ಇಂದು ಸುಪ್ರೀಂಕೋರ್ಟ್‌ ಸಿಜೆಐ ಆಗಿ ನ್ಯಾ| ಸಂಜೀವ್ ಖನ್ನಾ ಶಪಥ ಸ್ವೀಕಾರ

By Kannadaprabha News  |  First Published Nov 11, 2024, 9:28 AM IST

ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ತೀರ್ಪು ಪ್ರಕಟಿಸಿದ್ದ ನ್ಯಾ| ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ನವದೆಹಲಿ: ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ| ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ದೌಪದಿ ಮುರ್ಮು ಅವರು ಬೆಳಗ್ಗೆ 10 ಗಂಟೆಗೆ ನಡೆಯುವ ಶಪಥ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯ ಮೂರ್ತಿಗಳಾದ ಸಂಜೀವ್ ಅವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ನಿರ್ಗಮಿತ ನ್ಯಾಯಮೂರ್ತಿಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ. ನ್ಯಾ. ಖನ್ನಾ ಅವರ ತಂದೆ ದೇವ್‌ರಾಜ್ ಖನ್ನಾ ಕೂಡ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರು. ಅವರ ಚಿಕ್ಕಪ್ಪ ಎಚ್.ಆರ್.ಖನ್ನಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.

Tap to resize

Latest Videos

ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಯೋಧ ಹುತಾತ್ಮ
ಜಮ್ಮು: ಜಮ್ಮು ಕಾಶ್ಮೀರದ ಕಿಶ್‌ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಉಗ್ರರು ಮತ್ತು ಸೇನೆಯ ನಡುವೆ ಭಾನುವಾರ ನಡೆದ ಗುಂಡಿನ ಚಕಮಕಿ ವೇಳೆ ಜೂನಿಯ‌ರ್ ಕಮೀಷನ್ಸ್ ಆಫೀಸ‌ರ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರೆ ಮೂವರು ಯೋಧರು ಗಾಯ ಗೊಂಡಿದ್ದಾರೆ. ಇತ್ತೀಚೆಗೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಹತ್ಯೆಗೈದ ಉಗ್ರರು ಇಲ್ಲಿನ ಅರಣ್ಯದಲ್ಲಿ ಅಡಗಿರುವ ಮಾಹಿತಿ ಅನ್ವಯ ಸೇನೆ ಕಾರ್ಯಾಚರಣೆ ನಡೆಸಿದ ವೇಳೆ, ಎರಡೂ ಬಣಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಸುಬೇದಾರ್ ರಾಕೇಶ್ ಕುಮಾರ್ ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ಸ್ಥಳದಲ್ಲಿ 3- 4 ಉಗ್ರರು ಸಿಕ್ಕಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.

click me!