೆಗಳ ನಡುವಿನ ಸಮನ್ವಯ ಮತ್ತು ಸ್ಪಷ್ಟ ಸಂವಹನಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್, ವಿಮಾನದಲ್ಲಿ ಮಾಲೀಕನ ಜೊತೆ 10ಕೆಜಿ ತೂಕದ ಪೆಟ್ಸ್ ಪ್ರಯಾಣಕ್ಕೆ ಅನುಮತಿ
ಮಗಳ ಸುರಕ್ಷತೆಗಾಗಿ ಅಮ್ಮನೇ ಅಪ್ಪನಾದ: ಗಂಡನ ಸಾವಿನ ನಂತರ ಗಂಡಿನಂತೆ ವೇಷ ಧರಿಸಿ ಬದುಕಿದ ತಾಯಿ