ಕ್ಷಮೆ ಕೇಳಿ : ಯೂಟ್ಯೂಬರ್ಸ್‌ಗೆ ಸುಪ್ರೀಂ ಆದೇಶ

Kannadaprabha News   | Kannada Prabha
Published : Aug 26, 2025, 03:34 AM IST
Samay Raina

ಸಾರಾಂಶ

ಅಂಗವಿಕಲರನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ವಿವಾದಿತ ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದ ಆಯೋಜಕ ಹಾಗೂ ಯೂಟ್ಯೂಬರ್‌ ಸಮಯ್ ರೈನಾ ಸೇರಿದಂತೆ ಐವರು ಸಾಮಾಜಿಕ ಜಾಲತಾಣ ಪ್ರಭಾವಿಗಳಿಗೆ ಪಾಡ್‌ಕಾಸ್ಟ್ ಅಥವಾ ಶೋ ಮೂಲಕ ಬಹಿರಂಗವಾಗಿ ಕ್ಷಮೆ ಕೋರುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ನವದೆಹಲಿ : ಅಂಗವಿಕಲರನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ವಿವಾದಿತ ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದ ಆಯೋಜಕ ಹಾಗೂ ಯೂಟ್ಯೂಬರ್‌ ಸಮಯ್ ರೈನಾ ಸೇರಿದಂತೆ ಐವರು ಸಾಮಾಜಿಕ ಜಾಲತಾಣ ಪ್ರಭಾವಿಗಳಿಗೆ ಪಾಡ್‌ಕಾಸ್ಟ್ ಅಥವಾ ಶೋ ಮೂಲಕ ಬಹಿರಂಗವಾಗಿ ಕ್ಷಮೆ ಕೋರುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಅಂಗವಿಕಲರು ಮತ್ತು ಎಸ್‌ಎಂಎ ಕಾಯಿಲೆಯಿಂದ ಬಳಲುತ್ತಿರುವವರನ್ನು ಈ ಐವರು ಗೇಲಿ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್‌ಮಲ್ಯ ಬಾಗ್ಚಿ ಅವರ ಪೀಠ, ‘ಇತರ ಸಮುದಾಯಗಳ ಭಾವನೆಗಳಿಗೆ ನೋವುಂಟುಮಾಡುವ ವಾಣಿಜ್ಯಾತ್ಮಕ ಭಾಷಣಕ್ಕೆ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಅನ್ವಯಿಸುವುದಿಲ್ಲ.

ಇವರು ತಮ್ಮ ಪಾಡ್‌ಕಾಸ್ಟ್‌ ಅಥವಾ ಶೋ ಮೂಲಕ ಅಂಗವಿಕಲರ ಕ್ಷಮೆಯಾಚಿಸಬೇಕು’ ಎಂದು ಸೂಚಿಸಿತು. ಇದೇ ವೇಳೆ, ಅಂಗವಿಕಲರು, ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರನ್ನು ಅಪಹಾಸ್ಯ ಮಾಡುವ ಭಾಷಣಗಳನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ