ಸಾವರ್ಕರ್‌ ವಿಷಯ ಕಾಂಗ್ರೆಸ್‌ಗೆ ತಿರುಗುಬಾಣವಾಗುತ್ತೆ: ಮೊಮ್ಮಗ ರಂಜಿತ್‌

Published : Jun 17, 2023, 07:30 AM IST
ಸಾವರ್ಕರ್‌ ವಿಷಯ ಕಾಂಗ್ರೆಸ್‌ಗೆ ತಿರುಗುಬಾಣವಾಗುತ್ತೆ: ಮೊಮ್ಮಗ ರಂಜಿತ್‌

ಸಾರಾಂಶ

ಅಧ್ಯಾಯವನ್ನು ತೆಗದುಹಾಕುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ. ನೀವು ಇದನ್ನು ಹೆಚ್ಚು ತಡೆದಷ್ಟು ಅದು ಹೆಚ್ಚಾಗಿ ಮರುಕಳಿಸುತ್ತದೆ. ಪ್ರತಿಯೊಂದು ಪ್ರಕ್ರಿಯೆಯು ಸಮಾನ ಮತ್ತು ವಿರುದ್ಧವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಇದು ಸಹಜ ಪ್ರಕ್ರಿಯೆ: ರಂಜಿತ್‌ ಸಾವರ್ಕರ್‌ 

ಪಣಜಿ(ಜೂ.17):  ಶಾಲಾ ಪಠ್ಯಪುಸ್ತಕಗಳಿಂದ ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್‌ ಅವರ ಪಠ್ಯವನ್ನು ಕೈಬಿಡುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ಕಾಂಗ್ರೆಸ್‌ಗೇ ತಿರುಗುಬಾಣವಾಗಲಿದೆ ಎಂದು ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ರಂಜಿತ್‌ ‘ಪಠ್ಯದಿಂದ ಸಾವರ್ಕರ್‌ ಅಧ್ಯಾಯಗಳನ್ನು ಅಳಿಸಿಹಾಕುವ ಮೂಲಕ ವಿದ್ಯಾರ್ಥಿಗಳು ಸಾವರ್ಕರ್‌ ಬಗ್ಗೆ ಕಲಿಯುವ ಅವಕಾಶ ಕಸಿದುಕೊಳ್ಳಬಹುದು ಎಂದು ಕಾಂಗ್ರೆಸ್‌ ಯೋಚಿಸಿರಬಹುದು. ಆದರೆ ವಿದ್ಯಾರ್ಥಿಗಳು ತುಂಬಾ ತೀಕ್ಷ್ಣರಾಗಿದ್ದಾರೆ. ಸವರ್ಕರ್‌ ಕುರಿತು ಸಾಕಷ್ಟು ವಿಷಯಗಳು ಸಾಮಾಜಿಕ ಮಾಧ್ಯಮದಲ್ಲಿ ಲಭ್ಯವಿವೆ. ಸಾವರ್ಕರ್‌ ಅವರ ಬರಹಗಳನ್ನು ‘ಸಾವರ್ಕರ್‌ ಸ್ಮಾರಕ’ ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ಅವುಗಳನ್ನು ನಾವು ಕನ್ನಡದಲ್ಲೂ ಪ್ರಕಟಿಸಲಿದ್ದೇವೆ’ ಎಂದಿದ್ದಾರೆ. ಅಲ್ಲದೇ ‘ಅಧ್ಯಾಯವನ್ನು ತೆಗದುಹಾಕುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ. ನೀವು ಇದನ್ನು ಹೆಚ್ಚು ತಡೆದಷ್ಟು ಅದು ಹೆಚ್ಚಾಗಿ ಮರುಕಳಿಸುತ್ತದೆ. ಪ್ರತಿಯೊಂದು ಪ್ರಕ್ರಿಯೆಯು ಸಮಾನ ಮತ್ತು ವಿರುದ್ಧವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಇದು ಸಹಜ ಪ್ರಕ್ರಿಯೆ’ ಎಂದಿದ್ದಾರೆ.

ಸಾವರ್ಕರ್‌, ಹೆಗ್ಡೇವಾರ್‌ ಪಾಠ ಕೈಬಿಟ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಸಚಿವ ಸುನಿಲ್‌ ಕಿಡಿ

ಕರ್ನಾಟಕ ಸರ್ಕಾರವು ಈ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿನ 6 ರಿಂದ 10 ನೇ ತರಗತಿಯ ಶಾಲಾ ಮಕ್ಕಳ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಅನುಮೋದನೆ ನೀಡಿದ್ದು ಪಠ್ಯದಿಂದ ಆರ್‌ಎಸ್‌ಎಸ್‌ ಸ್ಥಾಪಕ ಕೆ.ಬಿ.ಹೆಡಗೇವಾರ್‌ ಮತ್ತು ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್‌ ಅವರ ಅಧ್ಯಾಯಗಳನ್ನು ತೆಗೆದು ಹಾಕಲು ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ