
ಚೆನ್ನೈ (ಜು.23): ದೇಶದ ಪ್ರಮುಖ ನಗರಗಳ ಪೈಕಿ ಎರಡೂ ಡೋಸ್ ಕೋವಿಡ್ ಲಸಿಕೆ ವಿತರಣೆಯಲ್ಲಿ ಬೆಂಗಳೂರು ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ತಮಿಳುನಾಡು ರಾಜಧಾನಿ ಚೆನ್ನೈ ಇದೆ.
ಕೋವಿನ್ ವೆಬ್‌ಸೈಟ್‌ನಲ್ಲಿ ಒದಗಿಸಲಾದ ದತ್ತಾಂಶದ ಪ್ರಕಾರ, ಚೆನ್ನೈನ 80 ಲಕ್ಷ ಜನರ ಪೈಕಿ 59.46 ಲಕ್ಷ ಜನರು ಲಸಿಕೆ ಪಡೆಯಲು ಅರ್ಹರಾಗಿದ್ದಾರೆ. ಇವರಲ್ಲಿ ಜು.20ರ ವರೆಗೆ 9.11 ಲಕ್ಷ ಜನರಿಗೆ ಎರಡೂ ಡೋಸ್ ನೀಡಲಾಗಿದೆ. ಅಂದರೆ ಒಟ್ಟು ಜನಸಂಖ್ಯೆಯಲ್ಲಿ ಶೇ.12 ಮತ್ತು ಲಸಿಕೆ ಪಡೆಯಲು ಅರ್ಹರಾದವರ ಪೈಕಿ ಶೇ.15ರಷ್ಟುಜನರಿಗೆ ಎರಡೂ ಡೋಸ್ ಲಸಿಕೆ ನೀಡಲಾಗಿದೆ.
39 ಕೋಟಿ ಮೈಲಿಗಲ್ಲು ದಾಟಿದ ಭಾರತದ ಕೋವಿಡ್ ಲಸಿಕಾ ಅಭಿಯಾನ!
ಇನ್ನು ಬೆಂಗಳೂರಿನ ಒಟ್ಟು 1.2 ಕೋಟಿ ಜನರ ಪೈಕಿ ಲಸಿಕೆ ಪಡೆಯಲು 99 ಲಕ್ಷ ಅರ್ಹತೆ ಹೊಂದಿದ್ದಾರೆ. ಈ ಪೈಕಿ 54.55 ಲಕ್ಷ ಜನರು ಮೊದಲ ಡೋಸ್ ಮತ್ತು 13.81 ಲಕ್ಷ ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಅಂದರೆ ಒಟ್ಟು ಜನಸಂಖ್ಯೆಯ ಶೇ.10 ಮತ್ತು ಲಸಿಕೆ ಪಡೆಯಲು ಅರ್ಹರಾದವರ ಪೈಕಿ ಶೇ.14ರಷ್ಟುಜನರು ಲಸಿಕೆ ಪಡೆದುಕೊಂಡಿದ್ದಾರೆ. ಈ ಮೂಲಕ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಇನ್ನು ಮುಂಬೈನಲ್ಲಿ ಒಟ್ಟು ಜನಸಂಖ್ಯೆಯ ಶೇ.8ರಷ್ಟುಮಂದಿ ಹಾಗೂ ದೆಹಲಿಯಲ್ಲಿ ಒಟ್ಟು ಜನಸಂಖ್ಯೆಯ ಶೇ.7ರಷ್ಟುಮಂದಿ ಲಸಿಕೆ ಪಡೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ