
ಪಟನಾ(ಡಿ.30): ಅರುಣಾಚಲ ಪ್ರದೇಶದಲ್ಲಿ 6 ಮಂದಿ ಶಾಸಕರು ಜೆಡಿಯು ತೊರೆದು ಬಿಜೆಪಿಗೆ ಸೇರ್ಪಡೆ ಆದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಯು ನಡುವಿನ ಮನಸ್ತಾಪದ ಲಾಭ ಪಡೆಯಲು ಮುಂದಾಗಿರುವ ಆರ್‌ಜೆಡಿ, ನಿತೀಶ್ ಕುಮಾರ್ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಮರಳಲು ಆಹ್ವಾನ ನೀಡಿದೆ.
ಒಂದು ವೇಳೆ ತೇಜಸ್ವಿ ಯಾದವ್‌ಗೆ ಬಿಹಾರ ಮುಖ್ಯಮಂತ್ರಿ ಕುರ್ಚಿಯನ್ನು ಬಿಟ್ಟುಕೊಡಲು ಒಪ್ಪಿದರೆ, 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಆಗಿ ವಿಪಕ್ಷಗಳು ನಿತೀಶ್ ಕುಮಾರ್‌ಗೆ ಬೆಂಬಲ ನೀಡಲಿವೆ ಎಂದು ಆರ್‌ಜೆಡಿ ಆಫರ್ ನೀಡಿದೆ.
ಈ ಬಗ್ಗೆ ಮಾತನಾಡಿದ ಆರ್‌ಜೆಡಿಯ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್ ಉದಯ್ ನಾರಾಯಣ್ ಚೌಧರಿ ಅವರು ನಿತೀಶ್ ಕುಮಾರ್ ಮುಂದೆ ಈ ಆಫರ್ ಮುಂದಿಟ್ಟಿದ್ದಾರೆ. ಆದರೆ, ಈ ಬಗ್ಗೆ ಜೆಡಿಯು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ