ಖದೀಮರಿಂದ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್, ಅಸಂಬದ್ಧ ವಿಡಿಯೋ ಪೋಸ್ಟ್!

By Chethan KumarFirst Published Sep 20, 2024, 12:30 PM IST
Highlights

ಹ್ಯಾಕರ್ಸ್ ಇದೀಗ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿ ಬೇರೆ ಬೇರೆ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಭಾರತದ ಸರ್ವೋಚ್ಚ ನ್ಯಾಯಾಲಯದ ಚಾನೆಲ್‌ನ್ನೇ ಹ್ಯಾಕ್ ಮಾಡಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ.
 

ನವದೆಹಲಿ(ಸೆ.20) ಭಾರತದ ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ನೇರ ಪ್ರಸಾರ ಮಾಡುವ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಖದೀಮರು ದೇಶದ ಸರ್ವೋಚ್ಚ ನ್ಯಾಯಾಲಯದ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿ ಇಲ್ಲಿ ಕ್ರಿಪ್ಟೋಕರೆನ್ಸಿ ಸೇರಿದಂತೆ ಇತರ ಪ್ರಮೋಶನ್ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಈ ಮಾಹಿತಿ ತಿಳಿಯುತ್ತಿದ್ದಂತೆ ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ತಾತ್ಕಾಲಿಕ ಸ್ಥಗಿತಗೊಳಿಸಿ ಸರಿಪಡಿಸುವ ಕಾರ್ಯ ಆರಂಭಿಸಿದೆ.

ಸುಪ್ರೀಂ ಕೋರ್ಟ್ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ವಿಚಾರಣೆಗಳ ನೇರ ಪ್ರಸಾರ ಮಾಡುತ್ತಿದೆ. ಇತ್ತೀಚೆಗೆ ಕೋಲ್ಕತಾ ಆರ್‌ಜಿ ಕಾರ್ ಆಸ್ಪತ್ರೆ ಪ್ರಕರಣದ ವಿಚಾರಣೆಯನ್ನು ನೇರ ಪ್ರಸಾರ ಮಾಡಿತ್ತು. ಇನ್ನು ಇತರ ವಿಚಾರಣೆಗಳ ವಿಡಿಯೋಗಳು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್‌ನಲ್ಲಿ ಲಭ್ಯವಿದೆ. ಆದರೆ ಖದೀಮರು ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ್ದಾರೆ. ಬಳಿಕ ಅಮೆರಿಕದ ಮೂಲದ ರಿಪ್ಪಲ್ ಲ್ಯಾಬ್ಸ್ ಜಾಹೀರಾತು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ಈ ಪೈಕಿ ಕ್ರಿಪ್ಟೋಕರೆನ್ಸಿ, ಎಕ್ಸ್ಆರ್‌ಪಿ ಸೇರಿದಂತೆ ಇತರ ಕೆಲ ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ.

Latest Videos

CJI ನಿವಾಸದಲ್ಲಿ PM ಮೋದಿ ಗಣಪತಿ ಪೂಜೆ: ನ್ಯಾಯಾಂಗ ಸ್ವಾತಂತ್ರ್ಯದ ಬಗ್ಗೆ ಜೈಸಿಂಗ್ ಕಳವಳ

ಹ್ಯಾಕರ್ಸ್ ತಂಡ ಈ ಕೃತ್ಯ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ರಿಪ್ಪಲ್ ಲ್ಯಾಬ್ಸ್ ವಿಡಿಯೋಗಳನ್ನು ಎಲ್ಲೆಡೆ ಪೋಸ್ಟ್ ಮಾಡುತ್ತಿರುವ ಕುರಿತು ಇತ್ತೀಚೆಗೆ ಯೂಟ್ಯೂಬ್ ವಿರುದ್ಧವೇ ಕಾನೂನು ಹೋರಾಟ ಆರಂಭಿಸಿದೆ. ಹಲವು ಹ್ಯಾಕರ್ಸ್ ತಮ್ಮ ಚಾನೆಲ್ ವಿಡಿಯೋಗಳನ್ನು ಬೇರೆ ಪ್ಲಾಟ್‌ಫಾರ್ಮ್‌ಗಳಲ್ಲಿ ಪೋಸ್ಟ್ ಮಾಡುತ್ತಿರುವ ಕುರಿತು ದೂರು ನೀಡಿದೆ.  

ಸುಪ್ರೀಂ ಕೋರ್ಟ್ ತನ್ನ ಯೂಟ್ಯೂಬ್ ಚಾನೆಲ್ ಸುರಕ್ಷಿತಾವಾಗಿರಿಸಲು ಹಲವು ತಾಂತ್ರಿಕ ತಂಡಗಳು ಕೆಲಸ ಮಾಡುತ್ತಿದೆ. ಉತ್ತಮ ಟೆಕ್ನಿಕಲ್ ಸಪೋರ್ಟ್ ಇದ್ದರೂ ಇದೀಗ ಹ್ಯಾಕರ್ಸ್ ಯೂಟ್ಯೂಬ್ ಚಾನೆಲ್ ಹ್ಯಾಕ್ ಮಾಡಿದ್ದಾರೆ.ಹಲವು ಬಾರಿ ಪ್ರಮುಖ ಸರ್ಕಾರಿ ಸಂಸ್ಥೆಗಳ ಸಾಮಾಜಿಕ ಜಾಲತಾಣಗಳನ್ನೂ ಹ್ಯಾಕ್ ಮಾಡಿದ ಉದಾಹರಣೆಗಳಿವೆ. 

ತಾಂತ್ರಿಕ ತಂಡ ಸುಪ್ರೀಂ ಕೋರ್ಟ್ ಚಾನೆಲ್ ತಾತ್ಕಾಲಿಕ ಸ್ಥಗಿತಗೊಳಿಸಿದೆ. ಈ ಕುರಿತು ಬ್ಯಾಕ್ಎಂಡ್ ಟೀಮ್ ಕಾರ್ಯಪ್ರವೃತ್ತರಾಗಿದ್ದು, ಶೀಘ್ರದಲ್ಲೇ ತಾಂತ್ರಿಕ ಸಮಸ್ಯೆ ಬಗೆಹರಿಸಿ ಎಂದಿನಂತೆ ಯೂಟ್ಯೂಬ್ ಚಾನೆಲ್ ಕಾರ್ಯಪ್ರವೃತ್ತಗೊಳ್ಳಲಿದೆ. ಸದ್ಯ ಸುಪ್ರೀಂ ಕೋರ್ಟ್ ಯೂಟ್ಯೂಬ್ ಚಾನೆಲ್ ಲಭ್ಯವಿಲ್ಲ. ಇಲ್ಲಿರುವ ಯಾವುದೇ ವಿಡಿಯೋಗಳು ವೀಕ್ಷಣೆ ಸದ್ಯಕ್ಕೆ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ಚಾನೆಲ್‌ಗೆ ಕನ್ನ ಹಾಕಿರುವ ಘಟನೆ ಸೈಬರ್ ಕ್ರೈಮ್ ಆತಂಕ ಹೆಚ್ಚಿಸಿದೆ.

ಸುಪ್ರೀಂಕೋರ್ಟ್‌ಗೆ 75 ವರ್ಷ: ಹೊಸ ಧ್ವಜ, ಲಾಂಛನ ಅನಾವರಣ
 

click me!