
ನವದೆಹಲಿ(ಆ.07): ಭಾರತ ವಿದೇಶಾಂಗ ಇಲಾಖೆ ಮಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮಾತುಕತೆ, ಬೇಟಿ ಕುರಿತು ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಮುಖವಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇದೇ ಅಕ್ಟೋಬರ್ ತಿಂಗಳಲ್ಲಿ ಭಾರತಕ್ಕೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದೆ.
ಚೀನಾ ಭಾರತ ಗಡಿ ಬಿಕ್ಕಟ್ಟಿನ ನಡುವೆ ರಷ್ಯಾ ತಲುಪಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್!.
ಉನ್ನತ ಮಟ್ಟದ ಮಾತುಕತೆ ಹಾಗೂ ದ್ವಿಪಕ್ಷೀಯ ಒಪ್ಪಂದಗಳಿಗಾಗಿ ಪುಟಿನ್ ಭಾರತಕ್ಕೆ ಬೇಟಿ ನೀಡಲಿದ್ದಾರೆ. ಈ ವೇಳೆ ಪ್ರಮುಖ ವಿಚಾರಗಳು ಚರ್ಚೆಯಾಗಲಿದೆ ಎಂದು ಭಾರತದ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾತ್ಸವ್ ಹೇಳಿದ್ದಾರೆ. SCO ಹಾಗೂ BRICS ವಿದೇಶಾಂಗ ಸಚಿವರ ಭೇಟಿ, NSA ಭೇಟಿ, ರಕ್ಷಣಾ ಸಚಿವರ ಭೇಟಿ ಸೇರಿದಂತೆ ಮುಂಬರುವ ಮಹತ್ವದ ಮಾತುಕತೆ ಕುರಿತ ವೇಳಾಪಟ್ಟಿಯನ್ನು ಭಾರತ ವಿದೇಶಾಂಗ ಇಲಾಖೆ ಬಿಡುಗಡೆ ಮಾಡಿದೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲ ಹಾಗೂ ರಷ್ಯಾ ವಿದೇಶಾಂಗ ಸಚಿವಾಲದಯ ಜೊತೆ ಮಾತುಕತೆ ನಡೆಸಿದೆ. ಬಳಿಕ ಅಕ್ಟೋಬರ್ ತಿಂಗಳಲ್ಲಿ ಪುಟಿನ್ ಭಾರತಕ್ಕೆ ಬೇಟಿ ನೀಡುವ ಕುರಿತು ದಿನಾಂಕ ನಿಗದಿ ಪಡಿಸಿದೆ. ಕೊರೋನಾ ವೈರಸ್ ಕಾರಣ ಪುಟಿನ್ ಆಗಮನವನ್ನು ಮುಂದೂಡಲಾಗಿತ್ತು. ಇದೀಗ ಎಲ್ಲಾ ಮುಂಜಾಗ್ರತ ಕ್ರಮಗಳೊಂದಿಗೆ ಮತ್ತೆ ವಿದೇಶಾಂಗ ಇಲಾಖೆ ಕಾರ್ಯಚಟುವಟಿಕೆಗಳು ಆರಂಭಗೊಂಡಿದೆ ಎಂದು ಶ್ರಿವಾತ್ಸವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ