ಕೆಲ ರಾಷ್ಟ್ರ ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ನೀಡುತ್ತಿದೆ, ಪಾಕ್ ಪ್ರಧಾನಿ ಸಮ್ಮುಖದಲ್ಲಿಯೇ ಗುಡುಗಿದ ಮೋದಿ!

Published : Jul 04, 2023, 01:42 PM ISTUpdated : Jul 04, 2023, 02:20 PM IST
ಕೆಲ ರಾಷ್ಟ್ರ ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ನೀಡುತ್ತಿದೆ, ಪಾಕ್ ಪ್ರಧಾನಿ ಸಮ್ಮುಖದಲ್ಲಿಯೇ ಗುಡುಗಿದ ಮೋದಿ!

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ ಹೆಸರು ಹೇಳದೆ ಪಾಕ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ಕೆಲ ದೇಶಗಳು ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ನೀಡುತ್ತಿದೆ ಎಂದು ಮೋದಿ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಹೇಳಿದ್ದಾರೆ.

ನವದೆಹಲಿ(ಜು.04) ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆ(SCO Summit)ಯಲ್ಲಿ ಚೀನಾ, ರಷ್ಯಾ, ಪಾಕಿಸ್ತಾನ ಸೇರಿದಂತೆ ಹಲವು ಪ್ರಮುಖ ರಾಷ್ಟ್ರಗಳು ಪಾಲ್ಗೊಂಡಿದೆ. ವರ್ಚುವಲ್ ಆಗಿ ನಡೆಯುತ್ತಿರುವ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆ ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ. ಕೆಲ ದೇಶ ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ನೀಡುತ್ತಿದೆ ಎಂದು ಮೋದಿ, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಪ್ ಸಮ್ಮುಖದಲ್ಲೇ ಹೇಳಿದ್ದಾರೆ.

ಭಯೋತ್ಪಾದನೆ ದೇಶ ಮಾತ್ರವಲ್ಲ ವಿಶ್ವದ ಶಾಂತಿ ಕದಡುತ್ತದೆ. ಭಾರತ ನಿರಂತರವಾಗಿ ಭಯೋತ್ಪಾದನೆ ವಿರುದ್ಧ ಹೋರಾಟಡುತ್ತಿದೆ. ಕೆಲ ದೇಶ ಗಡಿಯಾಚನೆಗಿನ ಭಯೋತ್ಪಾದನೆಯನ್ನು ಅಸ್ತ್ರವಾಗಿ ಬಳಸುತ್ತಿದೆ.  ಭಯೋತ್ಪಾದಕರಿಗೆ ಸುರಕ್ಷಿತ ಆಶ್ರಯ ನೀಡಿ ಪೋಷಿಸುತ್ತಿದೆ. ಶಾಂಘೈ ಸಹಕಾರ ಶೃಂಗಸಭೆ ಈ ರೀತಿ ಭಯೋತ್ಪಾದನೆ ಪೋಷಿಸುವ ದೇಶವನ್ನು ಖಂಡಿಸುತ್ತದೆ. ಇದಕ್ಕೆ SCO ರಾಷ್ಟ್ರಗಳು ಅವಕಾಶ ನೀಡುವುದಿಲ್ಲ ಎಂದು ಮೋದಿ ಹೇಳಿದ್ದಾರೆ.

ಪಪುವಾ ನ್ಯೂಗಿನಿಯಾ ಪ್ರಧಾನಿ, ಮೋದಿ ಕಾಲಿಗೆ ಬಿದ್ದಿದ್ದೇಕೆ !?: ಮೋದಿ ಆಟೋಗ್ರಾಫ್ ಕೇಳಿದ ಅಮೆರಿಕಾ, ಆಸ್ಟ್ರೇಲಿಯಾ ಪ್ರಧಾನಿಗಳು !

SCO ಭಾರತಕ್ಕೆ ವಿಸ್ತೃತ ಕುಟಂಬವಾಗಿದೆ. ಸುರಕ್ಷತೆ, ಅತ್ಯುತ್ತಮ ಸಹಕಾರ, ದ್ವಿಪಕ್ಷೀಯ ಸಂಬಂಧ, ಆರ್ಥಿಕ ಅಭಿವೃದ್ಧಿ, ಸಾರ್ವಭೌಮತ್ವ, ಪ್ರಾದೇಶಿಕ ಗೌರವ, ಪರಿಸರ ಸಂರಕ್ಷಣೆಗಳು ನಮ್ಮ ಆಧಾರ ಸ್ತಂಭಗಳಾಗಿದೆ. ಆದರೆ ಇದೇ ಭಾರತ ಭಯೋತ್ಪಾದನೆಯನ್ನು ಎಂದಿಗೂ ಸಹಿಸುವುದಿಲ್ಲ. ಭಯೋತ್ಪಾದನೆಯನ್ನು ಮಟ್ಟ ಹಾಕಲು ಭಾರತ ಸತತ ಪ್ರಯತ್ನ ಮಾಡಲಿದೆ ಎಂದು ಮೋದಿ ಹೇಳಿದ್ದಾರೆ.

ವರ್ಚುವಲ್ ಸಭೆಯಲ್ಲಿ ಮೋದಿ,  ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಸಮ್ಮುಖದಲ್ಲಿ ಈ ಮಾತುಗಳನ್ನಾಡಿದ್ದಾರೆ. ಮೋದಿ ಪ್ರಖರ ಮಾತುಗಳಿಂದ ಪಾಕಿಸ್ತಾನಕ್ಕೆ ಇರಿಸು ಮುರಿಸಾಗಿದೆ. ಭಯೋತ್ಪಾದನೆ ವಿಚಾರದಲ್ಲಿ ಭಾರತ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅತ್ಯಂತ ಕಠು ಶಬ್ದಗಳಿಂದ ಟೀಕಿಸಿದೆ. ಇಷ್ಟೇ ಅಲ್ಲ ಹಲವು ವೇದಿಕೆಗಳಲ್ಲಿ ಪಾಕಿಸ್ತಾನವನ್ನು ಗುರಿಯಾಗಿಸಿ ಮಾತನಾಡಿದೆ. ಪ್ರತಿ ಭಾರಿ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸಿದೆ.

ಜಿ7 ಶೃಂಗಸಭೆಯಲ್ಲಿ ಪಾಕ್-ಚೀನಾಗೆ ಮೋದಿ ಖಡಕ್ ವಾರ್ನಿಂಗ್: ಉಕ್ರೇನ್ನೊಂದಿಗೆ ಮಾತುಕತೆ.. ಬೇಸರಗೊಂಡಿದೆಯಾ ರಷ್ಯಾ..?

ಮೋದಿ ಅಧ್ಯಕ್ಷತೆಯಲ್ಲಿ ನಡೆದ ಶಾಂಘೈ ಸಹಕಾರ ಶೃಂಗಸಭೆ ವರ್ಚುವಲ್ ಸಭೆಯಲ್ಲ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಸೇರಿದಂತೆ ಕಜಕಸ್ತಾನ್‌, ಕಿರ್ಗಿಸ್ತಾನ್‌, ತಜಕಿಸ್ತಾನ್‌ ಮತ್ತು ಉಜ್ಬೇಕಿಸ್ತಾನ್‌ದ ಮುಖ್ಯಸ್ಥರು ಭಾಗಿಯಾಗಿದ್ದರು.

ಶಾಂಘೈ ಸಹಕಾರ ಸಂಘ 2001ರಲ್ಲಿ ಸ್ಥಾಪನೆಯಾಗಿದ್ದು, ಭಾರತ ಮತ್ತು ಪಾಕಿಸ್ತಾನಗಳು 2017ರಲ್ಲಿ ಈ ಸಂಘಕ್ಕೆ ಸೇರ್ಪಡೆಯಾಗಿದ್ದವು.ರಷ್ಯ ಹಾಗೂ ಉಕ್ರೇನ್ ಯುದ್ಧದ ಬಳಿಕ ಹಲವು ಸಹಕಾರ ಶೃಂಗಸಭೆ ನಡೆದಿದೆ. ಪ್ರಮುಖ ಸದಸ್ಯ ರಾಷ್ಟ್ರವಾಗಿರುವ ರಷ್ಯಾ ಯಾವುದೇ ಸಭೆಯಲ್ಲಿ ಪಾಲ್ಗೊಂಡಿಲ್ಲ. ಯುುದ್ಧದ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸಹಕಾರ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana