
ನವದೆಹಲಿ(ಮಾ.28): ಈಶ ಪ್ರತಿಷ್ಠಾನದ ಮುಖ್ಯಸ್ಥ ಹಾಗೂ ಆಧ್ಯಾತ್ಮಿಕ ಚಿಂತಕ ಸದ್ಗುರು ಅವರು ಬುಧವಾರ ದಿಲ್ಲಿ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.
ಈ ಕುರಿತು ಮಾಹಿತಿ ನೀಡಿದ ಆಸ್ಪತ್ರೆಯ ಜಂಟಿ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಸಂಗೀತ ರೆಡ್ಡಿ, ‘ಸದ್ಗುರು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಅವರ ಚೇತರಿಕೆಯ ಕುರಿತು ಆಶಾಭಾವ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ದಿಸ್‌ಚಾರ್ಜ್ ಮಾಡಲಾಗುತ್ತಿದೆ. ಅವರು ಚೇತರಿಕೆಗೊಳ್ಳುವ ಸಮಯದಲ್ಲೂ ಅವರ ಉತ್ಸಾಹಭರಿತರಾಗಿದ್ದರು. ಇದರಿಂದ ಅವರ ಲಕ್ಷಾಂತರ ಅನುಯಾಯಿಗಳಿಗೆ ಸಂತಸವಾಗಲಿದೆ ಎಂದು ಭಾವಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಸರ್ಜರಿ ಬಳಿಕ ಸದ್ಗುರು ಮೊದಲ ಪ್ರತಿಕ್ರಿಯೆ, ಶೀಘ್ರ ಚೇತರಿಕೆಗೆ ದಿಗ್ಗಜರ ಪ್ರಾರ್ಥನೆ!
ಮಿದುಳಿನಲ್ಲಿ ರಕ್ತಸ್ರಾವ ಸಮಸ್ಯೆ ಆದ ಕಾರಣ ಅವರು ಮಾರ್ಚ್ 17 ರಂದು ಇಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗುವ ಮೊದಲು ಅವರು ಕೆಲವು ವಾರಗಳವರೆಗೆ ತೀವ್ರ ತಲೆನೋವು ಅನುಭವಿಸುತ್ತಿದ್ದರು. ಈಗ ಅವರು ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆಯೇ ನೆರೆದಿದ್ದ ಜನರು ಹಾಗೂ ಛಾಯಾಗ್ರಾಹಕರಿಗೆ ಅವರು ಕೈ ಎತ್ತಿ ನಮಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ