
ಲಕ್ನೋ(ಡಿ.29): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪೊಲೀಸರು ದುರ್ವರ್ತನೆ ತೋರಿದ ಆರೋಪ ಕೇಳಿ ಬಂದಿದ್ದು, ಈಆರೋಪವನ್ನು ಯುಪಿ ಪೊಲೀಸ್ ಇಲಾಖೆ ನಿರಾಕರಿಸಿದೆ .
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಂಧನಕ್ಕೊಳಗಾಗಿರುವ ಮಾಜಿ ಐಪಿಎಸ್ ಅಧಿಕಾರಿ ಎಸ್‌ಆರ್ ಧರಾಪುರಿ ಮನೆಯತ್ತ ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ತಡೆದಿದ್ದರು.
ಈ ವೇಳೆ ಪಕ್ಷದ ಕಾರ್ಯಕರ್ತರನೋರ್ವನ ಸ್ಕೂಟರ್‌ನಲ್ಲಿ ಧರಾಪುರಿ ಮನೆಗೆ ತೆರಳಲು ಯತ್ನಿಸಿದ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ತಡೆದಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿದ್ದಲ್ಲದೇ ಪೊಲೀಸರು ಪ್ರಿಯಾಂಕಾ ಅವರನ್ನು ಒತ್ತಾಯಪೂರ್ವಕವಾಗಿ ತಡೆದು ನಿಲ್ಲಿಸಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕಾ, ಪೊಲೀಸರು ನನ್ನು ಕತ್ತು ಹಿಡಿದು ತಳ್ಳಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಯುಪಿ ಪೊಲೀಸರ ಈ ದುರ್ವರ್ತನೆ ನನ್ನನ್ನು ದಂಗುಬಡಿಸಿದೆ ಎಂದು ಪ್ರಿಯಾಂಕಾ ಹರಿಹಾಯ್ದಿದ್ದರು.
ಪೊಲೀಸರಿಗೆ ಚಳ್ಳೇ ಹಣ್ಣು ತಿನ್ನಿಸಿದ ಪ್ರಿಯಾಂಕಾ ಗಾಂಧಿ!
ಆದರೆ ಪ್ರಿಯಾಂಕಾ ಆರೋಪವನ್ನು ತಳ್ಳಿ ಹಾಕಿರುವ ಕರ್ತವ್ಯನಿರತ ಪೊಲೀಸ್ ಅಧಿಕಾರಿ, ನಾನು ಕೆವಲ ನನ್ನ ಕರ್ತವ್ಯ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಿಯಾಂಕಾ ಅವರಿಗೆಯಾವುದೇ ದೈಹಿಕ ಹಿಂಸೆ ನೀಡಿಲ್ಲ. ಕಾನೂನು ಉಲ್ಲಂಘಿಸಿ ಪೊಲೀಸರ ಕಣ್ತಪ್ಪಿಸಲು ಯತ್ನಿಸಿದ ಪ್ರಿಯಾಂಕಾ ಅವರನ್ನು ಕೇವಲ ತಡೆದು ನಿಲ್ಲಿಸಿದ್ದಾಗಿ ಪೊಲೀಸ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಪೊಲೀಸ್ ದೌರ್ಜನ್ಯ ಖಂಡಿಸಿದ ಶತ್ರುಘ್ನ ಸಿನ್ಹಾ:
ಇನ್ನು ಪ್ರಿಯಾಂಕಾ ಗಾಂಧಿ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಬಾಲಿವುಡ್ ನಟ, ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಶತ್ರುಘ್ನ, ನೆಹರೂ-ಗಾಂಧಿ ಪರಿವಾರದ ಹೆಣ್ಣುಮಗಳ ಮೇಲೆ ಈ ರೀತಿ ದೌರ್ಜನ್ಯ ನಡೆದರೆ ಇನ್ನು ದೇಶದ ಸಾಮಾನ್ಯ ಜನರ ಗತಿಯೇನು ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ