
ತಿರುವನಂತಪುರಂ(ಜ.17): ಕೇರಳ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ಟ್ವಿಟ್ಟರ್ ಅಕೌಂಟ್’ನಲ್ಲಿ ಗೋಮಾಂಸ ಖಾದ್ಯದ ಮಾಹಿತಿ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.
ರಾಜ್ಯದ ಜನಪ್ರಿಯ ಬೀಫ್ ಫ್ರೈ ಖಾದ್ಯದ ಫೋಟೋವೊಂದು ಟ್ವೀಟ್ ಮಾಡಿರುವ ಕೇರಳ ಪ್ರವಾಸೋದ್ಯಮ ಇಲಾಖೆ, ಇದನ್ನು ತಯಾರಿಸುವ ರೆಸಿಪಿಯ ಲಿಂಕ್ ಕೂಡ ನೀಡಿದೆ.
ಆದರೆ ಈ ಟ್ವೀಟ್’ಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ಇದರಿಂದ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕೆಲವು ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಕರ ಸಂಕ್ರಾಂತಿ ದಿನದಂದೇ ಬೀಫ್ ರೆಸಿಪಿ ಕುರಿತು ಟ್ವೀಟ್ ಮಾಡಿರುವ ಕೇರಳ ಸರ್ಕಾರ ಹಿಂದೂ ವಿರೋಧಿ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹರಿಹಾಯ್ದಿದ್ದಾರೆ.
ಗೋಮಾಂಸ ಸೇವನೆಯಿಂದ ಹೆಚ್ಚುತ್ತಿದೆ ಕಾಳ್ಗಿಚ್ಚು; ಕಾಡಿಗೆ ಇಡಬೇಡಿ ಕಿಚ್ಚು!
ಊಟಕ್ಕೂ, ಧರ್ಮಕ್ಕೂ ಸಂಬಂಧವಿಲ್ಲ ಎಂದ ಸಚಿವ:
ಇನ್ನು ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಕೇರಳ ಪ್ರವಾಸೋದ್ಯಮ ಸಚಿವ ಕೆ. ಸುರೇಂದ್ರನ್, ಊಟಕ್ಕೂ ಧರ್ಮಕ್ಕೂ ತಳುಕು ಹಾಕುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಪ್ರವಾಸಿಗರನ್ನು ಸೆಳೆಯಲು ಕೇರಳದ ಸಾಂಪ್ರದಾಯಿಕ ಖಾದ್ಯಗಳ ಕುರಿತು ಇಲಾಖೆಯ ಟ್ವೀಟ್’ನಲ್ಲಿ ಮಾಹಿತಿ ನೀಡಲಾಗಿದ್ದು, ಯಾವುದೇ ಧರ್ಮದ ನಂಬಿಕೆಗಳಿಗೆ ನೋವನ್ನುಂಟು ಮಾಡುವ ಉದ್ದೇಶವಿಲ್ಲ ಎಂದು ಸುರೇಂದ್ರನ್ ಸ್ಪಷ್ಟಪಡಿಸಿದ್ದಾರೆ.
ಕೇರಳ ಸರ್ಕಾರದ ವಿರುದ್ಧ ಹತರಿಹಾಯ್ದ ಶೋಭಾ ಕರಂದ್ಲಾಜೆ:
ಇನ್ನು ಕೇರಳ ಪ್ರವಾಸೋದ್ಯಮ ಟ್ವೀಟ್ ವಿರುದ್ಧ ಕಿಡಿಕಾರಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಕೇರಳದ ಕಮ್ಯೂನಿಸ್ಟ್ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತರುವಲ್ಲಿ ನಿರತವಾಗಿದೆ ಎಂದು ಹರಿಹಾಯ್ದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ