ಏಕಕಾಲಕ್ಕೆ ದಾಖಲೆ 8 ಹೈಕೋರ್ಟ್ ಸಿಜೆಗಳ ನೇಮಕಕ್ಕೆ ಶಿಫಾರಸು

By Kannadaprabha NewsFirst Published Sep 18, 2021, 12:15 PM IST
Highlights
  • 8 ನ್ಯಾಯಾಧೀಶರ ಹೆಸರುಗಳನ್ನು ಶಿಫಾರಸು
  • ನ್ಯಾ. ರಿತು ರಾಜ್‌ ಅವಸ್ಥಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ?

ನವದೆಹಲಿ(ಸೆ.18): ಕರ್ನಾಟಕ ಸೇರಿದಂತೆ ವಿವಿಧ ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಲು ಸುಪ್ರೀಂ ಕೋರ್ಟ್‌ನ ಕೊಲಿಜಿಯಂ 8 ನ್ಯಾಯಾಧೀಶರ ಹೆಸರುಗಳನ್ನು ಶಿಫಾರಸು ಮಾಡಿದೆ. ಈ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಅಂಗೀಕರಿಸಿದರೆ ಹಾಲಿ ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಾಧೀಶರಾಗಿರುವ ನ್ಯಾ. ರಿತು ರಾಜ್‌ ಅವಸ್ಥಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕವಾಗಲಿದ್ದಾರೆ.

ಉಳಿದಂತೆ ಅಲಹಾಬಾದ್‌, ಕಲ್ಕತಾ, ತೆಲಂಗಾಣ, ಮೇಘಾಲಯ, ಗುಜರಾತ್‌, ಮಧ್ಯಪ್ರದೇಶ, ಆಂಧ್ರಪ್ರದೇಶ ರಾಜ್ಯಗಳಿಗೆ ನೂತನ ಸಿಜೆಗಳ ಹೆಸರು ಶಿಫಾರಸು ಮಾಡಲಾಗಿದೆ. ಈ ಪೈಕಿ ಆರ್‌.ವಿ.ಮಳಿಮಠ್‌ ಅವರ ಹೆಸರನ್ನು ಮಧ್ಯಪ್ರದೇಶಕ್ಕೆ ಶಿಫಾರಸು ಮಾಡಲಾಗಿದೆ. ಇನ್ನು ಕರ್ನಾಟಕ ಹೈಕೋರ್ಟ್‌ನ ಹಾಲಿ ಹಂಗಾಮಿ ಸಿಜೆ ಸತೀಶ್‌ ಚಂದ್ರ ಶರ್ಮಾ ಅವರ ಹೆಸರು ತೆಲಂಗಾಣ ಸಿಜೆ ಆಗಿ ಶಿಫಾರಸು ಮಾಡಲಾಗಿದೆ.

ಸಾಮಾನ್ಯ ಜನರು ಮೋದಿ ವಿರುದ್ಧ ರಾಹುಲ್‌ರನ್ನು ಒಪ್ಪುವುದಿಲ್ಲ ಯಾಕೆ..?

27 ಹೈಕೋರ್ಟ್ ನ್ಯಾಯಾಧೀಶರನ್ನು ಇತರ ಹೈಕೋರ್ಟ್‌ಗಳಿಗೆ ವರ್ಗಾಯಿಸಲು ಶಿಫಾರಸು ಮಾಡಲು ಅವರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಪುನರ್ರಚನೆ ಮತ್ತು ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಯು ಮ್ಯಾರಥಾನ್ ಸಭೆಗಳ ನಂತರ ನಡೆದಿರುವ ಬೆಳವಣಿಗೆಯಾಗಿದೆ ಅನ್ನಲಾಗಿದೆ. ಈ ಸಂಬಂಧ ಸಭೆಗಳು ನಡೆದಿವೆ.

ನ್ಯಾಯಾಧೀಶರ ಹೆಸರುಗಳು ಮತ್ತು ವಿವರಗಳನ್ನು ಒಳಗೊಂಡ ಕೊಲಿಜಿಯಂ ನಿರ್ಧಾರಗಳನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.

click me!