ಸುಪ್ರೀಂ ಅನುಮತಿ ಬೆನ್ನಲ್ಲೇ ತಮಿಳುನಾಡಿನ 45 ಕಡೆ ಆರೆಸ್ಸೆಸ್‌ ಪಥಸಂಚಲನ

By Anusha Kb  |  First Published Apr 17, 2023, 1:24 PM IST

Tamilnadu ನಲ್ಲಿ RSS ಪಥಸಂಚಲನಕ್ಕೆ ತಡೆ ಕೋರಿ ಎಂ.ಕೆ ಸ್ಟಾಲಿನ್‌ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ  ವಜಾಗೊಳಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಭಾನುವಾರ 45 ಕಡೆಗಳಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಯಿತು.


ಚೆನ್ನೈ: ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ತಡೆ ಕೋರಿ ಎಂ.ಕೆ ಸ್ಟಾಲಿನ್‌ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇತ್ತೀಚೆಗೆ  ವಜಾಗೊಳಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಭಾನುವಾರ 45 ಕಡೆಗಳಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಯಿತು. ಬಿಗಿ ಪೊಲೀಸ್‌ ಭದ್ರತೆಯಲ್ಲಿ ಶಾಂತಿಯುತವಾಗಿ ಸಂಘಟನೆಯ ಪಥಸಂಚಲನ ನಡೆದಿದ್ದು ಯಾವುದೇ ಆಹಿತಕರ ಘಟನೆಗಳು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ನಗರಗಳಾದ ಚೆನ್ನೈ(Chennai), ಕಾಂಚಿಪುರಂ (Kanchipuram), ಮಧುರೈ (Madhurai), ಹಾಗೂ ಚೆಂಗಲ್‌ಪೇಟ್‌ ಸೇರಿ ಒಟ್ಟು 45 ಕಡೆಗಳಲ್ಲಿ ಸ್ವಯಂ ಸೇವಕರು ಸಂಘಟನೆಯ ಸಾಂಪ್ರದಾಯಿಕ ಉಡುಗೆಯಲ್ಲಿ ಲಾಠಿ ಹಿಡಿದು ಪಥಸಂಚಲನ ನಡೆಸಿದರು.  ಗುಪ್ತಚರ ವರದಿಗಳನ್ನು ಉಲ್ಲೇಖಿಸಿ ಸಂಘದ ಪಥಸಂಚಲನಕ್ಕೆ ಸರ್ಕಾರ ಅನುಮತಿಸಿರಲಿಲ್ಲ. ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಂಘಟನೆಗೆ ಪಥಸಂಚಲನಕ್ಕೆ ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್ (Madras Highcourt) ಆದೇಶಿಸಿತ್ತು. ಆದರೆ ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ (Supreme Court) ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಏ.11 ರಂದು ವಜಾಗೊಳಿಸಿದ ಕೋರ್ಟ್‌  ಪಥಸಂಚಲನಕ್ಕೆ ಅನುಮತಿ ನೀಡಿತ್ತು

Tap to resize

Latest Videos

ತಮಿಳುನಾಡಿನಲ್ಲಿ ಹಲವು ಪ್ರಕರಣಗಳಲ್ಲಿ RSS ಬಲಿಪಶುವಾಗಿದೆ ಅಪರಾಧಿಯಲ್ಲ: ಸುಪ್ರೀಂಕೋರ್ಟ್‌

 ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅವಕಾಶ ನೀಡಿದ ಮದ್ರಾಸ್‌ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ತಮಿಳುನಾಡಿನ ಡಿಎಂಕೆ ಸರ್ಕಾರಕ್ಕೆ ಅಲ್ಲೂ ಮುಖಭಂಗವಾಗಿದೆ.  ಡಿಎಂಕೆ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ಮದ್ರಾಸ್‌ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದಿದೆ.  ಇದೇ ವೇಳೆ ಸುಪ್ರೀಂಕೋರ್ಟ್‌ 

ಫಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ನಿಷೇಧದ ನಂತರ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ತಮಿಳುನಾಡಿನಲ್ಲಿ ದಾಖಲಾದ ಹಲವು ಪ್ರಕರಣಗಳಲ್ಲಿ ಆರ್‌ಎಸ್‌ಎಸ್‌ ಬಲಿಪಶುವಾಗಿದೆಯೇ ಹೊರತು ಅಪರಾಧಿಯಾಗಿಲ್ಲ ಎಂದು ಕೋರ್ಟ್ ಹೇಳಿದೆ.  ವಿ ರಾಮಸುಬ್ರಮಣಿಯಂ ಹಾಗೂ ಪಂಕಜ್ ಮಿಥಲ್ ಅವರಿದ್ದ ಸುಪ್ರೀಂಕೋರ್ಟ್  (Supreme court) ಪೀಠ ಈ ಹೇಳಿಕೆ ನೀಡಿದೆ. ಅಲ್ಲದೇ ಮದ್ರಾಸ್‌ ಹೈಕೋರ್ಟ್‌ ಪೀಠ (Madras High court) ಸುಮ್ಮನೆ ಬೇಕಾಬಿಟ್ಟಿಯಾಗಿ ಆರ್‌ಎಸ್‌ಎಸ್‌ಗೆ ಅನುಮತಿ ನೀಡಿಲ್ಲ. ಕಾನೂನಿನ ಸಂಬಂಧಿತ ನಿಬಂಧನೆಗಳನ್ನು ಸರಿಯಾಗಿ ಅರ್ಥೈಸುವುದಲ್ಲದೆ, ಸೂಕ್ಷ್ಮ ಪ್ರದೇಶಗಳಲ್ಲಿ ಮೆರವಣಿಗೆಗಳನ್ನು ಅನುಮತಿಸುವಾಗ ಅಗತ್ಯ ಷರತ್ತುಗಳನ್ನು ಕೂಡ ವಿಧಿಸಿತ್ತು ಎಂದು ಸುಪ್ರೀಂ ಪೀಠ ಹೇಳಿದೆ.  ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಮನವಿಯ ತೀರ್ಪನ್ನು ಮಾರ್ಚ್‌ 27ರಂದು ಸುಪ್ರೀಂಕೋರ್ಟ್  ಕಾಯ್ದಿರಿಸಿತ್ತು. 

RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್‌: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಈ ವಿಚಾರಣೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯ ಸರ್ಕಾರ ಗಲಭೆಗೆ ಜವಾಬ್ದಾರರೆಂದು ಆರೋಪ ಮಾಡಿ ಕೋರ್ಟ್‌ಗೆ ಸಲ್ಲಿಸಿದ್ದ  ದಾಖಲೆಯನ್ನು ಪರಿಶೀಲಿಸಿದ ಕೋರ್ಟ್‌  ಇಲ್ಲಿ ಸಂಘಟನೆಯ ಕಾರ್ಯಕರ್ತರು ಅಪರಾಧಿಗಳಲ್ಲ ಬಲಿಪಶುಗಳು ಎಂದು ಹೇಳಿದೆ. ಆದ್ದರಿಂದ, ಮುಖ್ಯ ರಿಟ್ ಅರ್ಜಿಗಳಲ್ಲಿ ಅಥವಾ ಮರುಪರಿಶೀಲನಾ ಅರ್ಜಿಗಳಲ್ಲಿ ನ್ಯಾಯಾಧೀಶರು ನೀಡಿದ ಆದೇಶದಲ್ಲಿ ದೋಷವನ್ನು ಕಂಡುಹಿಡಿಯಲು ನಮಗೆ ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ವಿಶೇಷ  ಅರ್ಜಿಗಳನ್ನು ವಜಾಗೊಳಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿ  ತಮಿಳುನಾಡು ಸರ್ಕಾರ ಅರ್ಜಿಯನ್ನು ವಜಾ ಮಾಡಿತ್ತು.

ಫೆಬ್ರವರಿ 10 ರಂದು ಮದ್ರಾಸ್‌ ಹೈಕೋರ್ಟ್‌ನ ವಿಭಾಗೀಯ ಪೀಠವು ನೀಡಿದ ಆದೇಶದಲ್ಲಿ, ಆರ್‌ಎಸ್‌ಎಸ್‌ಗೆ ಪಥಸಂಚಲನಕ್ಕೆ (RSS route March) ಅನುಮತಿ ನೀಡುವಂತೆ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿತ್ತು. ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನಕ್ಕೆ ಈ ಹಿಂದೆ ಸರ್ಕಾರ ವಿಧಿಸಿದ್ದ ಷರತ್ತುಗಳನ್ನು ತೆಗೆದು ಹಾಕಿದ ಮದ್ರಾಸ್ ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಸೋತ 100 ಕ್ಷೇತ್ರಗಳಲ್ಲಿ ಆರ್‌ಎಸ್‌ಎಸ್‌ ರೀತಿ ಯುವ ಕಾಂಗ್ರೆಸ್‌ ಪ್ರಚಾರ

 

click me!