'ಸರ್ಕಾರ ಮಾರಾಟದಲ್ಲಿ ಬ್ಯುಸಿ.. ಕೊರೋನಾದಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಿ'

By Suvarna NewsFirst Published Aug 26, 2021, 7:53 PM IST
Highlights

* ನಿಮ್ಮನ್ನು ನೀವು ಕಾಪಾಡಿಕೊಳ್ಳಿ
* ಕೇಂದ್ರ ಸರ್ಕಾರ ಸರ್ಕಾರದ ಆಸ್ತಿ ಮಾರಾಟ ಮಾಡುವುದರಲ್ಲಿ ತಲ್ಲೀನವಾಗಿದೆ
* ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ (ಆ. 26)  ಬಿಜೆಪಿ  ನೇತೃತ್ವದ ಕೇಂದ್ರ ಸರ್ಕಾರ ಸರ್ಕಾರದ ಆಸ್ತಿ ಮಾರಾಟ ಮಾಡುವುದರಲ್ಲಿ ತಲ್ಲೀನವಾಗಿದ್ದು ಕೊರೋನಾದಿಂದ ನಿಮ್ಮನ್ನು ನೀವು ರಕ್ಷಣೆ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕೊರೋನಾ ಪ್ರಕರಣ ಏರಿಕೆಯಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ. ಹೆಚ್ಚಾಗುತ್ತಿರುವ ಪ್ರಕರಣಗಳು ಆತಂಕ ತಂದಿವೆ. ಲಸಿಕಾ ಕಾರ್ಯಕ್ರಮ ಇನ್ನು ವೇಗ ಪಡೆದುಕೊಳ್ಳಬೇಕು ಎಂದಿದ್ದಾರೆ.

ಮೂರನೇ ಅಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ದಿಟ್ಟ ಕ್ರಮ

ಅರ್ಥ ವ್ಯವಸ್ಥೆ  ಕಾಪಾಡುವಲ್ಲಿ  ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪರಿಹಾರ ದ ಕಾರ್ಯಕ್ರಮಗಳ ಬಗ್ಗೆ ಯೋಚನೆ ಮಾಡುವುದನ್ನು ಕೇಂದ್ರ ಸರ್ಕಾರ  ಬಿಟ್ಟುಬಿಟ್ಟಿದೆ ಎಂದು ದೂರಿದ್ದಾರೆ. 

ಹೆಚ್ಚುತ್ತಿರುವ ಕೋವಿಡ್‌ ಸಂಖ್ಯೆಗಳು ಆತಂಕಕಾರಿಯಾಗಿವೆ. ಮುಂದಿನ ಅಲೆಯಲ್ಲಿ ಹೆಚ್ಚಿನ ಪರಿಣಾಮಗಳನ್ನು ಇಲ್ಲವಾಗಿಸುವ ಕಾರಣದಿಂದ ಲಸಿಕೀಕರಣ ಶೀಘ್ರಗತಿಯಲ್ಲಿ ಸಾಗಬೇಕಿದೆ. ನಿಮ್ಮನ್ನು ನೀವೇ ಸುರಕ್ಷಿತವಾಗಿರಿಸಿಕೊಳ್ಳಿ. ಏಕೆಂದರೆ ಭಾರತ ಸರಕಾರ ಸರ್ಕಾರಿ ಆಸ್ತಿ ಮಾರಾಟ ಮಾಡುತ್ತ ಕುಳಿತಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ಮಾಹಿತಿ ನೀಡಿರುವ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 46,164 ಹೊಸ ಕೊರೋನಾ ವೈರಸ್ ಪ್ರಕರಣಗಳನ್ನು ದಾಖಲಾಗಿದೆ. ಇನ್ನೊಂದು ಕಡೆ ಕೇರಳದಲ್ಲಿ ಹೆಚ್ಚಾಗುತ್ತಿರುವ ಪ್ರಕರಣಗಳು ಆತಂಕ ತಂದಿದೆ.  ಆಸ್ತಿ ಮಾರಾಟ ಹೇಳಿಕೆ ಸಂಬಂಧ ರಾಹುಲ್ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಡುವೆ ಟ್ವೀಟ್ ಯುದ್ಧ ನಡೆದಿತ್ತು. 

 

 

Rising numbers are worrying. Vaccination must pick up pace to avoid serious outcomes in the next wave.

Please take care of yourselves because GOI is busy with sales.

— Rahul Gandhi (@RahulGandhi)
click me!