ಬಾಬ್ರಿ ಮಸೀದಿ ಧ್ವಂಸ; ನ್ಯಾಯ ಎಲ್ಲಿದೆ? ಎಂದ SDPI ಮುಖಂಡನ ಬಂಧನ

Published : Sep 30, 2020, 05:39 PM ISTUpdated : Sep 30, 2020, 06:00 PM IST
ಬಾಬ್ರಿ ಮಸೀದಿ ಧ್ವಂಸ; ನ್ಯಾಯ ಎಲ್ಲಿದೆ? ಎಂದ SDPI ಮುಖಂಡನ ಬಂಧನ

ಸಾರಾಂಶ

ಬಾಬ್ರಿ ಮಸೀದಿ ಧ್ವಂಸ ಆರೋಪಿಗಳ ನಿರ್ದೋಷಿ ಹಿನ್ನೆಲೆ/ ಮಂಗಳೂರಿನಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಹೇಳಿಕೆ/ ಈ ದೇಶ ಪ್ರಪಂಚದ ಎದುರು ತಲೆ ತಗ್ಗಿಸೋ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ/ ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡ್ತಿದೆ  

ಮಂಗಳೂರು(ಸೆ. 30) ಬಾಬ್ರಿ ಮಸೀದಿ ಧ್ವಂಸ ಆರೋಪಿಗಳು ನಿರ್ದೋಷಿ,ಬಾಬ್ರಿ ಮಸೀದಿ ಧ್ವಂಸ ಒಂದು ಆಕಸ್ಮಿಕ ಘಟನೆ ಎಂದು ಕೋರ್ಟ್ ತೀರ್ಪು ನೀಡಿದೆ. ಆದರೆ ಇದಕ್ಕೆ ಎಸ್‌ಡಿಪಿಐ ಅಸಮಾಧಾನ ವ್ಯಕ್ತಪಡಿಸಿದೆ.

ಮಂಗಳೂರಿನಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾತನಾಡಿ, ಈ ದೇಶ ಪ್ರಪಂಚದ ಎದುರು ತಲೆ ತಗ್ಗಿಸುವ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ. ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡುತ್ತಿದೆ.  ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.

 ಶ್ರೀರಾಮ್ ಎನ್ನುತ್ತಾ ಬಾಬ್ರಿ ಮಸೀದಿ ಧ್ವಂಸ ತೀರ್ಪು ಸ್ವಾಗತಿಸಿದ ಬಿಜೆಪಿ ಭೀ‍ಷ್ಮ

ರಾಮಮಂದಿರ ತೀರ್ಪಿನಲ್ಲೂ ಬಾಬ್ರಿ ಧ್ವಂಸ ಅಪರಾಧ ಅಂತ ಸುಪ್ರೀಂ ಕೋರ್ಟ್ ಹೇಳಿತ್ತು. ಆದರೆ ಕೋರ್ಟ್‌ ನ ಇವತ್ತಿನ ತೀರ್ಪು ದೇಶದಲ್ಲಿ ನ್ಯಾಯ ಉಳಿದಿಲ್ಲ ಅನ್ನೋವಷ್ಟರ ಮಟ್ಟಿಗೆ ನಾಚಿಗೆಕೇಡು ತಂದಿದೆ. 28 ವರ್ಷ ಕಾದರೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ ಅಂತಾದ್ರೆ ನ್ಯಾಯ ಎಲ್ಲಿದೆ? ಬಿಜೆಪಿ ಮತ್ತು ಸಂಘ ಪರಿವಾರ ಪ್ರಭುತ್ವ ಬೀರಿ ದೇಶ ಒಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. 

ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಮಾನವನ್ನು ಖಂಡಿಸಿ ಎಸ್‌ ಡಿಪಿಐ ದಕ್ಷಿಣ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿತು.

ಪ್ರತಿಭಟನಾ ನಿರತ SPDI ಪಕ್ಷದ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಚಾರ್,ಕಾರ್ಪೋರೇಟರ್ ಮುನೀಬ್ ಬೆಂಗರೆ,ಆನಂದ ಮಿತ್ತಬೈಲ್ ಮತ್ತು ಜಿಲ್ಲಾ ನಾಯಕರನ್ನು  ಈ  ವೇಳೆ ಬಂಧಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?