
ಪಟ್ಟಣಂತಿಟ್ಟ (ಕೇರಳ) : ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ತಾಮ್ರದ ಕವಚಗಳ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬೆಂಗಳೂರಿನ ಉನ್ನಿಕೃಷ್ಣನ್ ಪೊಟ್ಟಿಯನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಸಾಕ್ಷ್ಯ ಸಂಗ್ರಹಕ್ಕಾಗಿ ಗುರುವಾರ ಬೆಂಗಳೂರಿಗೆ ಕರೆತಂದಿದ್ದಾರೆ.
ಬೆಂಗಳೂರಿನ ಶ್ರೀರಾಂಪುರದಲ್ಲಿ ಚಿನ್ನಲೇಪಿತ ಕವಚಗಳನ್ನು ಇರಿಸಿ ಈತ ದೇಣಿಗೆ ಸಂಗ್ರಹಿಸಿದ್ದ ಎಂಬ ಆರೋಪವಿದೆ. ಹೀಗಾಗಿ ಸಾಕ್ಷ್ಯ ಸಂಗ್ರಹ ಕಾರ್ಯ ಮುಕ್ತಾಯವಾಗಬೇಕಿರುವುದರಿಂದ ಗುರುವಾರ ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗಿದೆ. ಚೆನ್ನೈ ಮತ್ತು ಹೈದರಾಬಾದ್‌ಗೂ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಅ.30ರವರೆಗೂ ಪೊಟ್ಟಿಯನ್ನು ಎಸ್‌ಐಟಿ ಕಸ್ಟಡಿಗೆ ವಹಿಸಿತ್ತು.
ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲು ಮತ್ತು ದ್ವಾರಪಾಲಕ ಮೂರ್ತಿಗಳ ಕವಚಗಳನ್ನು ಮರುಲೇಪನ ಮಾಡುವುದಾಗಿ ಪೊಟ್ಟಿ ಕೊಂಡೊಯ್ದಿದ್ದ. ಆದರೆ ಅವುಗಳನ್ನು ಹಿಂದಿರುಗಿಸುವಾಗ ಚಿನ್ನದಲ್ಲಿ ಸುಮಾರು 4 ಕೆಜಿ ಕಡಿತ ಉಂಟಾಗಿತ್ತು. ಈ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ