
ಚೆನ್ನೈ (ಸೆಪ್ಟೆಂಬರ್ 3, 2023): ‘ಸನಾತನ ಧರ್ಮ ಎಂಬುದು ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ಕೇವಲ ವಿರೋಧ ಮಾಡಿದರೆ ಸಾಲದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು’ ಎಂದು ಡಿಎಂಕೆ ಸಚಿವ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕಾಮೆಂಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆಗೆ ಕಾರಣವಾಗಿದ್ದು, ತಮಿಳುನಾಡು ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಹಲವರು ಕರೆ ನೀಡಿದ್ದಾರೆ. "ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್' ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನವು ಈ ನರಮೇಧದ ಕರೆಗೆ ಬೆಂಬಲವಾಗಿದೆ. ಭಾರತ ಒಕ್ಕೂಟವು ಅದರ ಹೆಸರಿಗೆ ನಿಜವಾದ ಅವಕಾಶವನ್ನು ನೀಡಿದರೆ, ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ. ಅದು I.N.D.I.A" ಎಂದು ಬಿಜೆಪಿಯ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ (ಈ ಹಿಂದಿನ ಟ್ವಿಟ್ಟರ್) ಪೋಸ್ಟ್ ಮಾಡಿದ್ದಾರೆ.
ಇದನ್ನು ಓದಿ: Love Marriage: ಇಶಿಕಾ ಆದ ಇಕ್ರಾ; ಮದುವೆಗಾಗಿ ಸನಾತನ ಧರ್ಮಕ್ಕೆ ಸೇರಿದ ಮುಸ್ಲಿಂ ಯುವತಿ..!
ಸ್ಟಾಲಿನ್ ಪುತ್ರ ಹೇಳಿದ್ದೇನು?
ಸನಾತನ ಧರ್ಮ ನಿರ್ಮೂಲನೆ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ‘ಕೆಲವನ್ನು ನಾವು ಕೇವಲ ವಿರೋಧ ಮಾಡಿದರೆ ಸಾಲದು. ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಸೊಳ್ಳೆಗಳು, ಡೆಂಘಿ ಜ್ವರ, ಮಲೇರಿಯಾ, ಕೊರೋನಾ ಇವುಗಳನ್ನು ವಿರೋಧಿಸಿದರೆ ಸಾಲದು. ನಿರ್ಮೂಲನೆ ಮಾಡಬೇಕು. ಸನಾತನ ಧರ್ಮವೂ ಸಹ ಇದೇ ರೀತಿ. ಈ ಸಮ್ಮೇಳನದಲ್ಲಿ ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು. ಹಾಗೆಯೇ ಸನಾತನ ಧರ್ಮ ನಿರ್ಮೂಲನೆ ಎಂಬ ಸಮ್ಮೇಳನ ಆಯೋಜನೆ ಮಾಡಿದವರಿಗೆ ಅಭಿನಂದನೆಗಳು’ ಎಂದು ಹೇಳಿದರು.
‘ಸನಾತನ ಧರ್ಮವನ್ನು ವಿರೋಧಿಸುವುದಲ್ಲ. ನಿರ್ಮೂಲನೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಬೇಕು. ಸನಾತನಂ ಎಂಬ ಪದ ಸಂಸ್ಕೃತದಿಂದ ಬಂದಿದ್ದು, ಇದು ಸಮಾನತೆ ಮತ್ತು ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಸನಾತನ ಎಂಬುದು ಶಾಶ್ವತತೆಯಾಗಿದೆ. ಅದನ್ನು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದರು.
ಇದನ್ನೂ ಓದಿ: ಸನ್ನಡತೆ ಅಡಿ ಸ್ಫೋಟ ರೂವಾರಿ ಉಗ್ರನ ಬಿಡುಗಡೆಗೆ ಸರ್ಕಾರ ಸಿದ್ಧತೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ