ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಜಾಮೀನು; ಮುಂದೇನು?

By Suvarna NewsFirst Published Nov 11, 2020, 5:12 PM IST
Highlights

ಅರ್ನಾಬ್ ಗೋಸ್ವಾಮಿಗೆ ಜಾಮೀನು/ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್/ ಆತ್ಮಹತ್ಯೆ ಪ್ರಕರಣಕ್ಕೆ ಪ್ರೇರಣೆ ನೀಡಿದ್ದ ಆರೋಪದಲ್ಲಿ ಬಂಧನವಾಗಿತ್ತು/. ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ಸುಪ್ರೀಂ ಮೊರೆ ಹೋಗಿದ್ದ ಅರ್ನಾಬ್

ನವದೆಹಲಿ( ನ. 11)  2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಕೇಸಿಗೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ.

ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ಅರ್ನಬ್ ಸುಪ್ರೀಂ ಮೆಟ್ಟಿಲು ಏರಿದ್ದರು.  ಅರ್ನಬ್ ಸೇರಿದಂತೆ ಉಳಿದ ಆರೋಪಿಗಳಿಗೂ ಮಧ್ಯಂತರ ಜಾಮೀನು ಸಿಕ್ಕಿದೆ.ಆದೇಶವನ್ನು ತಕ್ಷಣವೇ ಪಾಲಿಸಲು ಮುಂಬೈ  ಪೊಲೀಸರಿಗೆ  ನ್ಯಾಯಾಲಯ ನಿರ್ದೇಶನ ನೀಡಿದೆ.

ಯಾವ ಪ್ರಕರಣದಲ್ಲಿ ಅರ್ನಾಬ್ ಬಂಧನ?

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ಪೀಠ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.

ನಾವು ಅನೇಕ ಪ್ರಕರಣಗಳನ್ನು ನೋಡುತ್ತಿದ್ದೇವೆ, ಹೈಕೋರ್ಟ್ ಗಳು ಜನರ ವೈಯಕ್ತಿಕ ಸ್ವಾತಂತ್ರ್ಯ ಕಾಪಾಡುವಲ್ಲಿ ವಿಫಲವಾಗುತ್ತಿವೆ ಎಂಬ ಅಭಿಪ್ರಾಯವನ್ನು ಇದೇ ವೇಳೆ ಸುಪ್ರೀಂ ಕೋರ್ಟ್ ಹೇಳಿದೆ.

click me!