ಧರ್ಮದ ಸರಿಯಾದ ಅರ್ಥ ಗೊತ್ತಿಲ್ಲದ ಕಾರಣದಿಂದಾಗಿಯೇ ಇಂದು ವಿಶ್ವದಲ್ಲಿ ಧರ್ಮದ ಹೆಸರಲ್ಲಿ ಕಿರುಕುಳ ಮತ್ತು ದೌರ್ಜನ್ಯದ ಘಟನೆಗಳು ನಡೆಯುತ್ತಿವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಅಮರಾವತಿ: ಧರ್ಮದ ಸರಿಯಾದ ಅರ್ಥ ಗೊತ್ತಿಲ್ಲದ ಕಾರಣದಿಂದಾಗಿಯೇ ಇಂದು ವಿಶ್ವದಲ್ಲಿ ಧರ್ಮದ ಹೆಸರಲ್ಲಿ ಕಿರುಕುಳ ಮತ್ತು ದೌರ್ಜನ್ಯದ ಘಟನಗಳು ನಡೆಯುತ್ತಿವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮಹಾರಾಷ್ಟ್ರದ ಅಮರಾವತಿಯಲ್ಲಿನ ಮಹಾನುಭಾವ ಆಶ್ರಮದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ‘ಧರ್ಮ ಅತ್ಯಂತ ಮಹತ್ವವಾದುದು ಮತ್ತು ಅದನ್ನು ಸರಿಯಾದ ರೀತಿಯಲ್ಲಿ ಹೇಳಿಕೊಡುವ ಅಗತ್ಯವಿದೆ.ಏಕೆಂದರೆ ಸರಿಯಾದ ರೀತಿಯಲ್ಲಿ ಧರ್ಮದ ಬಗ್ಗೆ ಹೇಳಿಕೊಡದೇ ಹೋದಲ್ಲಿ ಮತ್ತು ಧರ್ಮದ ಕುರಿತು ಪರಿಪೂರ್ಣವಲ್ಲದ ಜ್ಞಾನವು ನಮ್ಮನ್ನು ಅಧರ್ಮದ ಕಡೆಗೆ ಕೊಂಡೊಯ್ಯುತ್ತದೆ. ಇಂದು ವಿಶ್ವದಾದ್ಯಂದ ಧರ್ಮದ ಹೆಸರಲ್ಲಿ ನಡೆಯುತ್ತಿರುವ ಕಿರುಕುಳ ಮತ್ತು ದೌರ್ಜನ್ಯಕ್ಕೆ ಧರ್ಮದ ಕುರಿತಾದ ತಪ್ಪುಕಲ್ಪನೆಗಳು ಮತ್ತು ಅದರ ಅರ್ಥ ಗೊತ್ತಿಲ್ಲದೇ ಇರುವುದೇ ಕಾರಣ’ ಎಂದು ಹೇಳಿದ್ದಾರೆ.
undefined
ಜೊತೆಗೆ, ಧರ್ಮ ಎಂದೆಂದಿಗೂ ಇದ್ದೇ ಇರುತ್ತದೆ ಮತ್ತು ಎಲ್ಲವೂ ಅದರಂತೆಯೇ ನಡೆಯುತ್ತದೆ. ಈ ಕಾರಣಕ್ಕಾಗಿಯೇ ಅದನ್ನು ಸನಾತನ ಎಂದು ಕರೆಯಲಾಗುತ್ತದೆ. ಧರ್ಮದ ನಡವಳಿಕೆಯೇ ಧರ್ಮವನ್ನು ಕಾಪಾಡುತ್ತದೆ ಎಂದು ಭಾಗವತ್ ಹೇಳಿದ್ದಾರೆ.
ಅಯೋಧ್ಯೆ ಬಾಲರಾಮನ ಪ್ರತಿಷ್ಠಾಪನೆಗೆ 1 ವರ್ಷ: ಜ.11ರಿಂದ ಕಾರ್ಯಕ್ರಮ
ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡು, ಬಾಲರಾಮನ ಪ್ರತಿಷ್ಠಾಪನೆಯಾಗಿ ಜನವರಿಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆ ಜ.11ರಿಂದ 3 ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜ.11ರ ಪುಷ್ಯ ಶುಕ್ಲ ದ್ವಾದಶಿಯಂದು ಕನ್ನಡಿಗ ಅರುಣ್ ಯೋಗಿರಾಜ್ ಕೆತ್ತಿದ ಬಾಲರಾಮನಿಗೆ ಮಹಾಭಿಷೇಕ ಮಾಡಿ, ಮಧ್ಯಾಹ್ನ 12.20ಕ್ಕೆ ಮಹಾಮಂಗಳಾರತಿ ನೆರವೇರಲಿದೆ. ವಾರ್ಷಿಕೋತ್ಸವದ ಕಾರ್ಯಕ್ರಮ ಮಂದಿರ ಆವರಣದ 5 ಕಡೆಗಳಲ್ಲಿ, ಯಜ್ಞ ಮಂಟಪ, ಯಾತ್ರಿ ಕೇಂದ್ರದಲ್ಲಿ, ಆನಂದ ತಿಲದಲ್ಲಿ ಇರಲಿವೆ. ಪ್ರಾಣ ಪ್ರತಿಷ್ಠಾಪನೆಗೆ ಯಾರನ್ನು ಆಹ್ವಾನಿಸಲು ಆಗಲಿಲ್ಲವೋ ಅವರಿಗೆಲ್ಲಾ ವಾರ್ಷಿಕೋತ್ಸವಕ್ಕೆ ಆಹ್ವಾನಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.