ಪ್ರಧಾನಿ ಮೋದಿ ಅವರ ಜನಪ್ರಿಯ ರೇಡಿಯೋ ಕಾರ್ಯಕ್ರಮವಾದ ಮನ್ ಕಿ ಬಾತ್‌ಗೆ ಗೈರು ಹಾಜರಾದ ಕಾರಣಕ್ಕೆ ಡೆಹ್ರಾಡೂನ್‌ನಲ್ಲಿ ಶಾಲಾ ಮಕ್ಕಳಿಗೆ ದಂಡ ವಿಧಿಸಲಾಗಿದೆ.
ನವದೆಹಲಿ (ಮೇ.5): ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮವನ್ನು ಕೇಳಲು ಚಕ್ಕರ್ ಹಾಕಿದ ವಿದ್ಯಾರ್ಥಿಗಳಿಂದ ಶಾಲಾ ಆಡಳಿತ ಮಂಡಳಿ ತಲಾ 100 ರೂಪಾಯಿ ದಂಡ ವಸೂಲಿ ಮಾಡಿದೆ ಎನ್ನುವ ಆರೋಪ ಕೇಳಿ ಬಂದಿದೆ. ಡೆಹ್ರಾಡೂನ್‌ನ ಶಾಲೆಯ ಮೇಲೆ ಈ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಕುರಿತು ಶಾಲಾ ಆಡಳಿತ ಮಂಡಳಿಯು ಶಾಲೆಯ ವಾಟ್ಸಾಪ್ ಗ್ರೂಪ್‌ನಲ್ಲಿ ಆದೇಶ ಹೊರಡಿಸಿದೆ. ಪಾಲಕರು ಮತ್ತು ವಿದ್ಯಾರ್ಥಿಗಳ ಹಕ್ಕುಗಳ ರಾಷ್ಟ್ರೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಆರಿಫ್ ಖಾನ್ ಅವರು ಡೆಹ್ರಾಡೂನ್ ಮುಖ್ಯ ಶಿಕ್ಷಣಾಧಿಕಾರಿಗೆ ಪತ್ರ ಬರೆದು ಈ ವಿಷಯದಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶಿಕ್ಷಣ ಇಲಾಖೆ ಶಾಲೆಗೆ ಕೂಡ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ. 'ಭಾನುವಾರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಶಾಲೆಗೆ ಬಾರದ ಮಕ್ಕಳಿಗೆ 100 ರೂಪಾಯಿ ದಂಡ ಅಥವಾ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸುವಂತೆ ಡೆಹ್ರಾಡೂನ್‌ನ ಜಿಆರ್‌ಡಿ ನಿರಂಜನ್‌ಪುರ ಅಕಾಡೆಮಿ ಆದೇಶ ಹೊರಡಿಸಿದೆ' ಎಂದು ಆರಿಫ್ ಖಾನ್ ತಿಳಿಸಿದ್ದಾರೆ. ಅದಲ್ಲದೆ, ಈ ಆದೇಶದ ಸ್ಕ್ರೀನ್ ಶಾಟ್‌ಅನ್ನು ಕೂಡ ಹಂಚಿಕೊಂಡಿದ್ದಾರೆ.
ಮುಖ್ಯ ಶಿಕ್ಷಣಾಧಿಕಾರಿ ಪ್ರದೀಪ್ ಕುಮಾರ್ ಈ ಕುರಿತಾಗಿ ಮಾತನಾಡಿದ್ದು, ಶಾಲೆಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನದೊಳಗೆ ಶಾಲೆ ತನ್ನ ನಿಲುವು ಮಂಡಿಸದಿದ್ದರೆ ಶಾಲೆಯ ಪರವಾಗಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿರುವುದು ಖಚಿತವಾಗತ್ತದೆ. ಇದಾದ ನಂತರ ಇಲಾಖೆ ಕ್ರಮ ಕೈಗೊಳ್ಳಲಿದೆ’ ಎಂದರು.ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ಏಪ್ರಿಲ್ 30 ರಂದು 100 ಸಂಚಿಕೆಗಳನ್ನು ಪೂರೈಸಿದೆ. 100 ನೇ ಸಂಚಿಕೆಯನ್ನು ದೇಶಾದ್ಯಂತ ಶಾಲೆಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಬಿತ್ತರ ಮಾಡಲಾಗಿತ್ತು.
ಇಸುದನ್ ಗಧ್ವಿ ವಿರುದ್ಧ ಕೇಸ್:ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮಕ್ಕಾಗಿ ಕೇಂದ್ರ ಸರ್ಕಾರವು ತೆರಿಗೆದಾರರ 830 ಕೋಟಿ ರೂಪಾಯಿ ಹವನ್ನು ಖರ್ಚು ಮಾಡಿದೆ ಎಂದು ಹೇಳಿದ್ದ ಆಮ್ ಆದ್ಮಿ ಪಕ್ಷದ ಗುಜರಾತ್ ರಾಜ್ಯ ಅಧ್ಯಕ್ಷ ಇಸುದನ್ ಗಧ್ವಿ ವಿರುದ್ಧ ಅಮ್ದಾವದ್ ಕ್ರೈಂ ಬ್ರಾಂಚ್ನಲ್ಲಿ ಪ್ರಕರಣ ದಾಖಲಾಗಿದೆ. 'ಮನ್ ಕೀ ಬಾತ್‌ನ ಒಂದು ದಿನದ ಕಾರ್ಯಕ್ರಮಕ್ಕೆ ಅಂದಾಜು 8.3 ಕೋಟಿ ರೂಪಾಯಿ ಖರ್ಚಾಗುತ್ತದೆ. ಇಲ್ಲಿಯವರೆಗೂ ಆಗಿರುವ 100 ಸಂಚಿಕೆಗಳಿಗೆ ಕೇಂದ್ರ ಸರ್ಕಾರ ತೆರಿಗೆದಾರರ 830 ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಿದೆ. ಇದು ಬಹಳ ದುಬಾರಿಯಾದ ಕಾರ್ಯಕ್ರಮ. ಬಿಜೆಪಿ ಕಾರ್ಯಕರ್ತರು ತಮ್ಮ ಪ್ರತಿಭಟನೆಯನ್ನು ದಾಖಲಿಸಬೇಕು ಏಕೆಂದರೆ ಅವರು ಹೆಚ್ಚಾಗಿ ಈ ಕಾರ್ಯಕ್ರಮವನ್ನು ಕೇಳುತ್ತಾರೆ, ”ಎಂದು ಏಪ್ರಿಲ್ 28 ರಂದು ಗಾಧ್ವಿ ಟ್ವೀಟ್ ಮಾಡಿದ್ದಾರೆ.
ಮಹಿಳಾ ಸಬಲೀಕರಣ, ಆರೋಗ್ಯದಲ್ಲಿ ಸುಧಾರಣೆ, ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಬಿಲ್ ಗೇಟ್ಸ್ ಮೆಚ್ಚುಗೆ!
ಆದರೆ, ಆ ಟ್ವೀಟ್ ಅನ್ನು ಗಾಧ್ವಿ ಡಿಲೀಟ್ ಮಾಡಿದ್ದಾರೆ. ಆದರೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು (ಬಿಜೆಪಿ) ಇಂತಹ "ಸುಳ್ಳು" ಎಫ್‌ಐಆರ್‌ಗಳ ಮೂಲಕ ತನ್ನ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಆರೋಪಿಸಿದೆ.
ಮನ್ ಕೀ ಬಾತ್' 100ನೇ ಸಂಚಿಕೆ: ವಿವಿಧ ಕ್ಷೇತ್ರದ ದಿಗ್ಗಜರಿಂದ ಪ್ರಶಂಸೆಯ ಸುರಿಮಳೆ