
ಪುಣೆ[ಮಾ.09]: ಸ್ಯಾನಿಟರಿ ಪ್ಯಾಡ್‌ಗಳನ್ನು ತಯಾರು ಮಾಡುವ ಕಂಪನಿಗಳು ಮುಂದಿನ ವರ್ಷದ ಜನವರಿಯಿಂದ ವಿಲೇವಾರಿ ಬ್ಯಾಗ್‌ಗಳನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ನಿಮಿತ್ತ ಪುಣೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪದೇ ಪದೆ ಮನವಿ ಮಾಡಿದ ಹೊರತಾಗಿಯೂ ಸ್ಯಾನಿಟರಿ ಪ್ಯಾಡ್ ತಯಾರಕರು ಪರಿಸರ ಸ್ನೇಹಿ ಬ್ಯಾಗ್‌ಗಳನ್ನು ಒದಗಿಸುತ್ತಿಲ್ಲ. 2021 ಜ.1ರಿಂದ ಪರಿಸರ ಪರಿಸರ ಸ್ನೇಹಿ ಬ್ಯಾಗ್‌ಗಳನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದರು.
ಇದೇ ವೇಳೆ ನಗರ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸ್ವಚ್ಛತಾ ನಿಯಮಗಳನ್ನು ಹಳ್ಳಿಗಳಲ್ಲೂ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ