
ಶಬರಿಮಲೆ(ಡಿ.31): ಮಕರವಿಳಕ್ಕು (ಸಂಕ್ರಾಂತಿ) ಹಬ್ಬ ಹಾಗೂ ಎರಡನೇ ಹಂತದ ಯಾತ್ರಾ ಋುತುವಿನ ಆರಂಭದ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಅಯಪ್ಪ ಸ್ವಾಮಿ ದೇಗುಲ ಬುಧವಾರ ಸಂಜೆಯಿಂದ ಭಕ್ತರಿಗೆ ಬಾಗಿಲು ತೆರೆದಿದೆ.
ಇದೇ ವೇಳೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಮೂವರೊಂದಿಗೆ ಸಂಪರ್ಕಕ್ಕೆ ಬಂದಿದ್ದ ಕಾರಣ ದೇವಾಲಯದ ಮುಖ್ಯ ಅರ್ಚಕರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಬುಧವಾರ ಸಂಜೆ 5 ಗಂಟೆಗೆ ಅಯ್ಯಪ್ಪ ದೇಗುಲದ ಬಾಗಿಲನ್ನು ತೆರೆಯಲಾಗಿದ್ದು, ಗುರುವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಜ.14ರಂದು ಮಕರವಿಳಕ್ಕು ಹಬ್ಬ ನಡೆಯಲಿದ್ದು, ಭಕ್ತರಿಗೆ ಮಕರ ಜ್ಯೋತಿಯ ದರ್ಶನವಾಗಲಿದೆ. ಜ.20ರಂದು ದೇವಾಲಯ ಮತ್ತೆ ಬಾಗಿಲು ಮುಚ್ಚಲಿದೆ. ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಪ್ರತಿ ದಿನ 5000 ಭಕ್ತರಿಗಷ್ಟೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ