ಕೋಲ್ಕತಾ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆ ರೇಪ್‌, ಕೊಲೆ: ಇಂದು ತೀರ್ಪು

Published : Jan 18, 2025, 08:53 AM IST
ಕೋಲ್ಕತಾ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆ ರೇಪ್‌, ಕೊಲೆ: ಇಂದು ತೀರ್ಪು

ಸಾರಾಂಶ

ಕೋಲ್ಕತಾದ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್‌ಗೆ ಸಿಬಿಐ ಗಲ್ಲು ಶಿಕ್ಷೆ ಕೋರಿದೆ. ಘಟನೆ ನಡೆದು 57 ದಿನಗಳ ನಂತರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಕೋಲ್ಕತಾ: ಇಡೀ ದೇಶದಲ್ಲಿ ಭಾರಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದ ಇಲ್ಲಿನ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಸಿಯಾಲ್ದಹಾ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಬೇಕಿದೆ. ಆರೋಪಿ ಸಂಜಯ್‌ ರಾಯ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೇಂದ್ರ ತನಿಖಾ ದಳ (ಸಿಬಿಐ) ವಾದ ಮಂಡಿಸಿತ್ತು. ಘಟನೆ ಸಂಭವಿಸಿದ 57 ದಿ ನಂತರ ತೀರ್ಪು ಪ್ರಕಟವಾಗಿದೆ.

ಏನಿದು ಪ್ರಕರಣ?

ಕಳೆದ ವರ್ಷ ಆ.9ರಂದು ಕೋಲ್ಕತಾದ ಆರ್‌ ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಮೇಲೆ, ‘ಪೊಲೀಸರ ಸಹಾಯಕ’ ಎಂಬ ಹುದ್ದೆಯಲ್ಲಿದ್ದ ಸಂಜಯ್‌ ರಾಯ್‌, ಅತ್ಯಾಚಾರ ಮತ್ತು ಕೊಲೆ ಮಾಡಿದ್ದ. ಈತನಿಗೆ ಕಾಲೇಜು ಪ್ರಚಾರ್ಯ ಸಂದೀಪ್‌ ಘೋಷ್‌ ಹಾಗೂ ಪೊಲೀಸ್‌ ಆಯುಕ್ತ ಮೊಂಡಲ್ ಅವರ ಬೆಂಬಲವೂ ಇದೆ ಎಂದು ಆರೋಪಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿ, ಸುಪ್ರೀಂ ಕೋರ್ಟ್‌ ಗಮನ ಸೆಳೆದಿತ್ತು. 

ಇದನ್ನೂ ಓದಿ: ವೈದ್ಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ: ಮಮತಾ ಕಿಡಿ

ಮತ್ತೊಂದೆಡೆ ಕೋಲ್ಕತಾ ಹೈಕೋರ್ಟ್‌ ಪ್ರಕರಣದ ತನಿಖೆಯನ್ನು ಕೋಲ್ಕತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿತ್ತು. ಇದರ ತನಿಖೆ ನಡೆಸಿದ ಸಿಬಿಐ, 50 ಸಾಕ್ಷಿಗಳು ಮತ್ತು ಹಲವು ಮಹತ್ತರ ದಾಖಲೆಗಳನ್ನು ತನಿಖೆಗೆ ಒಳಪಡಿಸಿ 45 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು. ಕೊನೆಯದಾಗಿ ಜ.9ರಂದು ಸಿಯಾಲ್ದಾಹ್‌ ನ್ಯಾಯಾಲಯ ಕೊನೆ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ಶನಿವಾರ ತೀರ್ಪು ನೀಡಲಿದೆ.

ಇದನ್ನೂ ಓದಿ: ಆರ್‌ಜಿ ಕರ್‌ ಆಸ್ಪತ್ರೆಯ ಪ್ರಿನ್ಸಿಪಾಲ್‌ನ ಮಾಫಿಯಾ ರಾಜ್‌; ಹೆಣಗಳ ಮಾರಾಟ, ಫೇಲ್‌ ಆದ ವಿದ್ಯಾರ್ಥಿಗಳಿಂದ ಕಮೀಷನ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!