ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬ ಮುಂಬೈ ಪೋಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಲ್ಮಾನ್ ಖಾನ್ ಮನೆ ಮುಂದೆ ನಡೆದ ಫೈರಿಂಗ್ ಪ್ರಕರಣದ ಹೊಸ ಬೆಳವಣಿಗೆಯಲ್ಲಿ, ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪಿಯು ಇಂದು(ಮೇ 1) ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಅನುಜ್ ಥಾಪನ್ ನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು.
ಈ ಹಿಂದೆ ಮುಂಬೈ ಪೊಲೀಸರು, ಪ್ರಕರಣದಲ್ಲಿ ಬಂಧಿತ ಆರೋಪಿ ಅನುಜ್ ಥಾಪನ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಿದ್ದರು. ಆದರೀಗ ಆತ ಮೃತಪಟ್ಟಿದ್ದಾನೆ ಎಂದು ಪೋಲೀಸರ ತಿಳಿಸಿದ್ದಾರೆ.
undefined
ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲಾದ ಮೂವರು ಆರೋಪಿಗಳನ್ನು ಮೇ 8ರವರೆಗೆ ವಿಶೇಷ ನ್ಯಾಯಾಲಯವು ಸೋಮವಾರವಷ್ಟೇ ಪೋಲೀಸ್ ಕಸ್ಟಡಿಗೆ ನೀಡಿತ್ತು. ಅದಾಗಿ ಎರಡು ದಿನಗಳಲ್ಲಿ ಈ ಘಟನೆ ನಡೆದಿದೆ.
ನಾಲ್ಕು ಲಕ್ಷ ರೂ. ಸುಪಾರಿ! ಸಲ್ಮಾನ್ ಖಾನ್ ಕುರಿತು ಪೊಲೀಸರೆದುರು ಶೂಟರ್ಸ್ ಬಾಯ್ಬಿಟ್ಟಿದ್ದೇನು?
ಏ.29ರ ವಿಚಾರಣೆಯಲ್ಲಿ ವಿಶೇಷ ಎಂಸಿಒಸಿಎ ನ್ಯಾಯಾಧೀಶ ಎ ಎಂ ಪಾಟೀಲ್ ಅವರು ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21), ಮತ್ತು ಅನುಜ್ ಥಾಪನ್ (32) ಅವರನ್ನು ಪೊಲೀಸ್ ಕಸ್ಟಡಿಗೆ ಮತ್ತು ಸೋನು ಚಂದರ್ ಬಿಷ್ಣೋಯ್ (37) ಅವರನ್ನು ವೈದ್ಯಕೀಯ ಕಾರಣಗಳಿಗಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ಘಟನೆ ಹಿನ್ನೆಲೆ
ಬೈಕ್ ನಲ್ಲಿ ಬಂದ ಇಬ್ಬರು ಶೂಟರ್ ಗಳು ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಅವರ ಬಾಲ್ಕನಿಯನ್ನು ಗುರಿಯಾಗಿಸಿಕೊಂಡು ಹಲವು ಸುತ್ತಿನ ಗುಂಡುಗಳನ್ನು ಹಾರಿಸಿದ್ದರು. ಬಾಂದ್ರಾದಲ್ಲಿರುವ ನಟನ ನಿವಾಸದ ಹೊರಗೆ ಗುಂಡು ಹಾರಿಸಿದ ಶೂಟರ್‌ಗಳಾದ ವಿಕ್ಕಿ ಗುಪ್ತಾ ಮತ್ತು ಸಾಗರ್ ಪಾಲ್ ಅವರನ್ನು ಗುಜರಾತ್‌ನ ಭುಜ್‌ನಿಂದ ಬಂಧಿಸಲಾಗಿದೆ. ಮುಂಬೈ ಪೊಲೀಸರು ಎಲ್ಲಾ ಬಂಧಿತ ಆರೋಪಿಗಳ ವಿರುದ್ಧ MCOCA ಸೆಕ್ಷನ್‌ಗಳನ್ನು ಅನ್ವಯಿಸಿದ್ದಾರೆ.
ಸಲ್ಮಾನ್ ಮನೆ ಮೇಲೆ ಗುಂಡು- ನದಿಯಲ್ಲಿ ಬಂದೂಕು ಪತ್ತೆ: ಶೋಧ ಕಾರ್ಯದ ರೋಚಕ ವಿಡಿಯೋ ವೈರಲ್
ಮುಂಬೈ ಪೊಲೀಸ್ ಅಪರಾಧ ವಿಭಾಗವು ಶೂಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್(LOC) ಜಾರಿ ಮಾಡಿದೆ. ಅನ್ಮೋಲ್ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ. ಘಟನೆಯ ನಂತರ ಗುಂಡಿನ ದಾಳಿಯ ಹೊಣೆಗಾರಿಕೆಯನ್ನು ಅವರು ಸಾಮಾಜಿಕ ಮಾಧ್ಯಮ ಮುಖಾಂತರ ಹೊತ್ತಿದ್ದರು.
ಕೆನಡಾದಲ್ಲಿದ್ದಾರೆ ಎಂದು ಶಂಕಿಸಲಾಗಿರುವ ಅನ್ಮೋಲ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ ಮತ್ತು ಇದು ಸಲ್ಮಾನ್ ಖಾನ್‌ಗೆ ಮೊದಲ ಮತ್ತು ಕೊನೆಯ ಎಚ್ಚರಿಕೆ ಎಂದು ಹೇಳಿದ್ದಾರೆ.