
ಮಾಸ್ಕೋ(ಸೆ. 21): ರಷ್ಯಾದ ಪೆರ್ಮ್ ನಗರದ ವಿಶ್ವವಿದ್ಯಾಲಯದಲ್ಲಿ 18ರ ಹರೆಯದ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 8 ಜನರು ಸಾವೀಗೀಡಾಗಿದ್ದು 28 ಮಂದಿ ಗಾಯಗೊಂಡಿದ್ದಾರೆ.
ಮಾಸ್ಕೋ ನಗರದಿಂದ 1,100 ಕಿ.ಮೀ ದೂರದಲ್ಲಿರುವ ಪೆಮ್‌ರ್ ನಗರದ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿ ನಡೆಸಲು ಪ್ರೇರಣೆ ಏನು ಎಂಬುದು ತಿಳಿದುಬಂದಿಲ್ಲ, ಬಂದೂಕುಧಾರಿಯನ್ನು ಬಂಧಿಸಲಾಗಿದೆ. ಆತನ ಉದ್ದೇಶದ ಬಗ್ಗೆ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಕಟ್ಟಡ ಜಿಗಿದ ವಿದ್ಯಾರ್ಥಿಗಳು:
ದಾಳಿಯಿಂದ ತಪ್ಪಿಸಿಕೊಳ್ಳಲು ಹಲವು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಅವಿತುಕೊಂಡಿದ್ದರು. ಹಲವು ವಿದ್ಯಾರ್ಥಿಗಳು ಕಟ್ಟಡದ ಕಿಟಕಿಗಳಿಂದ ಜಿಗಿದು ಓಡಿದ್ದಾರೆ. ವಿಶ್ವವಿದ್ಯಾಲಯದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕೊಠಡಿಗಳನ್ನು ಮುಚ್ಚಿ ರಕ್ಷಿಸಿಕೊಂಡಿದ್ದಾರೆ.
ಈ ದಾಳಿಯನ್ನು ಖಂಡಿಸಿರುವ ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿ, ‘ಇದೊಂದು ಭೀಕರ ದಾಳಿ’ ಎಂದು ಹೇಳಿದೆ. ಆದರೆ, ಭಾರತದ ವಿದ್ಯಾರ್ಥಿಗಳಿಗೆ ಅಪಾಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ