
ನವದೆಹಲಿ(ಮೇ.14): ಕೊರೋನಾ ವಿರುದ್ಧ ಹೋರಾಡಲು 50 ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ರಚಿಸಿದ್ದ ‘ಪಿಎಂ ಕೇರ್ಸ್’ ನಿಧಿಯಿಂದ ಇದೇ ಮೊದಲ ಬಾರಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.
ವೆಂಟಿಲೇಟರ್ ಖರೀದಿಗೆ 2000 ಕೋಟಿ, ವಲಸೆ ಕಾರ್ಮಿಕರ ಹಿತರಕ್ಷಣೆಗೆ 1000 ಕೋಟಿ ಹಾಗೂ ಲಸಿಕೆ ಶೋಧನೆಗೆ ನೆರವಾಗಲು 100 ಕೋಟಿ ರು. ನೆರವನ್ನು ಪ್ರಕಟಿಸಲಾಗಿದೆ.
2000 ಕೋಟಿ ರು. ನೆರವು ಬಳಸಿ 50 ಸಾವಿರ ವೆಂಟಿಲೇಟರ್ ಖರೀದಿಸಿ, ಆಸ್ಪತ್ರೆಗಳಿಗೆ ನೀಡಲಾಗುತ್ತದೆ. ವಲಸೆ ಕಾರ್ಮಿಕರ ವಸತಿ, ಆಹಾರ, ವೈದ್ಯಕೀಯ ಚಿಕಿತ್ಸೆ, ಸಾರಿಗೆ ವೆಚ್ಚಕ್ಕಾಗಿ 1000 ಕೋಟಿ ರು. ಬಳಸಲು ಉದ್ದೇಶಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ