ನಾಗ್ಪುರ್(ನ.10): ಅಯೋಧ್ಯೆ ಭೂವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿವಾದಿತ ಸ್ಥಳದಲ್ಲಿ ಮಂದಿರ ಕಟ್ಟಲು ಘನ ನ್ಯಾಯಲಯ ಅನುಮತಿ ನೀಡಿದೆ.
ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!
ಇನ್ನು ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದ್ದಂತೇ ಕಾಶಿ-ಮಥುರಾ ಮಂದಿರಗಳಿಗಾಗಿ ಬೇಡಿಕೆ ಆರಂಭವಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಈ ಘೋಷಣೆಯಿಂದ ಅಂತರ ಕಾಯ್ದುಕೊಂಡಿದೆ.
ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!
ಅಯೋಧ್ಯೆ ತೀರ್ಪು ಪ್ರಕಟವಾದ ಬೆನ್ನಲ್ಲೇ, ಕೆಲವು ಬಲಪಂಥೀಯ ಸಂಘಟನೆಗಳು ಕಾಶಿ-ಮಥುರಾ ಮಂದಿರಕ್ಕಾಗಿ ಬೇಡಿಕೆ ಮಂಡಿಸಿದ್ದು, ಇದಕ್ಕೂ ಸಂಘಟನೆಗೂ ಸಂಬಂಧವಿಲ್ಲ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟಪಡಿಸಿದ್ದಾರೆ.
ವಿವಾದ ಇತ್ಯರ್ಥ ಬಯಸಿದ್ದೇವು, ಬಗೆಹರಿದಿದೆ: ಮೋಹನ್ ಭಾಗವತ್!
ಅಯೋಧ್ಯೆ ತೀರ್ಪಿನ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಸ್ಪಷ್ಟಪಡಿಸಿದರು.
ರಾಮ ಮಂದಿರ ಸಂಕಲ್ಪದ ಮಹಾಯಜ್ಞ: ವರ್ಷ ಕಳೆದು ಅದೇ ದಿನ ಪ್ರಕಟವಾಯ್ತು ತೀರ್ಪು
ಆದರೆ ಕಾಶಿ-ಮಥುರಾ ಮಂದಿರ ಬೇಡಿಕೆಗೆ ಪ್ರತಿಕ್ರಿಯೆ ನಡೆಸಲು ನಿರಾಕರಿಸಿರುವ ಮೋಹನ್ ಭಾಗವತ್, ಈ ಬೇಡಿಕೆಗೂ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ಅಯೋಧ್ಯೆ ತೀರ್ಪು: ಜಾಲತಾಣದಲ್ಲೂ ಸೌಹಾರ್ದತೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ